ದೇ. ಜವರೇಗೌಡ

ವಿಕಿಪೀಡಿಯ ಇಂದ
(ದೇ.ಜವರೆಗೌಡ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ದೇಜಗೌ ಎಂದೇ ಹೆಸರಾಗಿರುವ ದೇ.ಜವರೇಗೌಡ ಅವರು ಕನ್ನಡದ ಸಾಹಿತಿಗಳಲ್ಲೊಬ್ಬರು.

[ಬದಲಾಯಿಸಿ] ಜೀವನ

ದೇ.ಜವರೇಗೌಡರು ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ ೧೯೧೮, ಜುಲೈ ೮ರಂದು ದೇವೇಗೌಡ, ಚೆನ್ನಮ್ಮ ದಂಪತಿಗಳಿಗೆ ಜನಿಸಿದರು. ಇವರು ಕುವೆಂಪುರವರ ಮಾರ್ಗದರ್ಶನದಿಂದ ಅವರ ಶಿಷ್ಯರಾಗಿ ತಮ್ಮ ವಿದ್ಯಾಭ್ಯಾಸವನ್ನು ಮಾಡಿ ಕನ್ನಡದ ಹೆಸರಾಂತ ಗದ್ಯ ಲೇಖಕರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ದೇಜಗೌ ನಾಮದಿಂದಲೇ ಪ್ರಖ್ಯಾತರಾಗಿದ್ದಾರೆ. ಕನ್ನಡಕ್ಕೆ ಸೂಕ್ತ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿಅ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ.

[ಬದಲಾಯಿಸಿ] ಕೃತಿಗಳು

[ಬದಲಾಯಿಸಿ] ಪ್ರಶಸ್ತಿ/ಪುರಸ್ಕಾರಗಳು

ಕನ್ನಡ ವಿಶ್ವವಿದ್ಯಾನಿಲಯ ೧೯೭೫ ರಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಿ ಗೌರವಿಸಿತು. ಕರ್ನಾಟಕ ಸರ್ಕಾರ ೨೦೧೦ ರಲ್ಲಿ ೨೦೦೮ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.



ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ