ಚರ್ಚೆಪುಟ:ವಿನಾಯಕ ದಾಮೋದರ ಸಾವರ್ಕರ್

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಗೋಮಾತೆಯ ಬಗೆಗೆ ಸಾವರ್ಕರ್[ಬದಲಾಯಿಸಿ]

‘ಆಕಳು ಒಂದು ಉಪಯುಕ್ತ ಪ್ರಾಣಿ, ಮಾತೆಯಲ್ಲ, ದೇವತೆಯಂತೂ ಅಲ್ಲವೇ ಅಲ್ಲ’ : ವಿನಾಯಕ ದಾಮೋದರ ಸಾವರ್ಕರ್ ವಿನಾಯಕ ದಾಮೋದರ ಸಾವರ್ಕರ್ ಒಂದು ಹಂತದ ವರೆಗೆ ಬ್ರಿಟಿಷರ ವಿರುದ್ಧ ದಿಟ್ಟವಾಗಿ ಧ್ವನಿ ಎತ್ತಿದವರು. ಬಳಿಕ ಬಲಪಂಥೀಯ ಹಿಂದೂ ಸಂಘಟನೆಯಲ್ಲಿ ಅವರು ತೊಡಗಿಕೊಂಡರು. ಗಾಂಧೀ ಹತ್ಯೆಯಲ್ಲಿ ಸಾವರ್ಕರ್ ೬ನೆ ಆರೋಪಿಯಾಗಿ ಅವರು ಗುರುತಿಸಿಕೊಂಡರು. ಆದರೆ ಆರೋಪ ಸಾಬೀತಾಗಲಿಲ್ಲ. ಹಿಂದೂರಾಷ್ಟ್ರ ಪ್ರತಿಪಾದಕರಾಗಿದ್ದ ವಿನಾಯಕ ದಾಮೋದರ ಸಾವರ್ಕರ್ಸಾವರ್ಕರ್ ಗೋವಿನ ಕುರಿತಂತೆ ಯಾವ ನಿಲುವು ಹೊಂದಿದ್ದರು ಎನ್ನೂದನ್ನು ಇಲ್ಲಿ ಕೊಡಲಾಗಿದೆ. (‘ಆಕಳು ಒಂದು ಉಪಯುಕ್ತ ಪ್ರಾಣಿ, ಮಾತೆಯಲ್ಲ, ದೇವತೆಯಂತೂ ಅಲ್ಲವೇ ಅಲ್ಲ’- ಮಹಾರಾಷ್ಟ್ರ ಶಾರದಾ, ಎಪ್ರಿಲ್ 1935) ದಿಂದ ಇದನ್ನು ಆರಿಸಲಾಗಿದೆ. *ಡಾ ಪಂಡಿತಾರಾಧ್ಯ ಕನ್ನಡ ಪ್ರಾಧ್ಯಾಪಕ,ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮಾನಸಗಂಗೋತ್ರಿ ಮೈಸೂರು ಇವರು ಸಾವರ್ಕರ್ ಮಾತುಗಳನ್ನು ಸಂಗ್ರಹಿಸಿ ಇಲ್ಲಿ ನೀಡಿದ್ದಾರೆ. _____________

‘‘ಹಸು, ಎತ್ತುಗಳನ್ನು ಪೂಜಿಸುವುದು ಹಿಂದೂ ಧರ್ಮಕ್ಕೆ ವಿಶಿಷ್ಟವಾದ ಸಂಗತಿ ಯಲ್ಲ. ಪ್ರಪಂಚದ ವಿವಿಧ ಕಡೆ ಜೀವಸಷ್ಟಿಗೆ ಕಾರಣವಾದ ಪುರುಷ ಮತ್ತು ಸ್ತ್ರೀ ಅವಯವಗಳ ಪ್ರತೀಕಗಳಾಗಿ ವಷಭ ಮತ್ತು ಗೋವಿನ ಪೂಜೆ ನಡೆಯುತ್ತಿತ್ತು.’’‘‘ನಾನು ಕಂಡ ಹಲವು ಪ್ರಾಮಾಣಿಕ, ಶ್ರೇಷ್ಠ, ಸಭ್ಯ ಗೋಭಕ್ತರು ಗೋಮಾತೆಯ ಗಂಜಲ ಮತ್ತು ಸಗಣಿಗಳಿಗೆ ಬ್ರಹ್ಮವಾದದ ಆಧಾರ ನೀಡಿ ಪಂಚಗವ್ಯ ಸೇವಿಸುತ್ತಾರೆ. ಗಂಜಲವನ್ನು ದೇವಾಲಯದಲ್ಲಿ ಸಿಂಪಡಿಸುತ್ತಾರೆ. ಆದರೆ ಅವರಿಗಿಂತಲೂ ಪ್ರಜ್ಞಾವಂತರಾದ ಡಾ ಅಂಬೇಡ್ಕರ್‌ರಂಥ ಶುದ್ಧ ಮತ್ತು ಪೂರ್ವಾಸ್ಪಶರ ಕೈಯಿಂದ ನಿರ್ಮಲ ಗಂಗೋದಕ ಕುಡಿಯುವುದಿಲ್ಲ! ಅದು ಮೈಗೆ ಸಿಂಪಡಿಸಿದರೂ ಮೈಲಿಗೆಯಾಯಿತೆಂದು ಸ್ನಾನ ಮಾಡುತ್ತಾರೆ.’’

‘‘ಹಸು ದೇವತೆ ಎಂದೂ ಹಾಗೆಯೇ ವರಾಹಾವತಾರಿಯಾದ ದೇವರು ಹಂದಿ ಎಂದು ಪುರಾಣ ಹೇಳುತ್ತದೆ. ಹೀಗಿರುವಾಗ ಗೋರಕ್ಷಣೆಯೇ ಏಕೆ ಬೇಕು? ಹಂದಿ ರಕ್ಷಣೆ ಸಂಘವನ್ನು ಸ್ಥಾಪಿಸಿ ಹಂದಿಪೂಜೆಯನ್ನೇಕೆ ಬಳಕೆಗೆ ತರಬಾರದು? ಮನುಷ್ಯನು ಎಲ್ಲ ರೀತಿಯಿಂದ ತನಗಿಂತ ಹೀನಗುಣವಿರುವ ಪಶುವನ್ನು ದೇವರೆಂದು ಒಪ್ಪುವುದರಿಂದ ಮನುಷ್ಯನನ್ನೇ ಪಶುವಿಗಿಂತಲೂ ಕೀಳೆಂದು ಒಪ್ಪಿ ಮಾನವೀಯತೆಯನ್ನು ಗೌಣಗೊಳಿಸಿದಂತಾಗುತ್ತದೆ.’’

‘‘ಮನುಷ್ಯ ಎಲ್ಲ ದಷ್ಟಿಯಿಂದ ತನಗಿಂತಲೂ ಸರ್ವಶ್ರೇಷ್ಠವಾದ ಪ್ರತೀಕವನ್ನು ಮಾತ್ರ ದೇವರೆಂದು ಸ್ವೀಕರಿಸಬೇಕು. ಕತ್ತೆ ಬೇಕಾದರೆ ಗೋವನ್ನು ತನಗಿಂತ ಶ್ರೇಷ್ಠ ಎಂದು ಸ್ವೀಕರಿಸಲಿ. ಆದರೆ ಮನುಷ್ಯ ಹಾಗೆ ಮಾಡುವುದು ಮೂರ್ಖತನ.’’‘‘ಇಂದಿನ ಪರಿಸ್ಥಿತಿಯಲ್ಲಿ ಅರ್ವಾಚೀನ ಮತ್ತು ಪ್ರಯೋಗಸಿದ್ಧ ವಿಜ್ಞಾನವೇ ನಮ್ಮ ರಾಷ್ಟ್ರದ ವೇದವಾಗಬೇಕು.

ಈ ಪ್ರವತ್ತಿಗೆ ಗೋಪೂಜೆ ಹೊಂದಿಕೆಯಾಗದಿದ್ದರೆ ಅದನ್ನು ಬಿಡಬೇಕು. ಇಂಥ ಮೂರ್ಖತನಕ್ಕೆ ಧರ್ಮ ಎಂದು ಪುರಾಣಗಳು ಹೇಳಿರುವುದಕ್ಕೆ ತಲೆದೂಗಿದರೆ ರಾಷ್ಟ್ರದ ಸರ್ವನಾಶ ಖಂಡಿತ. ಗೋಪೂಜೆಯಿಂದ ಆಗುವ ಲಾಭಕ್ಕಿಂತ ಹಾನಿ ಅತ್ಯಂತ ಘಾತುಕ. ಒಂದು ವೇಳೆ ಗೋಹತ್ಯೆ ನಡೆದರೂ ಅಡ್ಡಿಯಿಲ್ಲ. ರಾಷ್ಟ್ರದ ಬುದ್ಧಿಹತ್ಯೆ ಮಾತ್ರ ಆಗಬಾರದು.

ಹಸು ಮತ್ತು ಎತ್ತು ನಮ್ಮ ಕಷಿಪ್ರಧಾನ ರಾಷ್ಟ್ರಕ್ಕೆ ಉಪಯುಕ್ತ ಪ್ರಾಣಿಗಳು ಎಂದು ಆ ಪ್ರಾಣಿಗಳನ್ನು ಎಷ್ಟು ಬೇಕೊ ಅಷ್ಟು ಬಳಸಿದರೆ ಸಾಕು. ಅದರ ಬದಲು ಅದು ದೇವತೆ, ಪುರಾಣದಲ್ಲಿ ಅದನ್ನು ಪೂಜಿಸುವುದನ್ನು ಧರ್ಮ ಎಂದು ಹೇಳಿದೆ ಎಂದು ಬೊಗಳೆ ಬಿಟ್ಟರೆ ರಾಷ್ಟ್ರಕ್ಕೆ ನೂರುಪಟ್ಟು ಹಾನಿಯಾಗುತ್ತದೆ. ಅಲ್ಪ ಲಾಭಕ್ಕಾಗಿ ಹೆಚ್ಚಿನದನ್ನು ಕಳೆದುಕೊಳ್ಳುತ್ತೇವೆ.’’

‘‘ಪಶುವನ್ನು ದೇವರೆಂದು ಹೇಳಿದರೂ ದೇವರನ್ನೇ ಪಶುಗಿಂತಲೂ ಹೀನವಾಗಿ ಕಾಣಲಾಗಿದೆ. ಹಸುವಿನ ಶರೀರದಲ್ಲಿ 33 ಕೋಟಿ ದೇವತೆಗಳಿದ್ದಾರೆಂದು ಬಣ್ಣಿಸಿ, ಅದರ ಗಂಜಲ, ಸಗಣಿ ವಿಸರ್ಜನೆಯಾಗುವ ಸ್ಥಳಗಳಲ್ಲಿಯೂ ದೇವರನ್ನು ಸ್ಥಾಪಿಸಲಾಗಿದೆ! ಕಟುಕನು ದನವನ್ನು ಒಂದೇ ಹೊಡೆತಕ್ಕೆ ಕೊಲ್ಲುವಾಗ ಆ ದೇವತೆಗಳಲ್ಲಿ ಒಬ್ಬನಾದರೂ ಕಟುಕನನ್ನು ಏಕೆ ತಡೆಯುವುದಿಲ್ಲ? ಆ ದೇವರೂ ಭಕ್ತರಂತೆ ಹೇಡಿಯೇ? ಕಟುಕನೇ 33 ಕೋಟಿ ದೇವತೆಗಳಿಗಿಂತ ಪರಾಕ್ರಮಿಯೆ?’’‘‘ ಹಸು ಮಹಾಮಾತೆಯಾಗಿರುವವನೇ ಹಿಂದೂ ಎನ್ನುವುದು ಹಿಂದುತ್ವಕ್ಕೆ ಮಾಡುವ ಅಪಮಾನ. ಹಸು ಕರುವಿಗೆ ಮಾತ್ರ ತಾಯಿ, ಹಿಂದೂಗಳಿಗಲ್ಲ.

‘ಗೋರಕ್ಷಣೆಯೇ ಧರ್ಮ’, ‘ಸ್ವಧರ್ಮೇ ನಿಧನಂ ಶ್ರೇಯಃ’ ಎಂದಾಗ ವಿವೇಕ, ಬುದ್ಧಿ ಸಂಪೂರ್ಣ ಕುರುಡಾಗಿ ಪ್ರಜ್ಞೆ ತಪ್ಪಿದ ಅನುಭವವಾಗುತ್ತದೆ.’’‘‘ಇಂಥ ಅನಾಗರಿಕ ಮತ್ತು ಮೂರ್ಖ ಸಂಸ್ಕಾರಕ್ಕೆ ತಿಲಾಂಜಲಿ ನೀಡುವುದೇ ನಮ್ಮ ಧರ್ಮ ಮತ್ತು ಸಂಸ್ಕತಿಗೆ ಶೋಭಿಸುವ ಮಾರ್ಗ. ಇಂದಿನ ವೈಜ್ಞಾನಿಕ ಯುಗದಲ್ಲಿ ಗೋರಕ್ಷಣೆಯ ದಷ್ಟಿಯಿಂದ ಹಸುವನ್ನು ದೇವತೆ ಎಂದು ಒಪ್ಪುವುದು ಮೂರ್ಖತನ. ಗೋರಕ್ಷಣೆಗೆ ಧಾರ್ಮಿಕ ಸ್ವರೂಪ ಬಿಟ್ಟು ಆರ್ಥಿಕ, ವೈಜ್ಞಾನಿಕ ಸ್ವರೂಪ ನೀಡುವುದು ಉಚಿತ. ಹಸು ಎತ್ತುಗಳನ್ನು ದೇವರೆಂದು ತೋರಿಸುತ್ತ ತಿರುಗುವ ಗೋಭಕ್ತನನ್ನು ತಡೆದು ಎತ್ತನ್ನು ನೊಗಕ್ಕೆ ಹೂಡಬೇಕು; ಅವನನ್ನು ದೇಶಸೇವೆಗೆ ದುಡಿಸಬೇಕು’’ (ಸಾವರ್ಕರ್: ಒಂದು ಅಭಿನವ ದರ್ಶನ, ಅನುವಾದ: ಚಂದ್ರಕಾಂತ ಪೋಕಳೆ ಬೆಳಗಾವಿ 2009 ಪು.27-37).

ಸಾವರಕರ್, ಗೋರಕ್ಷಣೆಯ ಹುಚ್ಚುತನದಂತೆ ಧಾರ್ಮಿಕ ನಂಬಿಕೆಯ ಗೋಭಕ್ಷಣೆಯ ಕ್ರೌರ್ಯವನ್ನೂ ಖಂಡಿಸಿದ್ದಾರೆ. ಆದುದರಿಂದ ಸರಕಾರ ಗೋರಕ್ಷಣೆಯ ಮಸೂದೆಯನ್ನು ಹಿಂದಕ್ಕೆ ಪಡೆದು ಅದರ ಬಗ್ಗೆ ಮತಧರ್ಮ ನಿರಪೇಕ್ಷ ಪ್ರಜಾಪ್ರಭುತ್ವದ ಗೌರವಕ್ಕೆ ಸಲ್ಲುವಂತೆ ವ್ಯಾಪಕವಾದ ವೈಚಾರಿಕ, ವೈಜ್ಞಾನಿಕ ಸಾರ್ವಜನಿಕ ಚರ್ಚೆ ನಡೆಸುವುದು ಅಗತ್ಯ.

ಕೃಪೆ : ಬಶೀರ ಬಿ.ಎಂ. ಅವರ ಫೇಸಬುಕ್ ಟೈಮ್ ಲೈನ್ [[೧]]

  • Bschandrasgr ೧೩:೪೯, ೧೮ ಸೆಪ್ಟೆಂಬರ್ ೨೦೧೪ (UTC)

ಕಾಗುಣಿತ ತಿದ್ದುಪಡಿ ಮತ್ತು ವಿಷಯ ಕೊಂಡಿ ಸೇರಿಸಬೇಕು..ಅನುಮತಿಸಿ[ಬದಲಾಯಿಸಿ]

ಕಾಗುಣಿತ ತಿದ್ದುಪಡಿ ಮತ್ತು ವಿಷಯ ಕೊಂಡಿ ಸೇರಿಸಬೇಕು..ಅನುಮತಿಸಿ 223.186.114.140 ೦೩:೨೮, ೨೪ ಆಗಸ್ಟ್ ೨೦೨೨ (UTC)