ಕನ್ನಡ ಚಿತ್ರರಂಗದ ಪ್ರಮುಖ ನಾಯಕಿಯರಲ್ಲಿ ಒಬ್ಬರು.೧೯೬೮ರಲ್ಲಿ ತೆರೆ ಕಂಡ ವೈ,ಅರ್,ಸ್ವಾಮಿ ನಿರ್ದೇಶನದ "ಜೇನು ಗೂಡು " ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು"ಕಮಲ ಕುಮಾರಿ.ಅದಕ್ಕಿಂತ ಮುನ್ನ "ಜಗದೇಕ ವೀರನ ಕಥೆ "ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ.ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ ೧೯೦ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು ೧೯೬೫ರ "ಮಿಸ್ ಲೀಲಾವತಿ" ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ."ಎರಡು ಮುಖ"(1969),ಮನಸ್ಸಿನಂತೆ ಮಾಂಗಲ್ಯ"(1976),"ಧರ್ಮ ದಾರಿ ತಪ್ಪಿತು"(1981),ಮಸಣದ ಹೂವು (1985),"ಆನಂದ್ "(1986) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಕಾಮತೃಷೆಯಿಂದ ಬಳಲುವ ಹೆಣ್ಣಾಗಿ ಮೊದಲ ಭಾರಿಗೆ ವಿಶಿಷ್ಟ ಅಭಿನಯ ನೀಡಿದ್ದಾರೆ.ನಮನ.
[ಬದಲಾಯಿಸಿ] ಜಯಂತಿ ಅಭಿನಯದ ಕೆಲವು ಚಿತ್ರಗಳು