ಪಂ. ಜವಾಹರಲಾಲ್ ನೆಹರು

ವಿಕಿಪೀಡಿಯ ಇಂದ
(ಜವಾಹರ್‍ಲಾಲ್ ನೆಹರೂ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಜವಾಹರಲಾಲ್ ನೆಹರು
ಜವಾಹರಲಾಲ್ ನೆಹರು
ಜನನ: ನವೆಂಬರ್ ೧೪, ೧೮೮೯
ಮರಣ: ಮೇ ೨೭, ೧೯೬೪
ಹುಟ್ಟಿದೂರು: ಅಲಹಾಬಾದ್, ಉತ್ತರ ಪ್ರದೇಶ
ಭಾರತದ ಪ್ರಧಾನ ಮಂತ್ರಿ
ಅಧಿಕಾರ ಅವಧಿ: ಮೊಟ್ಟ ಮೊದಲ ಪ್ರಧಾನ ಮಂತ್ರಿ
ರಾಜಕೀಯ ಪಕ್ಷ: ಭಾರತ ರಾಷ್ಟ್ರೀಯ ಕಾಂಗ್ರೆಸ್
ಅಧಿಕಾರ ವಹಿಸಿಕೊಂಡಿದ್ದು: ಆಗಸ್ಟ್ ೧೫, ೧೯೪೭
ಅಧಿಕಾರ ಬಿಟ್ಟುಕೊಟ್ಟಿದ್ದು: ಮೇ ೨೭, ೧೯೬೪
ಇವರ ಉತ್ತರಾಧಿಕಾರಿ: ಗುಲ್ಜಾರಿಲಾಲ್ ನಂದ
'ಮಹಾತ್ಮಗಾಂಧಿಯೊಂದಿಗೆ ನೆಹರು'
'ರಾಷ್ಟ್ರಕ್ಕೆ ಸಮರ್ಪಿಸಿದ ನೆಹರೂ ವಂಶದ ಮನೆ'

ಜವಾಹರಲಾಲ್ ನೆಹರು (ನವೆಂಬರ್ ೧೪, ೧೮೮೯ - ಮೇ ೨೭, ೧೯೬೪) - ಭಾರತದ ಮೊದಲ ಪ್ರಧಾನ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರು. ಆಗಸ್ಟ್ ೧೫, ೧೯೪೭ ರಿಂದ ಪ್ರಾರಂಭಿಸಿ ಇವರು ಮರಣಕಾಲದವರೆಗೂ ಭಾರತದ ಪ್ರಧಾನಿಯಾಗಿದ್ದರು.

ನೆಹರುರವರ ಸಾರ್ವಜನಿಕ ಜೀವನ೧೮೮೯-೧೯೧೮[ಬದಲಾಯಿಸಿ]

  • ಪಂ, ಜವಹರಲಾಲ್ ನೆಹರು, ಆಗಿನ ಕಾಲದ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದ ಮೋತಿಲಾಲ್ ನೆಹರು ಅವರ ಮಗ. ನೆಹರೂ ಇಂಗ್ಲೆಂಡ್‌ನ ಹ್ಯಾರ್ರೊ ಸ್ಕೂಲ್ ಹಾಗು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಓದು ಮುಗಿಸಿ, ತಂದೆಯೊಂದಿಗೆ ರಾಜಕೀಯದಲ್ಲಿ ಸಕ್ರಿಯರಾದರು.
  • ಇಂಗ್ಲೆಂಡ್‌ನಲ್ಲಿದ್ದಾಗ ನೆಹರು ಅವರು ಫೇಬಿಯನ್ ಸಾಮಾಜಿಕ ವಿಧಾನಗಳನ್ನು ಬಹುವಾಗಿ ಮೆಚ್ಚಿದ್ದರು. ೧೯೧೬ರ ವಸಂತ ಪಂಚಮಿಯ ದಿನದಂದು ನೆಹರು ಅವರು ಕಮಲಾ ಕೌಲ್‌ರವರನ್ನು ಮದುವೆಯಾದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ೧೯೧೮-೧೯೩೭[ಬದಲಾಯಿಸಿ]

೧೯೧೯ ರಲ್ಲಿ ಮಗಳು ಇಂದಿರಾ ಪ್ರಿಯದರ್ಶಿನಿ ಜನಿಸಿದಳು. ರಾಜಕೀಯದಲ್ಲಿ, ಮಹಾತ್ಮ ಗಾಂಧಿಯವರ ಶಿಷ್ಯನಾದ ಇವರು, ಮೊದಲ ಬಾರಿಗೆ ೧೯೨೯ ರಲ್ಲಿ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಮೇಲೇರಿದರು. ಈ ದಿನಗಳನ್ನು ಇವರು ಬಹುವಾಗಿ ಕಾರಾಗೃಹವಾಸ ದಲ್ಲಿ ಪುಸ್ತಕಗಳು, ಪತ್ರಗಳನ್ನು ಬರೆಯುತ್ತಾ ಕಳೆದರು.

ಕ್ವಿಟ್ ಇಂಡಿಯ ಆಂದೋಲನದಲ್ಲಿ ೧೯೩೭-೧೯೪೭[ಬದಲಾಯಿಸಿ]

'ಭಾರತವನ್ನು ಬಿಟ್ಟು ತೊಲಗಿ' (Quit India Movement) ಪರ್ಯಾಯ ೧೯೪೨ರಲ್ಲಿ ೩೨ ತಿಂಗಳಿಗೆ ಕಾರಾಗೃಹವಾಸ ಅನುಭವಿಸಿದ ಇವರು, ಭಾರತದ ಮೊದಲ ಸರಕಾರವನ್ನು ೧೯೪೬ರಲ್ಲಿ ರಚಿಸಿದರು.

ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ ೧೯೪೭-೧೯೬೪[ಬದಲಾಯಿಸಿ]

ನೆಹರೂರವರು ೧೮ ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದರು. ಇವರು ೧೯೬೪ಮೇ ೨೭ ರಂದು ನಿಧನರಾದರು. ಪಂಡಿತ ಜವಹರಲಾಲ್ ನೆಹರೂರವರು ಆಗಸ್ಟ್ ೧೪ ರ ಮಧ್ಯರಾತ್ರಿ, ಸಂಸತ್ತನ್ನುದ್ದೇಶಿಸಿ ಮಾಡಿದ 'ಎ ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣದ ಕನ್ನದ ಅನುವಾದ' : "ಹಿಂದೊಮ್ಮೆ ನಾವು ವಿಧಿಗೊಂದು ಮಾತಿತ್ತಿದ್ದೆವು. ಅ ಭಾಷೆಯನ್ನು ಕೇವಲ ಸಂಪೂರ್ಣವಾಗಿಯಲ್ಲದೇ ಮಹತ್ತರವಾಗಿ ಕಾರ್ಯಗತಗೊಳಿಸುವ ಸಮಯವಿಂದೊದಗಿದೆ. ಈ ನಡು ರಾತ್ರಿಯ ವಿಶೇಷ ಘಳಿಗೆಯಲ್ಲಿ, ಇಡೀ ವಿಶ್ವ ನಿದ್ರಿಸುತ್ತಿರುವಾಗ, ಭಾರತ ಸ್ವಾತಂತ್ರ್ಯವನ್ನು ಮೈದಳೆದು ಮೇಲೇಳಲಿದೆ. ಹಳೆತೆಲ್ಲವನ್ನೊದರಿ ಹೊಸತನಕ್ಕೆ ಕಾಲಿಡುವ ಮತ್ತು ಶತಮಾನಗಳಿಂದ ಶೋಷಿಸಲ್ಪಟ್ಟ ನಾಡಿನಾತ್ಮ ಧ್ವನಿದಳೆವ ಈ ಘಳಿಗೆ, ಇತಿಹಾಸದ ಅಪರೂಪದ ಮುಹೂರ್ತಗಳಲ್ಲೊಂದು. ಈ ಶುದ್ಧ ಸಮಯದಲ್ಲಿ ಭಾರತದ ಮತ್ತು ಭಾರತಾಂಬೆ ಯ ಸತ್ಪ್ರಜೆಗಳ ಸೇವೆಗಾಗಿ, ಹೆಚ್ಚೇನು ವಿಶ್ವದೊಳಿತಿಗಾಗಿ ನಮ್ಮದೆಲ್ಲವನ್ನು ಮುಡಿಪಿಡುವುದಾಗಿ ಮಾಡುವ ಪ್ರತಿಜ್ಞೆ ಅತೀ ಸಮರ್ಪಕವೆನಿಸುತ್ತದೆ."

ನೆಹರೂ ಅವರ ಅಂತಿಮ ಕವನ/ಬಯಕೆ[ಬದಲಾಯಿಸಿ]

  • ಜವಾಹರಲಾಲ್‌ ನೆಹರೂ ಮೃತರಾದಾಗ ಅವರ ಪಕ್ಕದಲ್ಲಿ ಈ ಕವನದ ಸಾಲುಗಳನ್ನು ಗೀಚಿದ ಕಾಗದದ ತುಣುಕು ದೊರಕಿತ್ತು.
ಕಾನು ಸುಂದರವಾಗಿದೆ, ದಟ್ಟ ಕತ್ತಲೆಯಿಂದ ಕೂಡಿದೆ.
ಆದರೆ, ನಾನು ಮಾತುಗಳನ್ನು ಉಳಿಸಿಕೊಳ್ಳ ಬೇಕಿದೆ.
ನಿದ್ದೆಗೆ ಜಾರುವ ಮುನ್ನ ಮೈಲುಗಟ್ಟಲೇ ಕ್ರಮಿಸಬೇಕಿದೆ, ಮೈಲುಗಟ್ಟಲೇ ಕ್ರಮಿಸಬೇಕಿದೆ.

(ಆಧಾರ:ಲೇಖಕಿ: ಪತ್ರಕರ್ತೆ ಹಾಗೂ ಮಾಧ್ಯಮ ಶಿಕ್ಷಣ ತಜ್ಞೆ) ಆರ್‌. ಅಖಿಲೇಶ್ವರಿS 03/08/2014/ ಪ್ರಜಾವಾಣಿ)


ಸ್ವಾತಂತ್ರ್ಯ ಹೋರಾಟಗಾರರು

ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್ ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ | ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್ ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ | ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ | ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು | ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್ | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ | ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ | ಸಂಗೊಳ್ಳಿ ರಾಯಣ್ಣ


India1931flag.png      Gandhi Salt March.jpg      ಭಾರತದ ಸ್ವಾತಂತ್ರ್ಯ      AzadHindFlag.png           Marche sel.jpg
ಚರಿತ್ರೆ: ವಸಾಹತುಶಾಹಿ - ಈಸ್ಟ್ ಇಂಡಿಯಾ ಕಂಪನಿ - ಪ್ಲಾಸೀ ಕದನ - ಬಕ್ಸರ್ ಕದನ
ತತ್ವಗಳು: ರಾಷ್ಟ್ರೀಯತೆ - ಸ್ವರಾಜ್ - ಗಾಂಧಿವಾದ - ಸತ್ಯಾಗ್ರಹ - ಹಿಂದೂ ರಾಷ್ಟ್ರೀಯತೆ - ಸ್ವದೇಶಿ - ಸಮಾಜವಾದ
ಘಟನೆ-ಚಳುವಳಿಗಳು: ೧೮೫೭ರ ದಂಗೆ - ಬಂಗಾಳದ ವಿಭಜನೆ - ಕ್ರಾಂತಿಕಾರಿಗಳು - ಚಂಪಾರಣ ಮತ್ತು ಖೇಡಾ - ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡ - ಅಸಹಕಾರ - ಸೈಮನ್ ಆಯೋಗ - ನೆಹರು ವರದಿ - ಉಪ್ಪಿನ ಸತ್ಯಾಗ್ರಹ - ೧೯೩೫ರ ಭಾರತ ಸರ್ಕಾರ ಕಾಯ್ದೆ - ಕ್ರಿಪ್ ಆಯೋಗ - ಭಾರತ ಬಿಟ್ಟು ತೊಲಗಿ - ಮುಂಬೈ ದಂಗೆ
ಸಂಘಟನೆಗಳು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ - ಗದರ್ - ಹೋಂ ರೂಲ್ ಚಳುವಳಿ - ಭಾರತೀಯ ರಾಷ್ಟ್ರೀಯ ಸೇನೆ - ಆಜಾದ್ ಹಿಂದ್ - ಅನುಶೀಲನ ಸಮಿತಿ
ನಾಯಕರು: ಮಂಗಲ ಪಾಂಡೆ - ಝಾನ್ಸಿ ರಾಣಿ ಲಕ್ಷ್ಮೀಬಾಯಿ - ಬಾಲ ಗಂಗಾಧರ ತಿಲಕ್ - ಗೋಪಾಲ ಕೃಷ್ಣ ಗೋಖಲೆ - ಮಹಾತ್ಮಾ ಗಾಂಧಿ - ಸರ್ದಾರ್ ಪಟೇಲ್ - ಸುಭಾಷ್ ಚಂದ್ರ ಬೋಸ್ - ಜವಾಹರಲಾಲ್ ನೆಹರು - ಮೌಲಾನಾ ಆಜಾದ್ - ಚಂದ್ರಶೇಖರ್ ಆಜಾದ್ - ರಾಜಾಜಿ - ಭಗತ್ ಸಿಂಗ್
ಬ್ರಿಟಿಷ್ ಆಡಳಿತ: ರಾಬರ್ಟ್ ಕ್ಲೈವ್ - ಲೂಯಿ ಮೌಂಟ್‌ಬ್ಯಾಟನ್
ಸ್ವಾತಂತ್ರ್ಯ: ಕ್ಯಾಬಿನೆಟ್ ಆಯೋಗ - ಭಾರತದ ಸ್ವಾತಂತ್ರ್ಯ ಕಾಯ್ದೆ - ಭಾರತದ ವಿಭಜನೆ - ಭಾರತದ ರಾಜಕೀಯ ಒಗ್ಗೂಡುವಿಕೆ - ಭಾರತದ ಸಂವಿಧಾನ