ಗೌತಮ ಬುದ್ಧ
ಗೌತಮ ಬುದ್ಧ ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ,ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾ೦ಗಿಕ ಮಾರ್ಗವನ್ನು ಕ೦ಡುಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕ೦ಡುಹಿಡಿದ ವಿಪಶ್ಶನ[೧] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿ೦ದ ಮುಕ್ತವಾಗಲು ಸಹಾಯ ಮಾಡುತ್ತದೆ.
ಬುದ್ಧನು ಬೌದ್ಧ ಧರ್ಮದ ಸ್ಥಾಪಕ ಎನ್ನುವುದು ಜನಜನಿತವಾಗಿರುವ ಸಂಗತಿಯಾದರೂ ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು ಪಾಲಿ ಭಾಷೆಯಲ್ಲಿ ಧಮ್ಮ ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗು ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ ಕೊನೆಯವನೂ ಅಲ್ಲವೆಂದೂ ಅವನು ಸಾರಿದನು. ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ ಮುಕ್ತರಾಗಬಹುದು ಮತ್ತು ತನ್ನಂತೆ ಎಚ್ಚರದ ಸ್ಥಿತಿಯನ್ನು ಹೊಂದಬಹುದು ಆದರೆ ಈ ಸಿದ್ಧಿಗೆ ಸ್ವಂತ ಪ್ರಯತ್ನ,ಸಾಧನೆ ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನೂ ಬುದ್ಧನೆಂದು ಕರೆಯಬೇಕು ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ ಶಿಷ್ಯರಿಗೆ ಸೂಚಿಸಿದ. ಬುದ್ಧ ಎಂದರೆ ನಿದ್ದೆಯಿಂದ ಎದ್ದವನು ಎಂದರ್ಥ.ಅವನು ಎಲ್ಲರಿಗು ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ.
ಬಾಹ್ಯಕೊಂಡಿಗಳು [ಬದಲಾಯಿಸಿ]
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |