ಕೇದಾರನಾಥ

ವಿಕಿಪೀಡಿಯ ಇಂದ
(ಕೇದಾರನಾಥ್ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕೇದಾರನಾಥ ದೇವಾಲಯ
Kedarnath Temple.jpg
ಹೆಸರು: ಕೇದಾರನಾಥ ದೇವಾಲಯ
ಪ್ರಮುಖ ದೇವತೆ: ಶಿವ
ಸ್ಥಳ: ಕೇದಾರನಾಥ
ಕೇದಾರನಾಥ ದೇವಾಲಯ

ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೋಲಿ (ಉತ್ತರಕಾಶಿ) ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೇಲಿರುವ ಶಿವನ ದೇವಾಲಯ. ಸುಮಾರು ೩೫೬೪ ಮೀಟರ್ ಎತ್ತರದಲ್ಲಿರುವ ಈ ಸ್ಥಳದ ವಿಪರೀತ ಚಳಿಯ ವಾತಾವರಣದಿಂದಾಗಿ ದೇವಾಲಯವು ಕೇವಲ ಏಪ್ರಿಲ್ ಕೊನೆಯ ಭಾಗದಿಂದ ನವೆಂಬರ್ ಮೊದಲ ವಾರದವರೆಗೆ ಮಾತ್ರ ಭಕ್ತಾದಿಗಳ ದರ್ಶನಕ್ಕೆ ಮುಕ್ತವಾಗಿರುತ್ತದೆ.

ಪರಿವಿಡಿ

ಮಂದಿರದ ಹಿನ್ನೆಲೆ ಮತ್ತು ಪ್ರಾಮುಖ್ಯತೆ [ಬದಲಾಯಿಸಿ]

ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ಕೇದಾರನಾಥ ಯಾತ್ರೆಯು ‘ಭಾರತ-ಚೀನಾ’ ಗಡಿಗೆ ಅಂಟಿಕೊಂಡಂತಿರುವ ‘ಗೌರಿಕುಂಡ’ವೆಂಬ ಪ್ರದೇಶದಿಂದ ಪ್ರಾರಂಭವಾಗುತ್ತದೆ. ಸಮತಟ್ಟಾದ ಪ್ರದೇಶವಾದ ಇಲ್ಲಿಂದ ಸುಮಾರು ೧೪ ಕಿ.ಮೀ. ಕಾಲ್ನಡಿಗೆ, ಕುದುರೆಸವಾರಿ ಅಥವಾ ಡೋಲಿಯಲ್ಲಿ ಪಯಣಿಸಬೇಕು. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಈ ದೇವಸ್ಥಾನದ ಹಿಂದೆಯೇ ಶಂಕರರ ಸಮಾಧಿ ಮಂದಿರವಿದೆ. ಗೌರಿಕುಂಡವು ಸಮುದ್ರಮಟ್ಟದಿಂದ ೬೫೦೦ ಅಡಿ ಎತ್ತರದಲ್ಲಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಏಕೋರಾಮಾರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ.

ವಿಷಯಾಧಾರ [ಬದಲಾಯಿಸಿ]

ಪೂರಕ ಓದು [ಬದಲಾಯಿಸಿ]

ಬದರಿನಾಥ

ಬಾಹ್ಯ ಸಂಪರ್ಕ [ಬದಲಾಯಿಸಿ]

"http://kn.wikipedia.org/w/index.php?title=ಕೇದಾರನಾಥ&oldid=323572" ಇಂದ ಪಡೆಯಲ್ಪಟ್ಟಿದೆ