ಕೊಂಡ ಮಾವು
Hill Mango | |
---|---|
Commiphora caudata | |
Scientific classification | |
ಸಾಮ್ರಾಜ್ಯ: | |
(ಶ್ರೇಣಿಯಿಲ್ಲದ್ದು): | |
(ಶ್ರೇಣಿಯಿಲ್ಲದ್ದು): | Eudicots
|
(ಶ್ರೇಣಿಯಿಲ್ಲದ್ದು): | |
ಗಣ: | |
ಕುಟುಂಬ: | |
ಕುಲ: | Commiphora
|
ಪ್ರಜಾತಿ: | C. caudadta
|
Binomial name | |
Commiphora caudata (Wight & Arn.) Engl.
| |
Synonyms | |
|
ಕೊಂಡ ಮಾವುಕಾಮಿಫೋರ ಕಾಡೇಟ ಎಂಬ ಶಾಸ್ತ್ರೀಯ ಹೆಸರಿನ ಒಂದು ಸಣ್ಣಗಾತ್ರದ ಮರ. ಬೆಟ್ಟಮಾವು ಪರ್ಯಾಯನಾಮ. ಗುಗ್ಗುಳಮರದ (ಕಾಮಿಫೋರ ಮುಕುಲ್ ಪ್ರಭೇದ) ಹತ್ತಿರ ಸಂಬಂಧಿ. ಬರ್ಸರೇಸೀ ಕುಟುಂಬಕ್ಕೆ ಸೇರಿದೆ.
ಭೌಗೋಳಿಕ
[ಬದಲಾಯಿಸಿ]ಏಷ್ಯ ಮತ್ತು ಆಫ್ರಿಕಗಳ ಮೂಲ ವಾಸಿಯಾದ ಇದು ದಕ್ಷಿಣ ಭಾರತದಲ್ಲೆಲ್ಲ ಬಲುಸಾಮಾನ್ಯ. ಶೀಘ್ರವಾಗಿ ಮತ್ತು ಯಾವ ಬಗೆಯ ಆರೈಕೆಯ ಅಗತ್ಯವಿಲ್ಲದೆ ಬೆಳೆಯುವುದರಿಂದ, ಇದನ್ನು ತೋಟಗಳಲ್ಲಿ, ರಸ್ತೆಗಳ ಬದಿಗಳಲ್ಲಿ, ಬೇಲಿಗಳಲ್ಲಿ ಬೆಳೆಸುವುದಿದೆ. ಕಾಂಡತುಂಡುಗಳನ್ನು ನೆಟ್ಟು ಇದನ್ನು ಬೆಳೆಸುವುದೇ ವಾಡಿಕೆಯಲ್ಲಿರುವ ಕ್ರಮ.
ಲಕ್ಷಣಗಳು
[ಬದಲಾಯಿಸಿ]ಮಧ್ಯಮ ಪ್ರಮಾಣದ ಮರ.ಕೆಲವು ೧೫ರಿಂದ ೨೦ ಮೀಟರ್ ಬೆಳೆದರೂ ಸಾಮಾನ್ಯವಾಗಿ ಮಧ್ಯಮ ಪ್ರಮಾಣದ ಮರ[೨]. ಕೊಂಡಮಾವಿನ ತೊಗಟೆ ಬಹಳ ನವುರಾಗಿದ್ದು ಕಾಗದವನ್ನು ಹೋಲುತ್ತದೆ. ಎಲೆ ಹಾಗೂ ಮರದ ತೊಗಟೆಗಳಿಗೆ ಮಾವಿನಹಣ್ಣಿನ ವಾಸನೆಯಿದೆ. ಎಲೆಗಳು ಸಂಯುಕ್ತ ಮಾದರಿಯವು; ಒಂದೊಂದರಲ್ಲೂ 2-5 ಜೋಡಿ ಕಿರು ಎಲೆಗಳಿವೆ. ಎಲೆಗಳ ಜೋಡಣೆ ಪರ್ಯಾಯ ಮಾದರಿಯದು. ಹೂಗಳೂ ಸಂಕೀರ್ಣ ಮಾದರಿಯ ಹೂಗೊಂಚಲುಗಳಲ್ಲಿ ಸಮಾವೇಶಗೊಂಡಿವೆ. ಒಂದೊಂದು ಹೂವಿನಲ್ಲೂ ಸಾಮಾನ್ಯವಾಗಿ 4 ಪುಷ್ಪಪತ್ರಗಳು, 4 ದಳಗಳು, 8-10 ಕೇಸರಗಳು, ಉಚ್ಚಸ್ಥಾನದ ಅಂಡಾಶಯ ಇವೆ. ಅಂಡಕೋಶದಲ್ಲಿ 2-4 ಕೋಣೆಗಳಿದ್ದು ಒಂದೊಂದರಲ್ಲೂ 2 ಅಂಡಕಗಳಿವೆ. ಫಲ ಅಷ್ಟಿಫಲ ಮಾದರಿಯದು. ಗಾತ್ರ ಬಟಾಣಿ ಕಾಳಿನಷ್ಟು.
ಉಪಯೋಗಗಳು
[ಬದಲಾಯಿಸಿ]ಇದರ ಕಾಯಿಯಿಂದ ಉಪ್ಪಿನಕಾಯಿ ಹಾಕುತ್ತಾರೆ. ಈ ಮರದಿಂದ ಗೋಂದು ಮಿಶ್ರಿತ ರೆಸಿನ್ ವಸ್ತುವನ್ನು ಪಡೆಯಬಹುದಾಗಿದ್ದು ಅದನ್ನು ಧೂಪದಂತೆ ಬಳಸುವುದುಂಟು.
ಉಲ್ಲೇಖಗಳು
[ಬದಲಾಯಿಸಿ]- ↑ http://www.theplantlist.org/tpl/record/kew-2733441
- ↑ Ashton et al Field Guide to the Common Trees and Shrubs of Sri Lanka p. 123, `India Diversity Portal: Commiphora caudata' at http://indiabiodiversity.org/species/show/266696 & 'Bihrmann's Caudiciforms: Commiphora caudata' at http://www.bihrmann.com/caudiciforms/subs/com-cau-sub.asp Archived 2015-12-04 ವೇಬ್ಯಾಕ್ ಮೆಷಿನ್ ನಲ್ಲಿ., http://indiabiodiversity.org/species/show/266696