ಐಹೊಳೆ
| ಐಹೊಳೆ | |
| ಐಹೊಳೆಯ ದುರ್ಗಾ ದೇವಾಲಯ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಬಾಗಲಕೋಟೆ |
| ನಿರ್ದೇಶಾಂಕಗಳು | |
| ವಿಸ್ತಾರ | {{{area_total}}} km² |
| ಸಮಯ ವಲಯ | IST (UTC+5:30) |
| ಜನಸಂಖ್ಯೆ - ಸಾಂದ್ರತೆ |
- {{{population_density}}}/ಚದರ ಕಿ.ಮಿ. |
| ಕೋಡ್‍ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 587138 - +08351 - |
ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆಯು, ಬೆಂಗಳೂರಿನಿಂದ ೪೮೩ ಕಿ. ಮೀ ಗಳ ದೂರದಲ್ಲಿ ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜೆಲ್ಲೆಯ ಬಾದಾಮಿ ತಾಲ್ಲೂಕಿಗೆ ಸೇರಿದ ಐಹೊಳೆ ಚಾಲುಕ್ಯ ವಾಸ್ತುಶಿಲ್ಪದ ಒಂದು ದೊಡ್ಡ ಕೇಂದ್ರವಾಗಿದೆ. ಐಹೊಳೆಯು ಬಾದಾಮಿ ಚಾಲುಕ್ಯರ ಮೊದಲ ರಾಜಧಾನಿಯಾಗಿದ್ದಿತು. ಈ ಸ್ಥಳದ ದೇವಾಲಯಗಳು ಹಾಗೂ ದೇವಾಲಯದ ಶಿಲ್ಪಗಳು ಅತಿ ಹೆಚ್ಚು ಪ್ರಾಚೀನವಾದವುಗಳಾಗಿವೆ.ಇದು ಚಾಲುಕ್ಯರ ಕಾಲದಲ್ಲಿ ವಿದ್ಯಾಕೇಂದ್ರವಾಗಿತ್ತು.ಐಹೊಳೆ ಒಂದು "ಅಧಿಷ್ಠಾನ" ಅಂದರೆ ಸರಕಾರದ ಆಡಳಿತಾಕಾರದ ಒಂದು ಕೇಂದ್ರ ಅಥವಾ ರಾಜಧಾನಿನಗರವಾಗಿತ್ತು.ಐಹೊಳೆಯ ಹೆಸರು ಶಾಸನಗಳಲ್ಲಿ ಆರ್ಯಪುರ ಎಂದು ಉಲ್ಲೇಖಿಸಲ್ಪಟ್ಟಿದೆ.ಆರ್ಯಪುರವಾಗಿದ್ದ ಸ್ಥಳ ಕಾಲಾನುಕ್ರಮದಲ್ಲಿ ಆಡುಭಾಷೆಯಲ್ಲಿ ಐಹೊಳೆಯಾಯಿತು. ಐಹೊಳೆ ಅತ್ಯಂತ ಪ್ರಾಚೀನ ಗ್ರಾಮ. ಇಲ್ಲಿ ಕ್ರಿ.ಪೂ. 6-7ನೇನೇ ಶತಮಾನದಲ್ಲಿ ಅಂದರೆ ಕಬ್ಬಿಣದ ಯುಗದಲ್ಲೇ ಇಲ್ಲಿ ಜನವಸತಿ ಇತ್ತೆಂದು ಪ್ರಾಗೈತಿಹಾಸಿಕ ಸಂಶೋಧಕರು ಅಂದಾಜು ಮಾಡಿದ್ದಾರೆ. ಇಲ್ಲಿ ಉಸಗು ಕಲ್ಲಿನಿಂದ ಮತ್ತು ಕತ್ತರಿಸಿದ ಬಂಡೆಗಳನ್ನು ಗಾರೆ, ಮಣ್ಣಿನ ನೆರವಿಲ್ಲದೆ ಒಂದರ ಮೇಲೊಂದು ಇಟ್ಟು ನಿರ್ಮಿಸಿದ ಕೋಟೆಯಿದೆ. ಇದನ್ನು ಸುಮಾರು ಕ್ರಿ.ಶ. 6ನೇ ಶತಮಾನದಲ್ಲಿ ನಿರ್ಮಿಸಿರಬಹುದು ಎಂದು ಹೇಳಲಾಗಿದ್ದು ಕರ್ನಾಟಕದಲ್ಲಿ ಉಳಿದಿರುವ ಶಿಲಾಕೋಟೆಗಳ ಪೈಕಿ ಇದು ಅತ್ಯಂತ ಪ್ರಾಚೀನವಾದ್ದಾಗಿದೆ. ಕೋಟೆಯ ಸುತ್ತ ಕಂದಕ ಇರುವುದನ್ನು ಈಗಲೂ ಗುರುತಿಸಬಹುದಾಗಿದ್ದು, ಕೋಟೆಯ ಅವಶೇಷಗಳನ್ನು ಕಾಣಬಹುದು.
ವಾಸ್ತುಶಿಲ್ಪ: ಐಹೊಳೆಯ ಕೋಟೆಯನ್ನು ಉತ್ತರ ರಸ್ತೆಯಿಂದ ಪ್ರವೇಶಿಸುತ್ತಿದ್ದಂತೆಯೇ ಕಾಣುವ ಕ್ರಿಸ್ತ ಶಕ 5ನೇ ಶತಮಾನದಲ್ಲಿ ನಿರ್ಮಿಸಲಾಗಿರುವ ಸುಂದರ ಹಾಗೂ ಮನಮೋಹಕ ಕೆತ್ತನೆಗಳಿಂದ ಕಂಗೊಳಿಸುವ ದುರ್ಗೆಯ ಮಂದಿರ ಮನಸೆಳೆಯುತ್ತದೆ.
ದೇವಾಲಯದ ಮುಖಮಂಟಪದ ಭಿತ್ತಿಯ ಅಡ್ಡಪಟ್ಟಿಕೆಗಳಲ್ಲಿ ರಾಮಲಕ್ಷ್ಮಣ ಸೀತಾಮಾತೆಯನ್ನು ಗುಹ -ನಾವೆಯ ನೆರವಿನಿಂದ ನದಿ ದಾಟಿಸಿದ ಸುಂದರ ಉಬ್ಬುಶಿಲ್ಪವಿದೆ. ಪುರಾಣ, ಪುಣ್ಯಕಥೆಗಳ ಹಲವು ಕಥಾನಕಗಳು ಇಲ್ಲಿವೆ.
ಐಹೊಳೆಯ ದೇವಾಲಯಗಳನ್ನು ಪುರಾತತ್ವ ಸರ್ವೇಕ್ಷಣ ಇಲಾಖೆ 22 ವಿಭಾಗಳಾಗಿ ವಿಂಗಡಿಸಿದೆ. ಇದರಲ್ಲಿ ಹುಚ್ಚಿಮಲ್ಲಿಗುಡಿ, ಲಡಖಾನ್ ಗುಡಿ, ಹುಚ್ಚಪ್ಪಯ್ಯಮಠ, ಗಳಗನಾಥ, ರಾವಲ್ ಪಹಡಿ, ಗುಹಾಂತರ ದೇವಾಲಯ, ಜೈನರ ಮೇಗುತಿ ದೇವಾಲಯ, ಎರಡು ಅಂತಸ್ತಿನ ಜೈನ ದೇವಾಲಯ ಪ್ರಮುಖ ಆಕರ್ಷಣೆ.
ದೇವಾಲಯಗಳು[ಬದಲಾಯಿಸಿ]
ಇಲ್ಲಿನ ದೇವಾಲಯಗಳ ನಿರ್ಮಾಣದಲ್ಲಿ ಔತ್ತರೇಯ ಪದ್ಧತಿಯ ಪ್ರಭಾವವು ಕಂಡು ಬರುತ್ತದೆ.
- ಕ್ರಿ.ಶ.೪೫೦ರಲ್ಲಿ ನಿರ್ಮಿತವಾದ ಲಾಡಖಾನ್ದ್ದೇ ಇಲ್ಲಿನ ಪ್ರಾಚೀನ ದೇವಾಲಯ.ವಿಷ್ಣುವಿಗೆ ಸಮರ್ಪಿತವಾಗಿದ್ದ ದೇವಾಲಯದ ರಚನೆಯಲ್ಲಿ ಗುಪ್ತ ಸಂಪ್ರದಾಯದ ಪ್ರಭಾವವು ಕಂಡು ಬರುತ್ತದೆ.ಏಕೆಂದರೆ ಪೂರ್ಣ ಕಲಶ ಮತ್ತು ನಿಂತ ನಿಲುವಿನ ಗಂಗೆ-ಯಮುನೆಯರ ಆಕೃತಿಗಳು ಇಲ್ಲಿವೆ.
- ಕ್ರಿ.ಶ.೬೩೪ರಲ್ಲಿ ೨ನೆಯ ಪುಲಿಕೇಶಿಯ ಕಾಲದಲ್ಲಿ ಅವನ ಆಶ್ರಯದಲ್ಲಿದ್ದ ರವಿಕೀರ್ತಿಯಿಂದ ಮೇಗುಟಿ(ಮೇಗುಡಿ ಅಂದರೆ ಮೇಲಿನ ಗುಡಿ) ದೇವಾಲಯವು ನಿರ್ಮಾಣವಾಯಿತು.ಎತ್ತರವಾದ ಸ್ಥಳದಲ್ಲಿರುವ ಕಾರಣ ದೇವಾಲಯಕ್ಕೆ ಈ ಹೆಸರು ಬಂದಿದೆ.ಜಿನನಿಗೆ ಸಮರ್ಪಿತವಾಗಿದ್ದ ಈ ಗುಡಿಯು ಗರ್ಭಗೃಹ ಮತ್ತು ನವರಂಗಗಳನ್ನು ಹೊಂದಿದೆ.
- ಕೊಂಟಿಗುಡಿ (ಕೊಂಟ ಅಥವಾ ತ್ರಿಶೂಲವನ್ನು ಸದಾ ಹೊಂದಿದವನೊಬ್ಬನು ವಾಸಿಸುತ್ತಿದ್ದ ಕಾರಣ ಈ ಹೆಸರು) ಎಂದು ಹೆಸರು ಪಡೆದ ದೇವಾಲಯದ ೪ ಕಂಭಗಳಿಗೆ ಆಧಾರವೇ ಇಲ್ಲ ;ಅವು ಅಡಿಯಿಂದ ಗುಂಡಾದ ಬೋದಿಗೆಯವರೆಗೆ ಚೌಕಾಕಾರವಾಗಿವೆ.
- ಐಹೊಳೆಯ ಅತ್ಯಂತ ಸುಂದರ ದೇವಾಲಯವೆಂದರೆ ದುರ್ಗದೇವಾಲಯ.ಇದು ದುರ್ಗ ಅಥವಾ ಕೋಟೆಯ ಬಳಿಯಿದ್ದುದರಿಂದ ಈ ಹೆಸರು ಬಂದಿದೆ.ಬೌದ್ಧರ ಚೈತ್ಯಗಳಂತೆ ಲಾಳದ ಆಕಾರದ ಈ ದೇವಾಲಯದ ಗೋಡೆಗಳ ಮಾಡಗಳಲ್ಲಿ ಶಿವ ಹಾಗೂ ವಿಷ್ನುವಿನ ಪ್ರತಿಮೆಗಳಿವೆ.ಇದರ ಅತ್ಯಂತ ಪ್ರಮುಖ ಲಕ್ಷಣವೆಂದರೆ ಉತ್ತರ ದಿಕ್ಕಿನಲ್ಲಿರುವ ಅದರ ಶಿಖರ.
- ಮೇಲೆ ಹೇಳಿದ ದುರ್ಗದೇವಾಲಯದ ಲಕ್ಷಣಗಳ ಪರಿಪೂರ್ಣ ಉದಾಹರಣೆಯಾಗಿರುವುದು ಹುಚ್ಚಿಮಲ್ಲಿಗುಡಿ.