ದೇವಪ್ರಯಾಗ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ದೇವಪ್ರಯಾಗದಲ್ಲಿನ ಭಾಗೀರಥಿ ಮತ್ತು ಅಲಕನಂದಾ ನದಿಗಳ ಸಂಗಮಸ್ಥಾನ.

ದೇವಪ್ರಯಾಗ ಭಾರತಉತ್ತರಾಖಂಡ ರಾಜ್ಯದ ಟಿಹ್ರಿ ಗಢ್‌ವಾಲ್ ಜಿಲ್ಲೆಯಲ್ಲಿನ ಒಂದು ಪಟ್ಟಣ. ರಿಷಿಕೇಶದಿಂದ ಸುಮಾರು ೭೦ ಕಿ.ಮೀ. ದೂರದಲ್ಲಿರುವ ದೇವಪ್ರಯಾಗವು ಭಾಗೀರಥಿ ಮತ್ತು ಅಲಕನಂದಾ ನದಿಗಳ ಸಂಗಮಸ್ಥಾನವಾಗಿದೆ. ಈ ಸ್ಥಳದಿಂದ ಮುಂದೆ ನದಿಯು ಗಂಗಾನದಿ ಎಂಬ ಹೆಸರು ಪಡೆದಿದೆ. ದೇವಪ್ರಯಾಗವು ಹಿಮಾಲಯದ ಐದು ಪವಿತ್ರ ಸಂಗಮಕ್ಷೇತ್ರಗಳಲ್ಲಿ ಒಂದಾಗಿದ್ದು ಹಿಂದೂ ಧರ್ಮೀಯರು ಇದನ್ನು ಪಾವನಕ್ಷೇತ್ರವೆಂದು ಪರಿಗಣಿಸುತ್ತಾರೆ. ಇತರ ನಾಲ್ಕು ಪ್ರಯಾಗಗಳೆಂದರೆ ರುದ್ರಪ್ರಯಾಗ, ಕರ್ಣಪ್ರಯಾಗ, ನಂದಪ್ರಯಾಗ ಮತ್ತು ವಿಷ್ಣುಪ್ರಯಾಗ.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ