ಕರ್ನಾಟಕ ವಿಧಾನಸಭೆಯು 224 ಸದಸ್ಯರ ಸದಸ್ಯ ಬಲವನ್ನು ಹೊಂದಿದೆ. 224 ಸದಸ್ಯ ಬಲವುಳ್ಳ 15 ನೇ ಕರ್ನಾಟಕ ವಿಧಾನಸಭೆಯ 222ವಿಧಾನಸಭಾ ಕ್ಷೇತ್ರಗಳಿಗೆ 12 ಮೇ 2018 ಶನಿವಾರ ಚುನಾವಣೆ ನೆಡೆಯಿತು. ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ 2-5-2018 ರಂದು ನಿಧನರಾದ್ದರಿಂದ ಮತ್ತು ರಾಜರಾಜೇಶ್ವರಿ ನಗರದಲ್ಲಿ ಮತದಾರರ ವಂಚನೆ ಹಗರಣದ ನಂತರ, ಈ ಎರಡು ಕ್ಷೇತ್ರಗಳ ಚುನಾವಣೆ ಮುಂದೂಡಲ್ಪಟ್ಟಿತು.
ಭಾರತದಲ್ಲಿ ಮತದಾನದ ಕನಿಷ್ಟ ವಯಸ್ಸು 18 ವರ್ಷಗಳು. 2018 ಕರ್ನಾಟಕದಲ್ಲಿ ರಾಜ್ಯ ಚುನಾವಣೆಗಾಗಿ, 18 ರಿಂದ 29 ವರ್ಷ ವಯಸ್ಸಿನ 824,000 ಹೊಸ ಮತದಾರರನ್ನು ನೋಂದಾಯಿಸಲಾಗಿದೆ. ಕಳೆದ 5 ವರ್ಷಗಳಲ್ಲಿ ಮತದಾರರ, ಅನುಪಾತವು ಒಂದೇ ಆಗಿಯೇ ಇದ್ದರೂ, 'ಯುವ ಮತದಾರರ' ಅನುಪಾತವು 2013 ರಲ್ಲಿ 1.16% ರಿಂದ 2.2% ಕ್ಕೆ ಏರಿಕೆಯಾಗಿದೆ.
ಈ ಮತದಾರರ ಲಿಂಗ ಅನುಪಾತವು ಇದೇ ಅವಧಿಯಲ್ಲಿ 958 ರಿಂದ 972 ಕ್ಕೆ ಏರಿದೆ.
ವರ್ಗ
2013
2018
ಸ್ತ್ರೀ ಮತದಾರರು
21,367,912
24,471,979
ಟ್ರಾನ್ಸ್ಜೆಂಡರ್ ಮತದಾರರು
2,100
4,552
ಪುರುಷ ಮತದಾರರು
22,315,727
25,205,820
ಯುವ ಮತದಾರರ ಸಂಖ್ಯೆ
718,000
1,542,000
ಮತದಾರರ ಒಟ್ಟು ಸಂಖ್ಯೆ
44,403,739
51,224,351
ಹೊಸ ಮತದಾನ ಕೇಂದ್ರಗಳ ಸಂಖ್ಯೆ - 4,662
ಒಟ್ಟು ಮತದಾನ ಕೇಂದ್ರಗಳ ಸಂಖ್ಯೆ 2018 - 56,696
ಚುನಾವಣೆಗೆ ಅಗತ್ಯವಾಗಿ ಬೇಕಾದ ಅಧಿಕಾರಿಗಳು (ಅಂದಾಜು) -356,552[೨]
ಮೇ 12 ರಂದು ನೆಡೆಯುವ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಒಟ್ಟು - 2,655 (ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಪ್ರಕಟಣೆ)
ದಿ.27-4-2018 ಶುಕ್ರವಾರ ದಂದು ಕೊನೆಯ ದಿನಾಂಕದಂದು 3,509 ಮಂದಿ ನಾಮಪತ್ರ ಸಲ್ಲಿಸಿದ್ದರು. ಶುಕ್ರವಾರದಂದು 583 ಅಭ್ಯರ್ಥಿಗಳನ್ನು ಹಿಂತೆಗೆದುಕೊಂಡರು. ಮತ್ತು 271 ಮಂದಿಯ ನಾಮಪತ್ರ ಬುಧವಾರ ಪರಿಶೀಲನೆ ನಡೆಸಿದ ಬಳಿಕ ತಿರಸ್ಕಾರವಾಯಿತು.
ಸಮೀಕ್ಷೆಯ ಸಮಿತಿಯಿಂದ ಬಿಡುಗಡೆಯಾದ ಅಂತಿಮ ಪಟ್ಟಿಯ ಪ್ರಕಾರ ಒಟ್ಟು 219 ಮಹಿಳೆಯರು ಸೇರಿದಂತೆ 222 ಮಂದಿ ಆಡಳಿತ ಕಾಂಗ್ರೆಸ್ ((120); 224 ವಿರೋಧ ಬಿಜೆಪಿ(43); 201 ಜನತಾದಳ ಸೆಕ್ಯುಲರ್ (ಜೆಡಿಎಸ್)-(29), 1,155 ಸ್ವತಂತ್ರರು ಮತ್ತು 800 ಇತರ ರಾಷ್ಟ್ರೀಯ, ಪ್ರಾದೇಶಿಕ ಮತ್ತು ಚಿಕ್ಕ ಪಕ್ಷಗಳು, ಸ್ಪರ್ಧೆಯಲ್ಲಿವೆ. (ಆವರಣದಲ್ಲಿ ಹಾಲಿ ಸದಸ್ಯರ ಸಂಖ್ಯೆ)[೩][೪]
ರಾಜರಾಜೇಶ್ವರಿ ಮತ್ತು ಜಯನಗರ ನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಟ್ರಕ್‌ನಲ್ಲಿ 95 ಲಕ್ಷ ರೂಪಾಯಿ ಹಣ ಪತ್ತೆಯಾದ ಹಿನ್ನೆಯಲ್ಲಿ ಚುನಾವಣೆಯನ್ನು 2018 ಮೇ ತಿಂಗಳ 28ಕ್ಕೆ ಮುಂದೂಡಲಾಗಿದೆ. ಮೇ 31ರಂದು ಫಲಿತಾಂಶ ಪ್ರಕಟವಾಗಲಿದೆ, ಎಂದು ಚುನಾವಣಾ ಆಯುಕ್ತರು ತಿಳಿಸಿದ್ದಾರೆ.[೫]
28-5-2018 ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ನಿಗದಿಯಾಗಿದ್ದ ಚುನಾವಣೆಯಲ್ಲಿ ಶೇ 54.20 ರಷ್ಟು ಮತದಾನ ನಡೆದಿತ್ತು. ದಿ.31-5-2018 ಎಣಿಕೆ ನಂತರ ಫಲಿತಾಂಶ ಈ ರೀತಿ ಇತ್ತು:[೬]
ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ಮೇ 2, 2018.ಗುರುವಾರ ರಾತ್ರಿ ನಿಧನರಾದರು. ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು, ಈ ಬಾರಿಯೂ ಕಣದಲ್ಲಿದ್ದರು. ಕ್ಷೇತ್ರದಲ್ಲಿ 2-5-2018 ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದರು. ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಿ, ಚುನಾವಣಾ ಪ್ರಕ್ರಿಯೆಯನ್ನು ಹೊಸದಾಗಿ ನಡೆಸಬೇಕಾಗುತ್ತದೆ. [೭]
11-6-2018 ರಂದು ಜಯನಗರ ನಗರ ಕ್ಷೇತ್ರದ ಚುನಾವಣೆ ನಿಗದಿಯಾಗಿದ್ದು,13-06-2018 ಮತ ಎಣಿಕೆ ನಡೆದ ನಂತರದ ಫಲಿತಾಂಶ ಈ ರೀತಿ ಇತ್ತು: [೮]
ಜೆಡಿಎಸ್,ನ,ಎಚ್.ಡಿ.ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ಒಂದು ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದಾಗ ಜೆಡಿಎಸ್ ಸದಸ್ಯರ ಸಂಖ್ಯೆ 35 ಆಗುತ್ತದೆ.$
28 ಮೇ, 2018 ರಂದು ಕಾರು ಅಪಘಾತದಲ್ಲಿ ಜಮಖಂಡಿಯ ಕಾಂಗ್ರೆಸ್ ,ಶಾಸಕ ಸಿದ್ದು ನ್ಯಾಮಗೌಡ ಮೃತಪಟ್ಟರು.ಶಾಸಕ ಸಿದ್ದು ನ್ಯಾಮಗೌಡ ಸಾವು[೧೩]
ಕುಮಾರಸ್ವಾಮಿ ಖಾಲ ಮಾಡಿದ ರಾಮನಗರ, ಜಮಖಂಡಿ ಖಾಲಿ ಇವೆ; ಒಟ್ಟು ಫಲಿತಾಂಶ: 224 - 2 =222 ಕ್ಷೇತ್ರಗಳು
ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ 11 – 6 -2018 ರಂದು ನೆಡೆದು, ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅವರು 54,457 ಮತಗಳನ್ನು ಗಳಿಸಿ, ಒಟ್ಟು 2,889 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ.ಎನ್. ಪ್ರಹ್ಲಾದ್‌ಬಾಬು 51,568 ವಿರುದ್ಧ ಜಯ ಗಳಿಸಿದ್ದಾರೆ.[೧೪]
ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 3,2018 ರಂದು ನಡೆಸುವುದಾಗಿ 06 ಅಕ್ಟೋಬರ್ 2018ರಂದು ಚುನಾವಣಾ ಆಯೋಗ ತಿಳಿಸಿತು. ಸೂಚನೆಯ ಘೋಷಣೆ- 9-10-2018; ನಾಮನಿರ್ದೇಶನಕ್ಕೆ ಕೊನೆಯ ದಿನ 16-10-2018; ವಾಪಸಾತಿಗೆ ಕೊನೆಯ ದಿನ 20-10-2018;ಎಣಿಕೆ,6-11-2018ರಂದು.
ಲೋಕಸಭೆ ಕ್ಷೇತ್ರಗಳು:
ಶಿವಮೊಗ್ಗ :(ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ),
ಬಿ.ಎಸ್.ಯಡಿಯೂರಪ್ಪ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಅವರು 23ನೇ ಮುಖ್ಯಮಂತ್ರಿಯಾಗಿ ಹಾಗೂ ಮೂರನೇ ಬಾರಿಗೆ ಸಿಎಂ ಆಗಿ ದಿ.17-5-2018 ರಂದು ಬೆಳಿಗ್ಗೆ 9.00ಕ್ಕೆ ಪ್ರಮಾಣವಚನ ಸ್ವೀಕರಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.[೨೩][೨೪] ವಿಧಾನಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗದಿದ್ದರಿಂದ, ಹದಿನೈದು ದಿನಗಳ ಒಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಸದನದಲ್ಲಿ ಬಹುಮತವಿಲ್ಲದ ಕರಣ ಯಡಿಯೂರಪ್ಪ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದರು. ಬಹುಮತ ಸಾಬೀತು ಪಡಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ನೆಡೆಯುವುದು ಎಂದಿದ್ದಾರೆ.[೨೫]
ಜೆಡಿಎಸ್ ಹಾಗೂ ಕಾಂಗ್ರೆಸ್ ಒಟ್ಟಾಗಿ ಮೈತ್ರಿ ಮಾಡಿಕೊಂಡು, ಕಾಂಗ್ರೆಸ್–ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಸರ್ಕಾರ ರಚನೆಗೆ ಎರಡು ಪಕ್ಷದ 117 ಶಾಸಕರ ಸಹಿಯನ್ನು ಒಳಗೊಂಡ ಪಟ್ಟಿಯನ್ನು ರಾಜ್ಯಪಾಲರಿಗೆ ಎಚ್.ಡಿ. ಕುಮಾರಸ್ವಾಮಿ ದಿ. 16.5-2018 ರಂದು ನೀಡಿದ್ದರು.[೨೬]
ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ ಅವರಿಗೆ ಬಹುಮತವಿಲ್ಲದ ಕಾರಣ ಮತ್ತು ತಮಗೆ 117ಸದಸ್ಯರ ಬೆಂಬಲ ವಿದೆಯೆಂದು ದಿ.16-5-2018 ರಂದು ತಡೆ ಕೋರಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಬುಧವಾರ ಮಧ್ಯರಾತ್ರಿ ವಿಚಾರಣೆ ನಡೆಸಿದ್ದು ರಾಜ್ಯಪಾಲರ ಕರ್ತವ್ಯದಲ್ಲಿ ಕೋರ್ಟ್ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ಸುಪ್ರೀಕೋರ್ಟ್ ಅಭಿಪ್ರಾಯಪಟ್ಟಿದೆ. [೨೭]
ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಬಗೆಗೆ ಕಾಂಗ್ರೆಸ್ ಮತ್ತು ಜೆಡಿಎಸ್, ತಮ್ಮ ಕೂಟಕ್ಕೆ ಬಹುಮತ ಇರುವುದನ್ನು ನಿರ್ಲಕ್ಷಿಸಿದ ಕಾರಣ ವಿಧಾನ ಸೌಧದ ಗಾಂಧಿಪ್ರತಿಮೆಯ ಬಳಿ ಪ್ರತಭಟನೆ ನೆಡೆಸಿದವು.[೨೮][೨೯]
ದಿ.17-5-2018 ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ ಅವರು ದಿ.19-5-2018 ಶನಿವಾರ ಸಂಜೆ 4ಕ್ಕೆ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸರ್ಕಾರ ರಚಿಸುವಂತೆ ಬಿಜೆಪಿಗೆ ಆಹ್ವಾನ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ನಿರ್ಧಾರ ಪ್ರಶ್ನಿಸಿ ಬುಧವಾರ ರಾತ್ರಿ ಕಾಂಗ್ರೆಸ್– ಜೆಡಿಎಸ್ ಸಲ್ಲಿಸಿದ್ದ ಅರ್ಜಿಯ ಮುಂದುವರಿದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ತ್ರಿಸದಸ್ಯ ಪೀಠ, ‘ವಿಶ್ವಾಸಮತ ಸಾಬೀತುಪಡಿಸುವ ತನಕ ಯಡಿಯೂರಪ್ಪ ಅವರು ಯಾವುದೇ ಆಡಳಿತಾತ್ಮಕ ತೀರ್ಮಾನ ತೆಗೆದು ಕೊಳ್ಳುವಂತಿಲ್ಲ’ ಎಂದು ತಿಳಿಸಿತು.[೩೦]
ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರು ಶನಿವಾರ ಪ್ರಮಾಣ ವಚನ ಸ್ವೀಕರಿಸಬೇಕು. ಶಾಸಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ. ವಿಶ್ವಾಸಮತ ಯಾಚನೆಯ ಪ್ರಕ್ರಿಯೆಯನ್ನು ಹಂಗಾಮಿ ವಿಧಾನಸಭಾಧ್ಯಕ್ಷರು ನಡೆಸಿಕೊಡಬೇಕು ಎಂದೂ ಸೂಚಿಸಿದೆ.[೩೧] ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹೇಗೆ ನಡೆಯಬೇಕು ಎಂಬುದನ್ನು ಹಂಗಾಮಿ ಸ್ಪೀಕರ್ ನಿರ್ಣಯಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯಪಾಲರು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಬೋಪಯ್ಯ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಆಯ್ಕೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ.[೩೨]
ಹಂಗಾಮಿ ಸ್ಪೀಕರ್ ಕರ್ತವ್ಯ:ನೂತನವಾಗಿ ಆಯ್ಕೆಯಾದ ಶಾಸಕರಿಗೆ ಪ್ರತಿಜ್ಞಾ ವಿಧಿ ಬೋಧಿಸುವುದು ಮೊದಲ ಕರ್ತವ್ಯ. ಅದಾದ ಬಳಿಕ ಕಾಯಂ ಸಭಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ಮಾಡಲಾಗುತ್ತದೆ. ಆದರೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರಕಾರ, ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸುವುದು ಹಾಗೂ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನಿರ್ವಹಣೆ ಈ ಬಾರಿಯ ಹಂಗಾಮಿ ಸ್ಪೀಕರ್ ಅವರ ಜವಾಬ್ದಾರಿಯಾಗಿದೆ.[[೩೩]
ಯಡಿಯೂರಪ್ಪ ರಾಜಿನಾಮೆ: ಬಹುಮತ ಇಲ್ಲದೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ದಿ.19-5-2018 ಶನಿವಾರ ಸಂಜೆ 4ಕ್ಕೆ ವಿಶ್ವಾಸಮತ ಯಾಚನೆ ಭಾಷಣ ಆರಂಭಿಸಿದರು. ಆದರೆ ಬಳಿಕ ಅದನ್ನು ಹಿಂಪಡೆದು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದರು.[೩೪]
ಜೆಡಿಎಸ್ ಸರ್ಕಾರ ರಚನೆಗೆ ಕಾಂಗ್ರೆಸ್ ಪೂರ್ಣ ಬೆಂಬಲ ಸೂಚಿಸಿ, ಮೇ 15ರಂದೇ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧ ರಾಜ್ಯಪಾಲರಿಗೆ ಉಭಯ ಪಕ್ಷದ ಮುಖಂಡರು ಮನವಿ ಸಲ್ಲಿಸಿದ್ದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ದಿ.19-5-2018 ಶನಿವಾರ ಸಂಜೆ 4ಕ್ಕೆ ವಿಶ್ವಾಸಮತ ಪಡೆಯಲಾರದೆ ರಾಜೀನಾಮೆ ಸಲ್ಲಿಸಿದ ನಂತರ, ಎಚ್.ಡಿ. ಕುಮಾರಸ್ವಾಮಿಯವರಿಗೆ ಹದಿನೈದು ದಿನಗಳಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು ಆದೇಶಿಸಿದ್ದು, ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಅವಕಾಶ ನೀಡಿದರು. ಕುಮಾರಸ್ವಾಮಿಯವರು ದಿ. 23-5-2018 ಬುಧವಾರ ಪ್ರಮಾಣ ವಚನ ಸ್ವಕರಿಸಲು ನಿರ್ಧರಿಸಿದರು. [೩೫][೩೬]
ಬಿ.ಎಸ್ ಯಡಿಯೂರಪ್ಪನವರು ಬಹುಮತ ಸಾಬೀತು ಪಡಿಸಲು ವಿಫಲರಾದ ನಂತರ ರಾಜ್ಯ ಪಾಲರ ಆಹ್ವಾನದಂತೆ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಿ.23 ಮೇ, 2018 ರಂದು ಬುಧವಾರ ಸಂಜೆ 4.30ಕ್ಕೆ, ದೇವರು ಮತ್ತು ಕನ್ನಡ ನಾಡಿನ ಜನರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು ಕೊರಟಗೆರೆ ಶಾಸಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಎಸ್‌ಪಿ ನಾಯಕಿ ಮಾಯಾವತಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶರದ್ ಯಾದವ್, ಗುಲಾಬ್ ನಬೀ ಅಜಾದ್, ಚಂದ್ರಬಾಬು ನಾಯ್ಡು, ಸೀತಾರಾಂ ಯೆಚೂರಿ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇಶದ ಹೊಸ ಒಕ್ಕೂಟದ ಆರಂಭಕ್ಕೆ ಸಾಕ್ಷಿಯಾಯಿತು.[೩೮] ವಿಧಾನ ಸಭೆಯಲ್ಲಿ ಬಹುಮತ ಸಾಬೀತು ಅದ ನಂತರ ಮಂತ್ರಿಮಂಡಳದ ವಿಸ್ತರಣೆಮಾಡುವ ಸೋಚನೆ ನೀಡಿದರು. ಬಹುಮತ ಸಾಬೀತುಪಡಿಸಲು ಮೇ, 25 ರಂದು (ಶುಕ್ರವಾರ) ವಿಧಾನಸಭಾ ಅಧಿವೇಶನ ಕರೆಯಲಾಗಿದೆ. [೩೯]
ವಿಧಾನಸಭೆ ಸಭಾಧ್ಯಕ್ಷರ ಆಯ್ಕೆ;
ದಿ.25 ಮೇ, 2018 ರಂದು ಬಿಜೆಪಿಯ ಸುರೇಶ್ ಕುಮಾರ್ ನಾಮಪತ್ರವನ್ನು ವಾಪಸ್ಸು ಪಡೆದಿದ್ದರಿಂದ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಕೆ.ಆರ್.ರಮೇಶ್ ಕುಮಾರ್ ರಾಜ್ಯ ವಿಧಾನಸಭೆಯ ಸಭಾಪತಿಯಾಗಿ ಆಯ್ಕೆ ಆದರು. ಸಿದ್ದರಾಮಯ್ಯರ ಸೂಚನೆ ಮತ್ತು ಜಿ.ಪರಮೇಶ್ವರ್ ಅವರ ಅನುಮೋದನೆಯಂತೆ ಸಭಾಧ್ಯಕ್ಷರಾಗಿ ರಮೇಶ್ ಕುಮಾರ್ ಅವರ ಆಯ್ಕೆ ಪ್ರಸ್ತಾಪವನ್ನು ಹಂಗಾಮಿ ಸಭಾಧ್ಯಕ್ಷರಾಗಿದ್ದ ಬೋಪಯ್ಯ ಅವರು ಧ್ವನಿಮತದ ಮೂಲಕ ರಮೇಶ್ ಕುಮಾರ್ ಆಯ್ಕೆ ಆಗಿರುವುದನ್ನು ಘೋಷಿಸಿದರು.[೪೦]
ಕುಮಾರಸ್ವಾಮಿಯವರಿಂದ ಬಹುಮತ ಸಾಬಿತು
ಕೆ.ಆರ್.ರಮೇಶ್ ಕುಮಾರ್ ಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೆ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಪ್ರಸ್ತಾಪವನ್ನು ಸಭೆಯಲ್ಲಿ ಮಂಡಿಸಿದರು. ಬಿ.ಎಸ್. ಯಡಿಯೂರಪ್ಪ ತಮ್ಮ ಮಾತು ಮುಗಿಸಿ, ಕಲಾಪವನ್ನು ಬಹಿಷ್ಕರಿಸಿ, ಸನದನದಿಂದ ಹೊರ ನಡೆದರು. ಯಡಿಯೂರಪ್ಪ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಕುಮಾರಸ್ವಾಮಿ, ಕೊನೆಯಲ್ಲಿ ಸದನದಲ್ಲಿ ವಿಶ್ವಾಸ ಮತ ಕೋರಿದರು. ಸಭಾಧ್ಯಕ್ಷರು ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಿ, ಧ್ವನಿ ಮತದ ಒಪ್ಪಿಗೆ ಮೂಲಕ ಸಭಾಧ್ಯಕ್ಷ ಕೆ.ಆರ್. ರಮೇಶ್‌ಕುಮಾರ್ ಅವರು ವಿಶ್ವಾಸಮತವನ್ನು ಅನುಮೋದಿಸಿದರು [೪೧]
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮೈತ್ರಿ ಸರ್ಕಾರದ ಸಚಿವರ ಪ್ರಮಾಣವಚನ ಸಮಾರಂಭ ರಾಜಭವನದ ಗಾಜಿನಮನೆಯಲ್ಲಿ ದಿ.6-6-2018 ಬುಧವಾರ ಸರಳವಾಗಿ ನೆರವೇರಿತು. ಕಾಂಗ್ರೆಸ್ ಪಕ್ಷದ 15 ಶಾಸಕರು ಮತ್ತು ಜೆಡಿಎಸ್ ಪಕ್ಷದ 10 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. (25 + ಹಿಂದೆ ಇಬ್ಬರ ಪ್ರಮಾಣವಚನ; ಒಟ್ಟು 27 ಜನರ ಮಂತ್ರಿಮಂಡಳ ರಚನೆಯಾಗಿದೆ. (ರಾಜ್ಯದ ಸಮ್ಮಿಶ್ರ ಸರ್ಕಾರದ ಸಚಿವರ ಕಿರುಪರಿಚಯ)[೪೨]