ಕನ್ನಡ ಸಾಹಿತ್ಯ ಪರಿಷತ್ತು
![]() |
|
|---|---|
| ವಿಳಾಸ: | ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು - ೫೬೦೦೧೮ |
| ಫೋನ್: | +೯೧ ೦೮೦ ೨೬೬೧೨೯೯೧ (+91 080 26612991) |
| ಈಗಿನ ಅಧ್ಯಕ್ಷರು: | ಡಾ. ನಲ್ಲೂರು ಪ್ರಸಾದ್ |
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ. ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹಬ್ಬಿಸಲು ಈ ಹಿಂದೆ ಸಾಧ್ಯವಾಗಿಸಿದೆ.
ಈ ಸಂಸ್ಥೆಯ ಈಗಿನ ಅಧ್ಯಕ್ಷರಾಗಿ ನಲ್ಲೂರು ಪ್ರಸಾದರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಪರಿವಿಡಿ |
[ಬದಲಾಯಿಸಿ] ಕನ್ನಡ ಸಾಹಿತ್ಯ ಸಮ್ಮೇಳನಗಳು
[ಬದಲಾಯಿಸಿ] ಪರೀಕ್ಷೆಗಳು
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಕೆಲವು ಪರೀಕ್ಷೆಗಳನ್ನ ನಡೆಸುತ್ತದೆ. ಕನ್ನಡ ಓದಬಯಸುವ ಕನ್ನಡಿಗರಿಗೆ ಕನ್ನಡ 'ಕಾವ', 'ಜಾಣ' ಮುಂತಾದ ಪರೀಕ್ಷೆಗಳನ್ನು ಪ್ರತಿ ವರ್ಷ ನಡೆಸುತ್ತದೆ.
[ಬದಲಾಯಿಸಿ] ವೆಬ್‌ಸೈಟ್‌ಗೆ ಚಾಲನೆ
ಕನ್ನಡ ಸಾಹಿತ್ಯ ಪರಿಷತ್ ತನ್ನ ಅಧಿಕೃತ ವೆಬ್‌ಸೈಟ್ ಸಿದ್ಧಪಡಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ್ ಅವರು ಸೋಮವಾರ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಈ ವೆಬ್‌ಸೈಟ್‌ನಲ್ಲಿ ಸಾಹಿತ್ಯ ಸಮ್ಮೇಳನದ ವಿವರಗಳೇ ಅಲ್ಲದೆ, ಎಲ್ಲ ಸಾಹಿತಿಗಳ ಮಾಹಿತಿ ಇರಲಿದೆ. ವೆಬ್‌ಸೈಟ್ ವಿಳಾಸ: kasapa.kar.nic.in
