ಅರೆವಾಹಕ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಾಹಕಗಳು (Conductors) ಮತ್ತು ಅವಾಹಕಗಳ (Insulators) ನಡುವಣ ವಿದ್ಯುತ್ ವಾಹಕತೆಯನ್ನು (electrical conductivity) ಹೊಂದಿರುವ ಘನ ವಸ್ತುಗಳನ್ನು ಅರೆವಾಹಕಗಳು (ಸೆಮಿಕಂಡಕ್ಟರ್) ಎಂದು ಕರೆಯುತ್ತಾರೆ. ಇವು ವಾಹಕ ಮತ್ತು ಅವಾಹಕಗಳೆರಡರ ಗುಣಗಳ ಸಮ್ಮಿಶ್ರಣವಾಗಿವೆ. ಸಿಲಿಕಾನ್ ಮತ್ತು ಜರ್ಮೇನಿಯಂ ಬಹುವಾಗಿ ಬಳಸಲ್ಪಡುವ ಎರಡು ಪ್ರಮುಖ ಅರೆವಾಹಕಗಳು.

ಪರಿಪೂರ್ಣ ಶೂನ್ಯ ತಾಪಮಾನದಲ್ಲಿ ಈ ವಸ್ತುಗಳ ವಾಹಕತೆ ಶೂನ್ಯವಾಗಿರುತ್ತದೆ. ತಾಪಮಾನ ಹೆಚ್ಚಿದಂತೆ ಇವುಗಳ ವಾಹಕತೆ ಹೆಚ್ಚುತ್ತಾ ಹೋಗುತ್ತದೆ. ಈ ಸೆಮಿಕಂಡಕ್ಟರ್‍ಗಳಲ್ಲಿ ವೇಲೆನ್ಸ್ ಬ್ಯಾಂಡ್ ಮತ್ತು ಕಂಡಕ್ಷನ್ ಬ್ಯಾಂಡ್ ಮಧ್ಯದ ಅಂತರ ಹೆಚ್ಚಾಗಿರುತ್ತದೆ. ಆದರೆ, ಉಷ್ಣ ಹೆಚ್ಚಿದಂತೆ, ಅಂತರ ಕಡಿಮೆಯಾಗಿ, ವೇಲೆನ್ಸ್ ಬ್ಯಾಂಡ್‍ನ ( ವೇಲೆನ್ಸ್ ಪಟ್ಟಿ) ಎಲೆಕ್ಟ್ರಾನ್‍ಗಳು ಕಂಡಕ್ಷನ್ ಬ್ಯಾಂಡ್‍ಗೆ(ವಾಹಕ ಪಟ್ಟಿ) ಪಯಣಿಸಿ, ವಸ್ತುವಿಗೆ ವಾಹಕತೆ ತುಂಬಲು ಸಹಕರಿಸುತ್ತವೆ.

"http://kn.wikipedia.org/w/index.php?title=ಅರೆವಾಹಕ&oldid=375710" ಇಂದ ಪಡೆಯಲ್ಪಟ್ಟಿದೆ