ಗುರು ಪೂರ್ಣಿಮಾ
ವಿಕಿಪೀಡಿಯ ಇಂದ
ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆಯೆಂದು ಆಚರಿಸುತ್ತಾರೆ. ಈ ದಿನದಂದು, ಭಕ್ತಾದಿಗಳು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ.
ಇದೇ ದಿನ ಮಹಾಭಾರತದ ಕರ್ತೃರಾದ ವೇದವ್ಯಾಸರ ಜನ್ಮದಿನ. ಹಾಗಾಗಿ, ಈ ದಿನ ವ್ಯಾಸ ಪೂರ್ಣಿಮೆಯೆಂದೂ ಆಚರಿಸಲ್ಪಡುತ್ತದೆ. ವೇದವ್ಯಾಸರು ತಮ್ಮ ಕಾಲದಲ್ಲಿ ಅಸ್ತಿತ್ವದಲ್ಲಿದ್ದ ಎಲ್ಲ ವೈದಿಕ ಋಕ್ಕುಗಳನ್ನು ಸಂಗ್ರಹಿಸಿ, ಯಜ್ಞ ಯಾಗಾದಿ ಧಾರ್ಮಿಕ ವಿಧಿಗಳಲ್ಲಿ ಅವುಗಳ ಬಳಕೆಯೆ ಆಧಾರದ ಮೇಲೆ ನಾಲ್ಕು ಭಾಗಗಳನ್ನಾಗಿ ವಿಭಾಗಿಸಿ, ತಮ್ಮ ನಾಲ್ಕು ಮುಖ್ಯ ಶಿಷ್ಯರಾದ ಸುಮಂತು, ವೈಷಂಪಾಯನ, ಜೈಮಿನಿ ಹಾಗೂ ಪೈಲರಿಗೆ ಬೋಧಿಸುವ ಮೂಲಕ ವೈದಿಕ ಅಧ್ಯಯನಗಳ ಉದ್ದೇಶಕ್ಕಾಗಿ ನಿಷ್ಠೆಯಿಂದ ಸೇವೆಮಾಡಿದರು. ಈ ವಿಭಜನೆ ಮತ್ತು ಸಂಪಾದನೆಯನ್ನು ಮಾಡಿದ್ದಕ್ಕಾಗಿ ಅವರಿಗೆ "ವ್ಯಾಸ" (ವ್ಯಾಸ = ಸಂಪಾದಿಸು, ವಿಭಾಗಿಸು) ಎಂಬ ಗೌರವ ನಾಮ ದೊರೆಯಿತು.
|
||||||||||||||||
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಉಷಾ ರಾಣಿ