ಕೆ.ಎಸ್.ನಿಸಾರ್ ಅಹಮದ್

ವಿಕಿಪೀಡಿಯ ಇಂದ
(ನಿಸಾರ್ ಅಹಮ್ಮದ್ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಪ್ರೊ. ಕೆ.ಎಸ್. ನಿಸಾರ್ ಅಹಮದ್

ಪ್ರೊಫೆಸರ್ ಕೆ.ಎಸ್.ನಿಸಾರ್ ಅಹಮದ್ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು.

ಪರಿವಿಡಿ

[ಬದಲಾಯಿಸಿ] ಜೀವನ

ನಿಸಾರ್ ಅಹಮದ್ ಅವರು ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.

[ಬದಲಾಯಿಸಿ] ಸಾಹಿತ್ಯ

ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ ೧೦ನೇ ವಯಸ್ಸಿನಲ್ಲೇ ಆರಂಭ.'ಜಲಪಾತ'ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ ಸುಮಾರು ೫ ದಶಕಗಳಿಂದ ೨೫ ಕೃತಿಗಳನ್ನು ರಚಿಸಿದ್ದಾರೆ.

  • ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ.
  • ೧೯೭೮ರಲ್ಲಿ ಇವರ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ನಿತ್ಯೋತ್ಸವ ಹೊರಬಂದು,ಕನ್ನಡ ಲಘುಸಂಗೀತ (ಸುಗಮ ಸಂಗೀತ) ಕ್ಷೇತ್ರದಲ್ಲಿ ಭರ್ಜರಿ ಯಶಸ್ಸು ಪಡೆಯಿತು.
  • ಕುರಿಗಳು ಸಾರ್‍ ಕುರಿಗಳು, ರಾಜಕೀಯ ವಿಡಂಬನೆ ಕವನ
  • ಭಾರತವು ನಮ್ಮ ದೇಶ (ಸರ್‍ ಮೊಹಮದ್ ಇಕ್ಬಾಲ್ ಅವರ ಸಾರೆ ಜಹಾಂ ಸೆ ಅಚ್ಚಾ ಕವನದ ಕನ್ನಡ ಭಾಷಾಂತರ)
  • ಬೆಣ್ಣೆ ಕದ್ದ ನಮ್ಮ ಕೃಷ್ಣ ಕವನ ಕವಿಯ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿವೆ.

ಶ್ರೀ ಅಹಮದ್ ರವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್

[ಬದಲಾಯಿಸಿ] ಕೃತಿಗಳು

[ಬದಲಾಯಿಸಿ] ಕವನ ಸಂಕಲನಗಳು

  • 'ಮನಸು ಗಾಂಧಿಬಜಾರು'
  • 'ನಿತ್ಯೋತ್ಸವ'
  • 'ನೆನದವರ ಮನದಲ್ಲಿ'
  • 'ನಾನೆಂಬ ಪರಕೀಯ'
  • 'ಅನಾಮಿಕ ಆಂಗ್ಲರು'
  • 'ಸುಮಹೂರ್ತ'
  • 'ಸಂಜೆ ಐದರ ಮಳೆ'
  • 'ಸ್ವಯಂ ಸೇವೆಯ ಗಿಳಿಗಳು'

[ಬದಲಾಯಿಸಿ] ಗದ್ಯ ಸಾಹಿತ್ಯ

[ಬದಲಾಯಿಸಿ] ಮುಂಬೈನಲ್ಲಿ ಆಹ್ವಾನಿತ ಭಾಷಣಕಾರರಾಗಿ

ಮುಂಬೈನಲ್ಲಿ ಪ್ರತಿವರ್ಷವೂ, 'ಮುಂಬೈ ವಿಶ್ವವಿಧ್ಯಾಲಯ,' ಹಾಗೂ 'ಮೈಸೂರ್ ಆಸೋಸಿಯೇಷನ್' ಜಂಟಿಯಾಗಿ ಈ ಉಪನ್ಯಾಸ ಮಾಲಿಕೆಯನ್ನು ಆಯೋಜಿಸುತ್ತಾ ಬಂದಿವೆ. ಸನ್, ೨೦೧೧ ರ ಸಾಲಿನ, 'ಮೈಸೂರು ಅಸೋಸಿಯೇಷನ್ ದತ್ತಿ ಉಪನ್ಯಾಸ ಕಾರ್ಯಕ್ರಮ'ದಲ್ಲಿ ಡಾ.'ಕೆ.ಎಸ್.ನಿಸಾರ್ ಅಹಮದ್' ರವರು, ಆಹ್ವಾನಿತ ಭಾಷಣಕಾರರಾಗಿ ಆಗಮಿಸಿ, ತಮ್ಮ ಪ್ರತಿಭಾನ್ವಿತ ಮಾತುಗಳಿಂದ ಮುಂಬೈ ಕನ್ನಡಿಗರ ಮನಸ್ಸನ್ನು ಸೂರೆಗೊಂಡರು. ಈ ಕಾರ್ಯಕ್ರಮ, ಜನವರಿ, ೨೯, ಶನಿವಾರ, ಹಾಗೂ ೩೦, ರವಿವಾರ, ದಂದು, ಆಯೋಜಿಸಲ್ಪಟ್ಟಿತ್ತು.

[ಬದಲಾಯಿಸಿ] ಪ್ರಶಸ್ತಿ ಪುರಸ್ಕಾರಗಳು

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು