ಕಾರವಾರ
ಕಾರವಾರ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಮತ್ತು ಜಿಲ್ಲಾ ಕೇಂದ್ರ. ಕಾರವಾರ, ಕರ್ನಾಟಕ ಹಾಗೂ ಗೋವೆಯ ಗಡಿಯಿಂದ ದಕ್ಷಿಣಕ್ಕೆ ಸುಮಾರು 15 ಕಿಲೋ ಮೀಟರ್ ದೂರದಲ್ಲಿದ್ದು, ಅರಬ್ಬೀ ಸಮುದ್ರದಂಚಿನಲ್ಲಿರುವ ನಗರವಾಗಿದೆ.
ಕಾರವಾರ[ಬದಲಾಯಿಸಿ]
ಕಾರವಾರವು ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸುಮಾರು ೫೨೦ ಕಿ.ಮೀ. ವಾಯುವ್ಯ ದಿಕ್ಕಿನಲ್ಲಿದೆ. ಕಡಲ ಕಿನಾರೆಯಲ್ಲಿರುವ ಈ ನಗರವು ಪ್ರವಾಸಿಗರ ತಾಣವೂ ಹೌದು. ಇಲ್ಲಿನ ಕಡಲು ಹಾಗೂ ಸುತ್ತಲೂ ಇರುವ ಪುರಾಣ ಪ್ರಸಿದ್ಧ ಸ್ಥಳಗಳಾದ ಗೋಕರ್ಣ, ಮುರುಡೇಶ್ವರ ಹಾಗೂ ಹಲವಾರು ಚಿಕ್ಕ, ದೊಡ್ಡ ಪವಿತ್ರ ಸ್ಥಳಗಳು, ಹತ್ತಾರು ಸುಂದರ ಕಡಲ ಕಿನಾರೆಗಳು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಇಲ್ಲಿನ ಸುಂದರ ಹಾಗೂ ಪ್ರಶಾಂತ ವಾತಾವರಣ ರಾಷ್ಟ್ರಕವಿ ಶ್ರೀ ರವೀಂದ್ರನಾಥ್ ಠಾಕೂರ್ ರವರ ಮೊದಲ ಕೃತಿ ರಚನೆಗೆ ಸ್ಫೂರ್ತಿಯಾಯಿತು."ಕಡಲ ತೀರದ ಕಾಶ್ಮಿರ" ಕಾರವಾರ.ಅರಬ್ಬೀ ಸಮುದ್ರದ ಬಂದರಾಗಿ ಅಭಿವೃದ್ಧಿಪಡಿಸಲಾದ ಕಾರವಾರ ಕರ್ನಾಟಕದ ಎರಡನೆ ಪ್ರಮುಖ ಬಂದರು.ದೇಶದ ಅತೀ ದೊಡ್ಡ ನೌಕಾನೆಲೆ ಕಾರವಾರ.ಕರ್ನಾಟಕದ ಎಕೈಕ ಅಣು ವಿದ್ಯುತ್ ಸ್ಥಾ ವರ ಕೈಗಾ ಕಾರವಾರದ ಸನಿಹದಲ್ಲಿದೆ. ಕಾರವಾರವು ಪ್ರವಾಸಿಗಳಿಗೆ ಒ೦ದು ಸು೦ದರ ತಾಣ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
೧.ಕಾರವಾರ ೨. ಅ೦ಕೋಲಾ ೩.ಕುಮಟಾ ೪.ಹೊನ್ನಾವರ ೫.ಭಟ್ಕಳ ೬.ಶಿರಸಿ ೭.ಸಿದ್ಧಾಪುರ ೮.ಯಲ್ಲಾಪುರ ೯.ಮು೦ಡಗೋಡ ೧೦.ಹಳಿಯಾಳ ೧೧.ಸೂಪ(ಜೋಯಿಡಾ)