ಎಸ್.ನಿಜಲಿಂಗಪ್ಪ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ರಾಷ್ಟ್ರ ನಾಯಕ ಸಿದ್ದವ್ವನಹಳ್ಳಿ ನಿಜಲಿಂಗಪ್ಪ - (ಡಿಸೆಂಬರ್ ೧೦, ೧೯೦೨ ) ಬಳ್ಳಾರಿ ಜಿಲ್ಲೆಯ ಚಿಕ್ಕಹಳ್ಳಿಯೊಂದರ ಮಧ್ಯಮವರ್ಗದ ಕುಟುಂಬವೊಂದರಲ್ಲಿ ಜನಿಸಿದ ಎಸ್. ನಿಜಲಿಂಗಪ್ಪನವರು ಶಾಂತ ಸ್ವಭಾವಕ್ಕೆ ಮತ್ತು ಸಜ್ಜನಿಕೆಗೆ ಪ್ರಸಿಧ್ಧರಾದ ದೇಶಪ್ರೇಮಿ ಮತ್ತು ರಾಜಕಾರಣಿ.

'ಎಸ್.ನಿಜಲಿಂಗಪ್ಪ'

ಪರಿವಿಡಿ

[ಬದಲಾಯಿಸಿ] ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ರಾಜಕಾರಣಿಗಳಲ್ಲಿ ಪ್ರಮುಖರು

ಇವರು ಏಕೀಕೃತ ಕರ್ನಾಟಕದ ಪ್ರಥಮ ಮುಖ್ಯಮಂತ್ರಿಯೂ ಅಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ನಿಜಲಿಂಗಪ್ಪ ನವರು ಎರಡು ಅವಧಿಗಳಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಎಸ್. ನಿಜಲಿಂಗಪ್ಪ ನವರನ್ನು ನವಕರ್ನಾಟಕದ ನಿರ್ಮಾತೃ ಎಂದು ಕರ್ನಾಟಕದ ಜನತೆ ನೆನೆಪಿಸಿಕೊಳ್ಳುತ್ತಾರೆ. ಶರಾವತಿ ಜಲವಿದ್ಯುತ್ ಯೋಜನೆ ಮತ್ತು ಕಾಳಿ ವಿದ್ಯುತ್ ಯೋಜನೆಯ ಪ್ರಮುಖ ರೂವಾರಿ ಇವರಾಗಿದ್ದಾರೆ. ಕನಾ

[ಬದಲಾಯಿಸಿ] ರಾಜಕಾರಣದಲ್ಲಿ ಎತ್ತಿದ ಕೈ

ಚಿಕ್ಕಂದಿನಲ್ಲಿ ತಮ್ಮ ಹಳ್ಳಿಯ "ವೀರಪ್ಪ ಮಾಸ್ತರ" ರಿಂದ ಸಾಂಪ್ರದಾಯಿಕ ವಾಗಿ ಅಕ್ಷರಾಭ್ಯಾಸ ಮಾಡಿದ ನಿಜಲಿಂಗಪ್ಪನವರು, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಿಂದ ೧೯೨೪ರಲ್ಲಿ ಪದವೀಧರರಾಗಿ ಉತ್ತೀರ್ಣರಾದರು. ಶ್ರೀ ಬಸವೇಶ್ವರ ಮತ್ತು ಶಿವಶರಣರ ನೀತಿ-ಸಾಧನೆಗಳನ್ನು ಅಭ್ಯಾಸಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ನಿಜಲಿಂಗಪ್ಪನವರು, ಗಾಂಧೀಜಿಯವರ ವಿಚಾರಧಾರೆಯಿಂದಲೂ ಪ್ರಭಾವಿತರಾದರು. ಚಿತ್ರದುರ್ಗವನ್ನು ತಮ್ಮ ಕರ್ಮಭೂಮಿಯಾಗಿ ಸ್ವೀಕರಿಸಿದ ನಿಜಲಿಂಗಪ್ಪನವರು; ಅಂದಿನ ಚಿತ್ರದುರ್ಗ ಜಿಲ್ಲೆಯ ಏಳಿಗೆಗಾಗಿ ಶ್ರಮವಹಿಸಿದ್ದಾರೆ.

[ಬದಲಾಯಿಸಿ] 'ಕಾಂಗ್ರೆಸ್-ಓ,' ಪಕ್ಷದ ರುವಾರಿ

೧೯೩೬ರಲ್ಲಿ ತಮ್ಮ ರಾಜಕೀಯ ಜೀವನವನ್ನು ತಡವಾಗಿಯೇ ಪ್ರಾರಂಭಿಸಿದ ನಿಜಲಿಂಗಪ್ಪನವರು, ಎನ್.ಎಸ್. ಹರ್ಡೀಕರರ ಸಹಾಯದಿಂದ ಕಾಂಗ್ರೆಸ್ ಸೇರಿದರು. ಪ್ರಾರಂಭದಲ್ಲಿ ಸಾಮಾನ್ಯ ಸದಸ್ಯನಾಗಿ ಸೇರಿ ನಂತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಕೊನೆಗೆ ೧೯೬೮ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷರಾದರು. ಇಂದಿರಾ ಗಾಂಧಿಯವರ ಜೊತೆ ರಾಜಕೀಯ ಭಿನ್ನಾಭಿಪ್ರಾಯ ಹೊಂದಿದ ಕೆಲವು ಹಿರಿಯ ಕಾಂಗ್ರೆಸ್ ನಾಯಕರೊಡನೆ ಸೇರಿ ಕಾಂಗ್ರೆಸ (ಓ) ಪಕ್ಷದ ಸ್ಥಾಪನೆಗೆ ಕಾರಣವಾದರು.

[ಬದಲಾಯಿಸಿ] ಪ್ರಶಸ್ತಿ ಗೌರವಗಳು

ನಿಜಲಿಂಗಪ್ಪನವರಿಗೆ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿಯ ಗೌರವ ದೊರಕಿದೆ.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು