ಜನ್ನ
ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೮೦-೧೨೬೦)
ಪರಿವಿಡಿ |
[ಬದಲಾಯಿಸಿ] ತಂದೆ ತಾಯಿಗಳು ,ಮತ್ತು ಪರಿವಾರ :
ಈತನ ತಂದೆ ಶಂಕರ(ಕವಿ ಸುಮನೋಬಾಣ)ನು ಹೊಯ್ಸಳ ನಾರಸಿಂಹನಲ್ಲಿ ದಂಡಾಧೀಶನಾಗಿದ್ದನು ; ತಾಯಿ ಗಂಗಾದೇವಿ. ಕನ್ನಡದ ಬಹುಮುಖ್ಯ ಕಾವ್ಯಸಂಕಲನ ಗ್ರಂಥವಾದ ಸೂಕ್ತಿಸುಧಾರ್ಣವವನ್ನು ರಚಿಸಿದ ಮಲ್ಲಿಕಾರ್ಜುನನಿಗೆ(ಕ್ರಿ.ಶ.೧೨೪೫) ಜನ್ನನ ತಂಗಿಯನ್ನು ಕೊಟ್ಟು ಮದುವೆಯಾಗಿತ್ತು.ಶಬ್ದಮಣಿದರ್ಪಣವನ್ನು ರಚಿಸಿದ ವಯ್ಯಾಕರಣಿ ಕೇಶಿರಾಜನು ಜನ್ನನ ಸೋದರಳಿಯ(ಮಲ್ಲಿಕಾರ್ಜುನನ ಮಗ).ಈತನು ಹೊಯ್ಸಳ ವೀರಬಲ್ಲಾಳನ ಮಹಾಮಂತ್ರಿಯೂ,ಸೈನ್ಯಾಧಿಪತಿಯೂ,ಆಸ್ಥಾನಕವಿಯೂ ಆಗಿದ್ದನು.ವೀರಬಲ್ಲಾಳನ ನಂತರ ಪಟ್ಟಕ್ಕೆ ಬಂದ ೨ನೆಯ ನರಸಿಂಹನ ಕಾಲದಲ್ಲೂ ಜನ್ನನು ಆಸ್ಥಾನಕವಿಯಾಗಿ ಮುಂದುವರಿದನು.
[ಬದಲಾಯಿಸಿ] ಜೈನಮತೀಯನಾದರೂ, ಅವನ ಸಾಹಿತ್ಯ ಕೃಷಿ, ಸರ್ವಪ್ರಾಕಾರಗಳನ್ನು ವ್ಯಾಪಿಸಿತ್ತು :
ಜನ್ನನು, ಸಿಂದಗಿ ತಾಲೂಕಿನ ಕೊಂಡಗೂಳಿಯಲ್ಲಿ ಹುಟ್ಟಿ, ಹಳೆಯಬೀಡಿನಲ್ಲಿರುವ ವಿಜಯ ಪಾರ್ಶ್ವನಾಥ ದೇವಾಲಯದ ಮುಖಭಾಗದಲ್ಲಿ ಸೊಗಸಾದ ಮುಖಮಂಟಪವನ್ನು ಕಟ್ಟಿಸಿ ,ಅಲ್ಲಿ ತನ್ನ ಕಾವ್ಯ ಅನಂತನಾಥಪುರಾಣದ ೧,೦೦೦, ತಾಳೆಗರಿಗಳ ಪ್ರತಿಗಳನ್ನು ಬರೆಸಿ,ಉದಾರ ಸಂಭಾವನೆಯೊಂದಿಗೆ ವಿದ್ವಾಂಸರಿಗೆ ಕೊಟ್ಟು, ಗೌರವಿಸಿದನೆಂದು ತಿಳಿದುಬರುತ್ತದೆ. ಬಾಲಕರಗಣದ ಮೇಘನಂದಿ ಸಿದ್ಧಾಂತಿದೇವರು, ಜನ್ನನ ಆಧ್ಯಾತ್ಮಿಕ ಗುರು ಮಕಾಶಿಗಳಾಗಿದ್ದರು.
[ಬದಲಾಯಿಸಿ] ಜನ್ನನ ರಚನೆಗಳು :
- ೧.ಜನ್ನನು ಕ್ರಿ.ಶ.೧೨೦೯ರಲ್ಲಿ ಯಶೋಧರ ಚರಿತ್ರೆಯನ್ನು ರಚಿಸಿದನು.
- ೨.ಜನ್ನನ ಎರಡನೆಯ ರಚನೆ ಅನಂತನಾಥಪುರಾಣ ಜೈನರ ೧೪ನೆಯ ತೀರ್ಥಂಕರನಾದ ಅನಂತನಾಥಸ್ವಾಮಿಯ ಜೀವನಚರಿತ್ರೆಯನ್ನು ಕುರಿತದ್ದು.
[ಬದಲಾಯಿಸಿ] ಶಾಸನ ರಚನೆಯಲ್ಲಿ ಜನ್ನ ಎತ್ತಿದ ಕೈ :
ಜನ್ನನ ಪ್ರತಿಭೆಯನ್ನು, ಶಾಸನಗಳ ರಚನೆಗೂ ಬಳಸಿಕೊಳ್ಳಲಾಗಿತ್ತು. ಶ್ರೇಷ್ಠಕವಿಯಾದ ಜನ್ನನ ಶಾಸನಗಳು ಒಂದು ಸಂಕಲನ ಗ್ರಂಥವಾಗಿ ಪ್ರಕಟವಾಗಿವೆ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |