ಜಗದೀಶ್ಚಂದ್ರ ಬೋಸ್

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಜಗದೀಶ್ಚಂದ್ರ ಬೋಸ್

ಸರ್ ಜಗದೀಶ್‌ಚಂದ್ರ ಬೋಸ್, ಸಿಎಸ್‌ಐ , ಸಿಐಈ, ಎಫ್‌ಆರ್‌ಎಸ್ (ನವೆಂಬರ್ ೩೦, ೧೮೫೮ನವೆಂಬರ್ ೨೩, ೧೯೩೭) ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ. ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನೆಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಟ ವಿಜ್ಞಾನಿಗಳಲ್ಲೊಬ್ಬರಾಗಿದ್ದರು. ಬೋಸರು ಸಸ್ಯಗಳು ಸಹ ಪ್ರಾಣಿಗಳ ಹಾಗೆ ಹೊರ ಪ್ರಭಾವಗಳಿಗೆ ಸ್ಪಂದಿಸುತ್ತವೆಂದು ಜಗತ್ತಿಗೆ ಸಾಬೀತು ಮಾಡಿ ತೊರಿಸಿದವರು. ಭಾರತ ಉಪಖಂಡದಲ್ಲಿ ಪ್ರಯೋಗವಿಜ್ಞಾನಕ್ಕೆ ಅಡಿಪಾಯ ಹಾಕಿದವರು ಇವರು. ರೇಡಿಯೋ ವಿಜ್ಞಾನದ ತಂದೆ ಎಂದೂ , ಬೆಂಗಾಲಿ ವಿಜ್ಞಾನಸಾಹಿತ್ಯದ ತಂದೆ ಎಂದೂ ಇವರನ್ನು ಪರಿಗಣಿಸಲಾಗುತ್ತದೆ. ತಮ್ಮ ಸಂಶೋಧನೆಗಳಿಗೆ ನೆರವಾಗುವಂತಹ ಅನೇಕ ಉಪಕರಣಗಳನ್ನು (ಕ್ರೆಸ್ಕೊಗ್ರಾಫ್ ಹಾಗು ಕೊಹೆರರ್) ತಾವೇ ಸ್ವತಃ ಕಂಡುಹಿಡಿದಿದ್ದರು. ಅಮೇರಿಕದ ಪೇಟೆಂಟ್ ತೆಗೆದುಕೊಂಡವರಲ್ಲಿ ಭಾರತೀಯ ಉಪಖಂಡದ ಮೊದಲಿಗರು. ಇದು ಆದದ್ದು ೧೯೦೪ರಲ್ಲಿ.

[ಬದಲಾಯಿಸಿ] ಜೀವನ

ಬ್ರಿಟಿಷ್ ಭಾರತದ ಬೆಂಗಾಲ್ ಪ್ರಾಂತದಲ್ಲಿನ ಮೈಮನಸಿಂಗ್ (ಈಗಿನ ಬಾಂಗ್ಲಾದೇಶ) ಎಂಬ ಊರಿನಲ್ಲಿ ಇವರು ಜನಿಸಿದರು. ಕಲಕತ್ತೆಯ ಸೇಂಟ್ ಝೇವಿಯರ್ ಶಾಲೆ ಹಾಗು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಒದಿ, ಬಿ ಎ ಒದಲು ಲಂಡನ್ನಿಗೆ ವೈದ್ಯಕೀಯವನ್ನು ಕಲಿಯಲು ತೆರಳಿದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ತಮ್ಮ ಓದನ್ನು ಮುಂದುವರೆಸಲಾಗಲಿಲ್ಲ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪದವೀಧರರಾಗಿ ೧೮೮೪ರಲ್ಲಿ ಕಲ್ಕತ್ತೆ ಮರಳಿ ಬಂದು ಭೌತಶಾಸ್ತ್ರದ ಪ್ರಾಧ್ಯಾಪಕರಾಗಿ ಪ್ರೆಸಿಡೆನ್ಸಿ ಕಾಲೇಜನ್ನು ಸೇರಿಕೊಂಡರು. ಅಲ್ಲಿ, ಜನಾಂಗಭೇದವಿದ್ದಾಗ್ಯೂ ಮತ್ತು ಸಂಶೋಧನೆಗೆ ಅಗತ್ಯವಾದ ಸಲಕರಣೆಗಳು ಮತ್ತು ಹಣದ ಸಹಾಯ ಇಲ್ಲದೇ ಇದ್ದಾಗ್ಯೂ ಅವರು ತಮ್ಮ ವೈಜ್ಞಾನಿಕ ಸಂಶೋಧನೆಯನ್ನು ನಡೆಸಿದರು. ರೇಡಿಯೋ ಮತ್ತು ವೈರ್‍ಲೆಸ್ ಸಂಕೇತಗಳ ಕುರಿತ ಸಂಶೋಧನೆಯಲ್ಲಿ ಅವರು ಗಮನಾರ್ಹ ಪ್ರಗತಿಯನ್ನು ಸಾಧಿಸಿದರು. ಅವರು ತಮ್ಮ ಸಂಶೋಧನೆಯ ವಾಣಿಜ್ಯಿಕ ಲಾಭ ಮಾಡಿಕೊಳ್ಳುವುದರ ಬದಲು ತಾವು ಕಂಡುಹಿಡಿದುದನ್ನು ಉಳಿದವರು ಅದನ್ನು ಅಭಿವೃದ್ಧಿಪಡಿಸಲೆಂದು ಬಹಿರಂಗಪಡಿಸಿದರು. ನಂತರದಲ್ಲಿ, ಅವರು ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹೊಸದಾರಿ ತೋರುವ ಕೆಲವು ಸಂಶೋಧನೆಗಳನ್ನು ಮಾಡಿದರು. ಸಸ್ಯಗಳು ಪ್ರಚೋದನೆಗೆ ತೋರುವ ಪ್ರತಿಕ್ರಿಯೆಯನ್ನು ಅಳೆಯುವ ಸಾಧನವನ್ನು ತಯಾರುಮಾಡಿ ಪ್ರಾಣಿ ಮತ್ತು ಸಸ್ಯ ಅಂಗಾಂಶಗಳಲ್ಲಿನ ಸಾಮ್ಯತೆಯನ್ನು ವೈಜ್ಞಾನಿಕವಾಗಿ ಸಾಧಿಸಿತೋರಿಸಿದರು. ಹಿತೈಷಿಗಳ ಒತ್ತಡಕ್ಕೆ ಮಣಿದು ತಮ್ಮ ಸಂಶೋಧನೆಗಳಲ್ಲಿ ಒಂದಕ್ಕೆ ಅವರು ಪೇಟೇಂಟ್ ಗಾಗಿ ಅರ್ಜಿ ಸಲ್ಲಿಸಿದರಾದರೂ ಯಾವುದೇ ಬಗೆಯ ಪೇಟೆಂಟ್ ಪಡೆಯುವುದರಲ್ಲಿನ ಅವರ ಅನಾಸಕ್ತಿ ಎಲ್ಲರಿಗೆ ಗೊತ್ತು. ಇದೀಗ , ಅವರು ತೀರಿಕೊಂಡ ಎಪ್ಪತ್ತು ವರುಷಗಳ ನಂತರ ಅವರನ್ನು , ಅವರು ಆಧುನಿಕ ವಿಜ್ಙಾನಕ್ಕೆ ಸಲ್ಲಿಸಿದ ಅನೇಕ ಕೊಡುಗೆಗಳಿಗಾಗಿ ಅವರನ್ನು ಗುರುತಿಸಲಾಗುತ್ತಿದೆ.

ಇವರು 'ರೆಸ್ಪಾನ್ಸ್ ಇನ್ ದಿ ಲಿವಿಂಗ್ ಎಂಡ್ ನಾನ್ ಲಿವಿಂಗ್"(೧೯೦೨) ಹಾಗು "ದಿ ನರ್ವಸ್ ಮ್ಯಕಾನಿಸಮ್ ಆಫ್ ಪ್ಲಾಂಟ್ಸ್"(೧೯೨೬) ಎಂಬ ಎರಡು ಪ್ರಸಿದ್ಧ ಪುಸ್ತಕಗಳನ್ನು ರಚಿಸಿದರು. ಬೋಸರು ೧೯೧೭ರಲ್ಲಿ ಬೋಸ್ ಇನ್ಸ್ಟಿಟ್ಯುಟ್ ಸಂಸ್ಥೆಯನ್ನು ಕಲ್ಕತ್ತದಲ್ಲಿ ಸ್ತಾಪಿಸಿದರು. ೧೯೨೦ರಲ್ಲಿ ಬೋಸರನ್ನು ಲಂಡನ್ನಿನ ಫೆಲೊ ಆಫ್ ರಾಯಲ್ ಸೊಸೈಟಿಯ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ನವೆಂಬರ್ ೨೩, ೧೯೩೭ರಂದು ಜಗದೀಶ್ಚಂದ್ರ ಬೋಸರು ನಿಧನರಾದರು.

[ಬದಲಾಯಿಸಿ] ಸಾಧನೆಗಳು

  • ನೈಟ್ ಹುಡ್ ಪ್ರಶಸ್ತಿ ೧೯೧೬
  • ಫೆಲೊ ಆಫ್ ರಾಯಲ್ ಸೊಸೈಟಿ ಸದಸ್ಯತನ ೧೯೨೦

[ಬದಲಾಯಿಸಿ] ಈ ಲೇಖನಗಳನ್ನೂ ನೋಡಿ

ಭಾರತದ ವಿಜ್ಞಾನಿಗಳು

ವೈಯಕ್ತಿಕ ಉಪಕರಣಗಳು