ನಾಲ್ವಡಿ ಕೃಷ್ಣರಾಜ ಒಡೆಯರು

Wikipedia ಇಂದ

(ನಾಲ್ವಡಿ ಕೃಷ್ಣರಾಜ ಒಡೆಯರ್ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರು
ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರು

ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನವಡೆಯರು ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ರವರೆಗೆ ನಡೆಯಿತು.

ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ , ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.

೧೯೦೨ಆಗಸ್ಟ್ ೮ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಐಯರ್ ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು, ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ ,ಮೈಸೂರು ಸಂಸ್ಥಾನಕ್ಕೆ ' ಮಾದರಿ ಮೈಸೂರು' ಎಂಬ ಕೀರ್ತಿ ಪ್ರಾಪ್ತವಾಯಿತು.

ನಾಲ್ವಡಿ ಕೃಷ್ಣರಾಜ ಒಡೆಯರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು. ಆದುದರಿಂದ ಅವರ ಕಾಲದಲ್ಲಿ , ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ 'ಪ್ರಜಾ ಪ್ರತಿನಿಧಿ ಸಭೆ'ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಅದಕ್ಕಾಗಿ ೧೯೨೩ರರಲ್ಲಿ ಹೊಸ ಕಾನೂನೊಂದನ್ನು ಜಾರಿಗೆ ತಂದು, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು. ಇದು ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಆರಂಭಿಸಿತು. ಪ್ರಜಾ ಪ್ರತಿನಿಧಿ ಸಭೆಯು ವರ್ಷಕ್ಕೆ ಎರಡು ಬಾರಿ (೧ ಜೂನ್ - ಮಹಾರಾಜರ ವರ್ಧಂತಿ, ೨ ಅಕ್ಟೋಬರ್ - ದಸರಾ ಮಹೋತ್ಸವ ) ಸಮಾವೇಶಗೊಂಡು ಕಲಾಪಗಳನ್ನು ನಡೆಸುತ್ತಿತ್ತು ಅಲ್ಲಿ ವಾರ್ಷಿಕ ಆಯ ವ್ಯಯ ಪರಿಶೀಲನೆ,ಪ್ರಶ್ನೋತ್ತರಗಳು ,ಠರಾವುಗಳನ್ನು ಮಂಡಿಸುವುದು ಮುಂತಾದ ಸಂಸದೀಯ ಮಾದರಿಯ ನಡವಳಿಕೆಗಳು ನಡೆಯುತ್ತಿದ್ದವು .ಪ್ರತಿನಿಧಿ ಸಭೆಯಲ್ಲಿದ್ದ ೨೭೫ ಸದಸ್ಯರಲ್ಲಿ ಹೆಚ್ಚು ಪ್ರತಿನಿಧಿಗಳು ಜನರಿಂದ ಆಯ್ಕೆಯಾದವರಾಗಿದ್ದರು .

ಇದರ ಜೊತೆಗೆ ೧೯೦೭ ರಲ್ಲಿ 'ನ್ಯಾಯ ವಿಧಾಯಕ' ಸಭೆಯನ್ನೂ ಸಹ ಸ್ಥಾಪಿಸಲಾಯಿತು.ಇದರ ಸದಸ್ಯರ ಸಂಖ್ಯೆ ೫೦ , ಇದರಲ್ಲಿ ಜನರಿಂದ ಆಯ್ಕೆಯಾದವರು ೨೨ ಸದಸ್ಯರು .ಮೇಲ್ಮನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಸಂಸ್ಥೆ ,ಜೂನ್ ಮತ್ತು ಡಿಶಂಬರ್ ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿತ್ತು .ಪ್ರಜಾ ಪ್ರತಿನಿಧಿ ಸಭೆಯಲ್ಲಿ ಮಂಡಿಸಿದ ಎಲ್ಲ ವಿಷಯಗಳನ್ನೂ ಸಹ ವಿಮರ್ಶಿಸುವ ಅಧಿಕಾರ ಆ ಸಭೆಗೆ ಇದ್ದಿತು .ಮುಖ್ಯವಾಗಿ ಯಾವುದೇ ಕಾನೂನನ್ನು ಜಾರಿಗೊಳಿಸಲು ಆ ಸಭೆಯ ಅನುಮತಿ ಅಗತ್ಯವಾಗಿತ್ತು .ಆ ಸಭೆಗೆ ಸರ್ಕಾರದ ಖರ್ಚುಗಳನ್ನು ಕಡಿಮೆ ಮಾಡುವ ಅಧಿಕಾರ ಸಹ ಇದ್ದಿತು .

ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ ,ಸ್ಥಳೀಯ ಸಂಸ್ಥೆಗಳನ್ನು ರಚಿಸಿ , ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು .ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು .ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ ,ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು .

ಇವರ ಕಾಲದಲ್ಲಿ ೧)ಗ್ರಾಮ ನಿರ್ಮಲೀಕರಣ ೨) ವೈದ್ಯ ಸಹಾಯ ೩)ವಿದ್ಯಾ ಪ್ರಚಾರ ೪) ನೀರಿನ ಸೌಕರ್ಯ ೫) ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಮಾಡಳಿತ ಸಂಸ್ಥೆಗಳಾದವು .

[ಬದಲಾಯಿಸಿ] ಹೊಸ ರೈಲು ದಾರಿಗಳ ನಿರ್ಮಾಣ

೧) ಮೈಸೂರು - ಅರಸೀಕೆರೆ ೨) ಬೆಂಗಳೂರು - ಚಿಕ್ಕಬಳ್ಳಾಪುರ ೩) ಚಿಕ್ಕಜಾಜೂರು - ಚಿತ್ರದುರ್ಗ ೪) ನಂಜನಗೂಡು - ಚಾಮರಾಜನಗರ ೫) ತರೀಕೆರೆ - ನರಸಿಂಹರಾಜಪುರ ೬)ಶಿವಮೊಗ್ಗ - ಆನಂದಾಪುರ ಈ ಎಲ್ಲ ರೈಲು ಮಾರ್ಗಗಳನ್ನು ೧೯೩೧ ರ ವೇಳೆಗೆ ಪೂರೈಸಲಾಯಿತು .

[ಬದಲಾಯಿಸಿ] ನೀರಾವರಿ

೧೯೦೭ ರಲ್ಲಿ 'ವಾಣೀವಿಲಾಸ ಸಾಗರ' (ಮಾರಿ ಕಣಿಮೆ) ಕಟ್ಟಲ್ಪಟ್ಟಿತು , ೧೯೧೧ ರಲ್ಲಿ ಆರಂಭವಾದ 'ಕೃಷ್ಣರಾಜ ಸಾಗರ' ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ .೧೯೦೦ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು , ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ .

[ಬದಲಾಯಿಸಿ] ವಿದ್ಯಾಭ್ಯಾಸ

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು .ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸಿದುದು .ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ೨೭೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು .ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು . ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು .

ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ೧೯೦೬ ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.

ವೈಯಕ್ತಿಕ ಉಪಕರಣಗಳು
ಇತರ ಭಾಷೆಗಳು