ಛತ್ರಪತಿ ಶಿವಾಜಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಛತ್ರಪತಿ ಶಿವಾಜಿ ಮಹಾರಾಜರು
ರಾಜ/ಅಧಿಪತಿ
ಮರಾಠ ರಾಜ ಶಿವಾಜಿಯ ತೈಲಚಿತ್ರ
ರಾಜ್ಯಭಾರಕ್ರಿ.ಶ.೧೬೭೪ - ೧೬೮೦
ಪಟ್ಟಧಾರಣೆ೬ ಜೂನ್ ೧೬೭೪
ಪೂರ್ಣ ಹೆಸರುಶಿವಾಜಿರಾಜೆ ಶಹಾಜಿರಾಜೆ ಭೋಸ್ಲೆ
ಬಿರುದುಗಳುಛತ್ರಪತಿ
ಹುಟ್ಟುಕ್ರಿ.ಶ.೧೬೨೭ ಅಥವಾ ೧೯ ಫೆಬ್ರವರಿ ೧೬೩೦
ಹುಟ್ಟುಸ್ಥಳಶಿವನೇರಿದುರ್ಗ, ಶಿವನೇರಿ, ಅಹ್ಮದ್ ನಗರ ಸುಲ್ತಾನ್ ಪ್ರಾಂತ್ಯ (ಈಗ ಮಹಾರಾಷ್ಟ್ರ ರಾಜ್ಯ, ಭಾರತ)
ಸಾವು೩ ಏಪ್ರಿಲ್ ೧೬೮೦ (ತೀರಿದಾಗ ವಯಸ್ಸು ೫೦-೫೩)
ಸಾವಿನ ಸ್ಥಳರಾಯಗಡ ಕೋಟೆ, ರಾಯಗಡ, ಮರಾಠ ಸಾಮ್ರಾಜ್ಯ
ಸಮಾಧಿ ಸ್ಥಳರಾಯಗಡ
ಉತ್ತರಾಧಿಕಾರಿಛತ್ರಪತಿ ಸಂಭಾಜಿ ಮಹಾರಾಜ್ ಭೋಸ್ಲೆ
Consort toಸಯಿಬಾಯಿ
ಸಂತತಿಸಂಭಾಜಿ
ವಂಶಮರಾಠಾ ಸಾಮ್ರಾಜ್ಯ
ತಂದೆಶಹಾಜಿ ಭೋಂಸ್ಲೆ
ತಾಯಿಜೀಜಾಬಾಯಿ

ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು.

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ.

ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

ಮಹಾರಾಷ್ಟ್ರದ ಅಸ್ಮಿತೆ ಶಿವಾಜಿ ಭೋಂಸ್ಲೆ ಅವರ ಕುಟುಂಬದ ತಾಯಿಬೇರು ಕನ್ನಡನಾಡಿನಲ್ಲಿದೆ.ಕರ್ನಾಟಕಕ್ಕೂ ಮರಾಠರಿಗೂ ರಾಜಕೀಯ ಒಡನಾಟ ಆರಂಭವಾಗಿದ್ದು ೧೭ನೇ ಶತಮಾನದ ಮೊದಲರ್ಧದಲ್ಲಿ.ರಾಜ್ಯ ವಿಸ್ತರಣೆಯಲ್ಲಿ ಮೊಘಲರಿಗೂ ಬಿಜಾಪುರದ ಆದಿಲ್ ಶಾಹಿಗಳಿಗೂ ಕರಾರು ಏರ್ಪಟ್ಟು(೧೬೩೬) ಕರ್ನಾಟಕದ ದಕ್ಷಿಣ ಭಾಗ ಹಾಗೂ ತಮಿಳುನಾಡಿನ ಕೆಲವು ಭಾಗಗಳ ಮೇಲೆ ಹಿಡಿತ ಸಾಧಿಸಲು ಹವಣಿಸುತ್ತಿದ್ದರು.ಇದರಿಂದಾಗಿ ವಿಜಾಪುರದ ಸುಲ್ತಾನರು ಈ ಪ್ರದೇಶಗಳಲ್ಲಿ ಆಗಿಂದ್ದಾಗ್ಗೆ ದಂಡಯಾತ್ರೆಗಳನ್ನು ನಡೆಸುತ್ತಲೇ ಇದ್ದರು.ಇಂತಹ ದಂಡಯಾತ್ರೆಗಳಲ್ಲಿ ಮರಾಠಿ ಸರದಾರರು ಮುಂಚೂಣಿಯಲ್ಲಿದ್ದು ಬಹುತೇಕ ಗೆಲುವುಗಳಿಗೆ ಕಾರಣರಾಗಿದ್ದರು.ಇಂತಹ ಧೈರ್ಯಶಾಲಿ ಮರಾಠಿ ಸರದಾರರದಲ್ಲಿ ಮಾಲೋಜಿ ಭೋಂಸ್ಲೆಯ ಮಗ ಶಹಾಜಿ ಭೋಂಸ್ಲೆ ಅವರೂ ಒಬ್ಬರು. ವಿಜಾಪುರದ ಅಣತಿಯಂತೆ ಸೈನ್ಯ ಮುನ್ನಡೆಸುತ್ತಿದ್ದ ಶಹಾಜಿ ಹಾಗೂ ರಣದುಲ್ಲಾ ಖಾನ್​ರು ಬೆಂಗಳೂರು ಕೆಂಪೇಗೌಡರ ಸೈನ್ಯದೊಡನೆ ಮುಖಾಮುಖಿಯಾಗಿದ್ದು ೧೬೩೮ರ ಡಿಸೆಂಬರ್ ಮಾಹೆಯಲ್ಲಿ.ಜೋರು ಕಾಳಗದ ಬಳಿಕ ಸಂಧಿ ಏರ್ಪಟ್ಟು ಕೆಂಪೇಗೌಡ ತನ್ನ ರಾಜಧಾನಿಯನ್ನು ಮಾಗಡಿಗೆ ಸ್ಥಳಾಂತರಿಸಿದಾಗ ಬೆಂಗಳೂರು ಕೋಟೆ ವಿಜಾಪುರ ಸುಲ್ತಾನರ ಕೈವಶವಾಯಿತು.ಆಗ ಬೆಂಗಳೂರನ್ನು ಮಹಮ್ಮದ್ ಆದಿಲ್ ಷಾನಿಂದ ಜಹಗೀರು ಪಡೆದರು ಶಹಾಜಿ ಭೋಂಸ್ಲೆ.ಛತ್ರಪತಿ ಶಿವಾಜಿ ಸತ್ತ ಸ್ಥಳ ಚಿತ್ರದುರ್ಗದ ಬೊಮ್ಮಸಮುದ್ರ.

ಬಾಲ್ಯ[ಬದಲಾಯಿಸಿ]

ಬಾಲ್ಯದ ಶಿವಾಜಿ ಹಾಗೂ ತಾಯಿ ಜೀಜಾಬಾಯಿ

ಬಹುಪಾಲು ಸಮಯವನ್ನು ಯುದ್ಧಗಳಲ್ಲಿಯೇ ಕಳೆಯುತ್ತಿದ್ದ ಶಹಾಜಿ ಅವರು ಜೀಜಾಬಾಯಿಯ ಲಗ್ನವಾಗಿದ್ದರು. ಇವರ ಮಗನಾಗಿ ಶಿವಾಜಿ ಹುಟ್ಟಿದ್ದು ಪುಣೆಯ ಸಮೀಪದ ಶಿವನೇರಿ ದುರ್ಗದಲ್ಲಿ. ಬೆಂಗಳೂರನ್ನು ಜಹಗೀರಾಗಿ ಪಡೆದು ಅದನ್ನು ಮುಖ್ಯ ಸೇನಾನೆಲೆಯನ್ನಾಗಿ ಮಾಡಿಕೊಂಡು ದ್ವಿತೀಯ ಪತ್ನಿ ಸುಧಾಬಾಯಿಯೊಡನೆ ವಾಸಿಸುತ್ತಿದ್ದರು. ಇಲ್ಲಿ ಶಹಾಜಿ ಜಾಗೀರುದಾರರಾಗಿದ್ದರೂ ಸ್ವತಂತ್ರ ರಾಜರಂತೆಯೇ ಆಡಳಿತ ನಡೆಸುತ್ತಿದ್ದರು. ತಮ್ಮದೇ ಆದ ನಾಣ್ಯಗಳನ್ನು ಠಂಕಿಸುತ್ತಿದ್ದರು. ಕೋಟೆ ಪ್ರದೇಶದಲ್ಲಿ ಗೌರಿ ಮಹಲ್ ಎಂಬ ಸುಸಜ್ಜಿತ ಮನೆಯನ್ನು ನಿರ್ವಿುಸಿದ್ದರು. ನಂದಿಬೆಟ್ಟ ಆಗಲೇ ಶಹಾಜಿ ಬೇಸಿಗೆ ರಾಜಧಾನಿಯಾಗಿತ್ತು. ಶಿವಾಜಿಯ ಮೊದಲ ಮಗ ಸಂಬಾಜಿ ಕೋಲಾರ- ದೊಡ್ಡಬಳ್ಳಾಪುರ ಪ್ರದೇಶಗಳ ಆಡಳಿತ ವ್ಯವಸ್ಥೆ ನೋಡಿಕೊಳ್ಳುತ್ತಿದ್ದರು.

ಯುದ್ಧಕಲೆ[ಬದಲಾಯಿಸಿ]

ತನ್ನ ೧೨ನೇ ವಯಸ್ಸಿನವರೆಗೆ ಬೆಂಗಳೂರಿನಲ್ಲೇ ವಾಸವಿದ್ದ ಶಿವಾಜಿಗೆ ಆರಂಭಿಕ ಶಿಕ್ಷಣವನ್ನು ಕೊಟ್ಟವರು ಅಣ್ಣ ಸಂಬಾಜಿ. ನಂತರ ಶಿವನೇರಿ ದುರ್ಗಕ್ಕೆ ಹಿಂತಿರುಗಿದ ಶಿವಾಜಿಗೆ ಪೂರ್ಣಪ್ರಮಾಣದ ಯುದ್ಧ ಕೌಶಲವನ್ನು ಧಾರೆ ಎರೆದವರು ದಾದಾಜಿ ಕೊಂಡದೇವ. ಕತ್ತಿವರಸೆ,ಕುದುರೆ ಸವಾರಿ, ಯುದ್ಧಕಲೆಗಳನ್ನು ಕರಗತ ಮಾಡಿಕೊಂಡ ಶಿವಾಜಿ ೧೭ನೇ ವಯಸ್ಸಿಗೆ ತೋರಣದುರ್ಗ ವಶಪಡಿಸಿಕೊಂಡು ಮಹತ್ವಾಕಾಂಕ್ಷೆಯ ಹೆಜ್ಜೆಗಳನ್ನು ಇಡಲು ಆರಂಭಿಸಿದ್ದರು. ಎಳೆಯ ವಯಸ್ಸಿನಿಂದಲೇ ತಾಯಿ ಜೀಜಾಬಾಯಿಯಿಂದ ಜೀವನ ಮೌಲ್ಯಗಳ ಶಿಕ್ಷಣ ಪಡೆದಿದ್ದ ಶಿವಾಜಿ ಸಂತ ರಾಮದಾಸರ ಪರಮಭಕ್ತರಾಗಿದ್ದರು.

ಶಹಾಜಿ ಜಾಗೀರು ನೋಡಿಕೊಳ್ಳುತ್ತಿದ್ದ ದಾದಾಜಿ ಕೊಂಡದೇವ ಅವರಿಂದ ಪರಿಪೂರ್ಣ ಸೈನಿಕ ಶಿಕ್ಷಣ ಪಡೆದಿದ್ದ ಶಿವಾಜಿ ಕಾಡುಮೇಡುಗಳಲ್ಲಿ ಸುತ್ತಾಡಿ ಅನುಭವ ಪಡೆದರು. ಪಶ್ಚಿಮ ಘಟ್ಟಗಳ ಮಾವಳರೆಂಬ ಗಿರಿಜನರನ್ನು ಕಂಡ ಶಿವಾಜಿ ಅವರ ಧೈರ್ಯ ಸಾಹಸಗಳನ್ನು ನೋಡಿ ಅವರನ್ನೆಲ್ಲಾ ಸೇರಿಸಿ ಬಲವಾದ ಪಡೆ ಕಟ್ಟಲು ಆರಂಭಿಸಿದರು. ಪ್ರಮುಖ ಮರಾಠ ನಾಯಕರೂ ಇವರೊಡನೆ ಕೈ ಜೋಡಿಸಿದರು. ತಂದೆ ಜಹಗೀರಾದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಸಂದರ್ಭದಲ್ಲೆ ಅದೇ ಪ್ರದೇಶಕ್ಕೆ ಸನಿಹವಿದ್ದ ಮರೆಯಲಾಗದ ಮಹಾಸಾಮ್ರಾಜ್ಯವಾದ ವಿಜಯನಗರವನ್ನು(ಆ ವೇಳೆಗೆ ಪತನವಾಗಿತ್ತು) ಅದರ ಅವಶೇಷಗಳನ್ನು ಕಂಡು ಬಂದಿದ್ದರು ಯುವಕ ಶಿವಾಜಿ.

ವಿವಾಹ[ಬದಲಾಯಿಸಿ]

ತಾಯಿ ಜೀಜಾಬಾಯಿ ಹಾಗೂ ಗುರು ಕೊಂಡದೇವರೊಂದಿಗೆ ಬೆಂಗಳೂರಿಗೆ ಬಂದ ಶಿವಾಜಿ ವಿವಾಹ ನೆರವೇರಿದ್ದು ೧೬೪೦-೪೨ರ ಸುಮಾರಿಗೆ. ಆಗ ಬೆಂಗಳೂರು ಕೋಟೆಯೊಳಗೆ ಇದ್ದ ಗೌರಿಮಹಲ್​ನಲ್ಲಿ ಶಿವಾಜಿ ಮೊದಲ ವಿವಾಹ ನಿಂಬಾಳ್ಕರ್ ಮನೆತನದ ಸಾಯಿಬಾಯಿ ಜೊತೆಗೆ ವಿಜೃಂಭಣೆಯಿಂದ ಜರುಗಿತು. ಪರದೇಶಿಗಳ ಆಳ್ವಿಕೆಯಿಂದ ನಲುಗಿಹೋಗಿದ್ದ ಹಿಂದೂಸ್ಥಾನವನ್ನು ಒಗ್ಗೂಡಿಸುವ ಮಹತ್ವದ ನಿರ್ಧಾರಕ್ಕೆ ಬಂದ ಶಿವಾಜಿ ಮೊದಲಿಗೆ ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದರು. ಯುದ್ಧಕೌಶಲದಿಂದ ಹಲವಾರು ಯುದ್ಧಗಳಲ್ಲಿ ವಿಜಯ ಸಾಧಿಸಿ ೧೬೭೪ರಲ್ಲಿ ಮರಾಠ ರಾಜ್ಯಕ್ಕೆ ನಾಂದಿಹಾಡಿದರು.

ಕಿರೀಟಧಾರಣೆ[ಬದಲಾಯಿಸಿ]

೧೬೭೪ರಲ್ಲಿ ರಾಯಘಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಿರೀಟಧಾರಣೆ

೧೬೭೪ರಲ್ಲಿ ರಾಯಘಡದಲ್ಲಿ ಕಿರೀಟಧಾರಣೆಯ ಬಳಿಕ ಛತ್ರಪತಿ ಶಿವಾಜಿ ಮಹಾರಾಜ್ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಸ್ವಾಭಿಮಾನಿ ರಾಷ್ಟ್ರನಿರ್ವಣಕ್ಕೆ ಹೋರಾಡಿದ ಶಿವಾಜಿ ೧೬೮೦ಲ್ಲಿ ಕಾಲವಾದರೂ ಅವರು ಸ್ಥಾಪಿಸಿದ ಮರಾಠರಾಜ್ಯ ೧೮೧೮ರವರೆಗೆ ಉಜ್ವಲವಾಗಿ ಬೆಳಗಿತು.

ಗುರುಕಾಣಿಕೆ[ಬದಲಾಯಿಸಿ]

೧೭ನೇ ಶತಮಾನದಲ್ಲಿ, ಶಿವಾಜಿ ಪೂರ್ವ ಭಾರತದಲ್ಲಿ ರಾಜ್ಯಭಾರ ಮಾಡುತ್ತಿದ್ದರು. ಅವರ ತಾಯಿ ಜೀಜಾಮಾತೆಯು ಶಿವಾಜಿಗೆ ಸಣ್ಣ ವಯಸ್ಸಿನಿಂದಲೂ ನಾಮಜಪವನ್ನು ಮಾಡಿಸುತ್ತಿದ್ದಳು. ಒಬ್ಬ ರಾಜನಿಗೆ ಬೇಕಾದ ಎಲ್ಲ ಯುದ್ಧಕಲೆಗಳನ್ನೂ ಜೀಜಾಮಾತೆಯು ಶಿವಾಜಿಗೆ ಕಲಿಸಿದ್ದಳು. ಜೀಜಾಮಾತೆ ಮತ್ತು ಗುರು ರಾಮದಾಸ ಸ್ವಾಮಿಗಳ ಮಾರ್ಗದರ್ಶನದಲ್ಲಿ ಶಿವಾಜಿಯು ಆದರ್ಶ ರಾಜನಾದನು. ಶಿವಾಜಿಯು ಧೈರ್ಯದಿಂದ ಮರಾಠರನ್ನು ಮೊಗಲರ ವಿರುದ್ಧ ಮುನ್ನಡೆಸಿದನು. ಶಿವಾಜಿಯು ಆದರ್ಶ ರಾಜ್ಯವನ್ನು ಸ್ಥಾಪಿಸಿದನು. ಶಿವಾಜಿಯು ರಾಜ್ಯವನ್ನು ಧೈರ್ಯ,ಸಹನೆ ಮುಂತಾದ ಆಧ್ಯಾತ್ಮಿಕ ಗುಣಗಳ ಬಲದಲ್ಲಿ ಸ್ಥಾಪಿಸಿದ್ದನು.

ಮರಣ[ಬದಲಾಯಿಸಿ]

ಶಿವಾಜಿ ಮಹಾರಾಜರು 1680 ಏಪ್ರಿಲ್ 03 ರಂದು ಮರಣ ಹೊಂದಿದರು.

ರಾಯಗಡ ಕೋಟೆ
ರಾಯಗಡ ಕೋಟೆಯಲ್ಲಿರುವ ಶಿವಾಜಿ ಮಹಾರಾಜರ ಸಮಾಧಿ