ನಕ್ಷತ್ರಕೂಟ
Wikipedia ಇಂದ
ಗುರುತ್ವಾಕರ್ಷಣದಿಂದ ಒಟ್ಟಾಗಿರುವ ಅನೇಕ ನಕ್ಷತ್ರಗಳು, ಅವುಗಳ ಮಧ್ಯೆ ಇರುವ ವಾಯು, ಧೂಳು ಮತ್ತು ಅಜ್ಞಾತ ಕಪ್ಪು ದ್ರವ್ಯದ (en:Dark Matter) ಬೃಹತ ಗಾತ್ರದ ಸಮೂಹಗಳಿಗೆ ನಕ್ಷತ್ರಕೂಟ ಅಥವ ತಾರಾಗಣ ಎಂದು ಹೆಸರು. ಈ ನಕ್ಷತ್ರಕೂಟಗಳಲ್ಲಿ ಸಾಮಾನ್ಯವಾಗಿ ೧೦ ಮಿಲಿಯನ್ ಇಂದ ೧ ಟ್ರಿಲಿಯನ್ ನಕ್ಷತ್ರಗಳು ಒಂದೇ ಗುರುತ್ವದ ಕೇಂದ್ರಬಿಂದುವಿನ ಸುತ್ತ ಪ್ರದಕ್ಷಣೆ ಮಾಡುತ್ತವೆ. ಸೂರ್ಯ ಮತ್ತು ಸೌರಮಂಡಲ ಇರುವ ನಕ್ಷತ್ರಕೂಟದ ಹೆಸರು ಆಕಾಶಗಂಗೆ.

