ಅಂಬಿಗರ ಚೌಡಯ್ಯ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಸಾವಿರಾರು ವರ್ಷಗಳಿಂದ ಧರ್ಮ-ದೇವರುಗಳ ಬಗೆಗೆ ಜನ ಸಮೂಹದಲ್ಲಿಕ್ಕ ಮೂಢನಂಬಿಕೆಯಗಳನ್ನೆಲ್ಲ ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರ ವಾದ, ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮೂಡಿಸಿದರು. ಧರ್ಮ-ದೇವರು ಕೇವಲ ಶ್ರೀಮಂತರ ಸೋತ್ತಾಗಿದ್ದ ಅಂದಿನ ಸಂದರ್ಭದಲ್ಲಿ ಪೂಜೆ-ಮೋಕ್ಷ ಕೇವಲ ನೇಮವಂತರ, ಬ್ರಾಹ್ಮಣರ ಗುತ್ತಿಗೆಯಾಗಿದ್ದ ಸಮಯದಲ್ಲಿ ಭಾಷ್ಯಕಾರರೌ ಹೇಳಿದ್ದೇ ಸರಿಯೆನ್ನುವ ವ್ಯವಸ್ಥೆಯಲ್ಲಿ ಚೌಡಯ್ಯ ಈ ಮೂವರನ್ನು ಕ್ರೂರ ಕರ್ಮಿಗಳೆಂದು, ಸಂದೇಹಿಗಳೆಂದು ಕಟುವಾಗಿ ಟೀಕಿಸುವುದರ ಮೂಲಕ ಇವರು ಹೋದ ದಾರಿಯಲ್ಲಿ ಯಾರೂ ಹೋಗ ಬಾರದೆಂದು ಸ್ಪಷ್ಟಪಡಿಸುತ್ತಾನೆ.