ಗಣರಾಜ್ಯೋತ್ಸವ
| ಗಣರಾಜ್ಯೋತ್ಸವ | |
|---|---|
ಭಾರತೀಯ ಮದ್ರಾಸ ರೆಜಿಮೆಂಟನ ಸೇನೆಯ ಪಥ ಸಂಛಲನ- ಗಣರಾಜ್ಯೋತ್ಸವ -೨೦೦೪ |
|
| ಆಚರಿಸಲ್ಪಡುವ | ಭಾರತ |
| ಪ್ರಕಾರ | ಭಾರತೀಯ |
| ದಿನ | ಜನವರಿ ೨೬ |
| ಆಚರಣೆಗಳು |
ಪ್ರಭಾತಪೆರಿ,ಪಥ ಸಂಛಲನ , ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಸಂಸ್ಕೃತಿಕ ಕಾರ್ಯಕ್ರಮವನ್ನು ಮತ್ತು ಸಿಹಿ ಹಂಚುವದು. |
ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ ೨೬ ರ೦ದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸ೦ವಿಧಾನ ಜಾರಿಗೆ ಬ೦ದು ಭಾರತ ಗಣರಾಜ್ಯವಾದದ್ದು ಜನವರಿ ೨೬, ೧೯೫೦ ರ೦ದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯ೦ತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು೦ಟು. ಇದಲ್ಲದೆ ನವದೆಹಲಿಯಲ್ಲಿ ಭಾರತ ಸಶಸ್ತ್ರ ಪಡೆಗಳ ಪ್ರಭಾತಪೆರಿ ನಡೆಯುತ್ತದೆ.
ಪರಿವಿಡಿ |
ಇತಿಹಾಸ [ಬದಲಾಯಿಸಿ]
ಆಗಸ್ಟ್ ೧೫ ೧೯೪೭ರಂದು ಭಾರತ ಸ್ವತಂತ್ರವಾದ ನಂತರ ಆಗಸ್ಟ್ ೨೯ರಂದು ಡಾ. ಅಂಬೇಡ್ಕರ್ ರವರ ನೇತೃತ್ವದಲ್ಲಿ ಕರಡು ಸಮಿತಿಯ ನೇಮಕಾತಿಯನ್ನು ಮಾಡಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ ೪ ೧೯೪೭ರಂದು ಶಾಸನಸಭೆಯಲ್ಲಿ ಮಂಡಿಸಿತು. ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ ೨೬ ೧೯೫೦ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಭಾರತದ ಸ್ವಾತ೦ತ್ರ್ಯ ಚಳುವಳಿಯಲ್ಲಿ ಜನವರಿ ೨೬, ೧೯೩೦ ರ೦ದು ಭಾರತ ರಾಷ್ಟ್ರೀಯ ಕಾ೦ಗ್ರೆಸ್ ಪೂರ್ಣ ಸ್ವರಾಜ್ಯದ ಧ್ಯೇಯವನ್ನು ಹಾಕಿಕೊ೦ಡಿತ್ತು. ಲಾಹೋರ್ನಲ್ಲಿ ನಡೆದ ಕಾ೦ಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊ೦ಡು ಈ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎ೦ದು ಘೋಷಿಸಲಾಗಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತ೦ತ್ರ್ಯಾನ೦ತರ ಭಾರತದ ಸ೦ವಿಧಾನವನ್ನು ಈ ದಿನದ೦ದೇ ಜಾರಿಗೆ ತರಲಾಯಿತು.
ಮುಖ್ಯ ಅತಿಥಿ [ಬದಲಾಯಿಸಿ]
ಈ ದಿನದಂದು ಭಾರತವು ಇತರ ದೇಶಗಳ ನಾಯಕರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುತ್ತದೆ.
೨೦೧೨
[ರಾಜ]]ಜಿಗ್ಮೆ ವಛುಚ್ಕ್ ]] [[[:ಟೆಂಪ್ಲೇಟು:ಭೂತನ]]
ಇದನ್ನೂ ನೋಡಿ [ಬದಲಾಯಿಸಿ]
ಉಲ್ಲೇಖಗಳು [ಬದಲಾಯಿಸಿ]
- ↑ [http://www.sahistory.org.za/pages/chronology/general/1990s.html "General South African History timeline"] sahistory.org.za Accessed on June 13, 2008.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |