ಜಯಪ್ರಕಾಶ್ ಹೆಗ್ಡೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕೊರ್ಗಿ ಜಯಪ್ರಕಾಶ್ ಹೆಗ್ಡೆ - ( ಜನನ - 1952ರ ಅಗಸ್ಟ್ 16 ) ಇವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ೨೦೧೨ರ ಉಪಚುನಾವಣೆಯ ಮೂಲಕ ಆಯ್ಕೆಯಾದ ಸಂಸತ್ಸದಸ್ಯರು.

ಇವರು ಮೂಲತಃ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದವರು. ಹೆಗ್ಡೆಯವರು ವೃತ್ತಿಯಲ್ಲಿ ಉಚ್ಚ ನ್ಯಾಯಾಲಯದ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸಿದ್ದಾರೆ.ಇವರು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಚಂದ್ರಶೇಖರ ಹೆಗ್ಡೆಯವರ ಪುತ್ರರು.

೧೯೯೭ರಲ್ಲಿ ಅವರು ಮೀನುಗಾರಿಕೆ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದರು.

೨೦೦೪ ರ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರಾಗಿ ಬಿಜೆಪಿಯಿಂದ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ನಡೆಸಿದರು.

೨೦೦೯ ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಜಯಶಾಲಿಯಾಗಿದ್ದ ಭಾರತೀಯ ಜನತಾ ಪಕ್ಷಡಿ. ವಿ. ಸದಾನಂದ ಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕಾರಣ ರಾಜೀನಾಮೆ ನೀಡಿದ್ದರಿಂದ ತೆರವಾದ ಕ್ಷೇತ್ರದಿಂದ ೨೦೧೨ ರಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದುಬಂದರು. ಈಗ ಮತ್ತೊಮ್ಮೆ ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಯಲ್ಲಿದ್ದಾರೆ.

www.jayaprakashhegde.com ಇವರ ಅಧಿಕೃತ ಜಾಲತಾಣವಾಗಿದೆ.