ಪ. ಗೋಪಾಲಕೃಷ್ಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಶ್ರೀ ಪದ್ಯಾಣ ಗೋಪಾಲಕೃಷ್ಣ (ಪ.ಗೋ. ೧೯೨೮ - ೧೯೯೭)


ಶ್ರೀ ಪದ್ಯಾಣ ಗೋಪಾಲಕೃಷ್ಣ (ಪ.ಗೋ). ಹುಟ್ಟೂರು ದಕ್ಷಿಣ ಕನ್ನಡ ಮತ್ತು ಈಗಿನ ಕಾಸರಗೋಡು ಜಿಲ್ಲೆಗಳ ಗಡಿಯಂಚಿನಲ್ಲಿರುವ ಅಡ್ಯನಡ್ಕ. ೧೯೨೮ರಲ್ಲಿ ಜನಿಸಿದ ಪ.ಗೋ. ೧೯೫೬ರಲ್ಲಿ ಕನ್ನಡ ದಿನ ಪತ್ರಿಕೆ ವಿಶ್ವ ಕರ್ನಾಟಕ ಮುಖಾಂತರ ಬೆಂಗಳೂರಿನಲ್ಲಿ ಪತ್ರಿಕೋದ್ಯಮಕ್ಕೆ ಪ್ರವೇಶ.ಮುಂದೆ ತಾಯಿನಾಡು, ಕಾಂಗ್ರೆಸ್ ಸಂದೇಶ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದರು. ಮಡಿಕೇರಿಯಿಂದ ಪ್ರಕಟವಾಗುತ್ತಿದ್ದ "ಶಕ್ತಿ " ಪತ್ರಿಕೆಯ ಬೆಂಗಳೂರಿನ ವರದಿಗಾರರಾಗಿದ್ದವರು ಶ್ರೀ. ಪ. ಗೋ.

೧೯೫೯ರ ಸುಮಾರಿಗೆ ಮಂಗಳೂರಿಗೆ ಬಂದು ನೆಲಸಿ ನವಭಾರತ, ಕನ್ನಡವಾಣಿ ಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ನಂತರ ಇಂಡಿಯನ್ ಎಕ್ಸಪ್ರೆಸ್, ಕನ್ನಡ ಪ್ರಭ, ಸಂಯುಕ್ತ ಕರ್ನಾಟಕ, ಟೈಮ್ಸ್ ಆಫ್ ಡೆಕ್ಕನ್ ಪತ್ರಿಕೆಗಳ ಮಂಗಳೂರು ವರದಿಗಾರರಾಗಿ ಮುಂದುವರಿದರು. ೧೯೬೩ -೧೯೬೪ ರಲ್ಲಿ ಮಂಗಳೂರಿನಲ್ಲಿ ತಮ್ಮ ಸ್ವಂತ ಕನ್ನಡ ದಿನ ಪತ್ರಿಕೆ "ವಾರ್ತಾಲೋಕ"ದ ವರದಿಗಾರ, ಮುದ್ರಕ ಮತ್ತು ಪ್ರಕಾಶಕರಾಗಿ ನಡೆಸಿ ಪತ್ರಿಕೋದ್ಯಮದ ಎಲ್ಲಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದವರು. ೧೯೯೪ರಲ್ಲಿ ಕಾರ್ಯನಿರತ ಪತ್ರಿಕೋದ್ಯಮದಿಂದ ನಿವೃತಿ ಹೊಂದುವ ಮೊದಲು ತಮ್ಮ ಒಂಬತ್ತು ವರ್ಷಗಳನ್ನು ಇಂಗ್ಲಿಷ್ ಪತ್ರಿಕಾರಂಗದ 'ಟೈಮ್ಸ್ ಆಫ್ ಇಂಡಿಯಾ'ಕ್ಕೆ ಸಲ್ಲಿಸಿ ಪತ್ರಿಕಾರಂಗಕ್ಕೆ ವಿದಾಯ ಹೇಳಿದರೂ ಅಂಕಣ ಸೃಷ್ಟಿಯನ್ನು ಕೊನೆ ತನಕ ಮುಂದುವರಿಸಿ ದಿನಾಂಕ ೧೦ - ೮- ೧೯೯೭ರಂದು ಈ ಪ್ರಪಂಚಕ್ಕೆ ವಿದಾಯ ಹೇಳಿದರು.


೧೯೫೬ ರಿಂದ ೧೯೯೭ ನೆ ಇಸವಿವರೆಗೆ ನಾಲ್ಕು ದಶಕಗಳಷ್ಟು ದೀರ್ಘ ಕಾಲವದಿಯಲ್ಲಿ ಹಲವಾರು ಪತ್ರಿಕೆಗಳಲ್ಲಿ ಅಗಾಗ ಕಾಲಂಕಾರರಾಗಿ ಪ.ಗೋ. ಬರೆದ ಕಾಲಂ ಸಾಹಿತ್ಯ ಸುಮಾರು ನಾಲ್ಕು ಸಾವಿರ ಪುಟಗಳಿಗೂ ಮಿಕ್ಕಿದೆ. ಬೆಳ್ಳಿಯ ಸೆರಗು ಎಂಬ ಸಾಮಾಜಿಕ ಕಾದಂಬರಿ, ಗನ್ ಬೋ ಸ್ಟ್ರೀಟ್ ಎಂಬ ಮತ್ತು ಓ. ಸಿ. ೬೭ ಎಂಬ ಪತ್ತೇದಾರಿ ಕಾದಂಬರಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿಸಿದ ಹೆಗ್ಗಳಿಕೆ ಅವರದ್ದು.


ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ಯತೆ ಪಡೆದು ಕರ್ನಾಟಕ ರಾಜ್ಯ ವಾರ್ತಾ ಮತ್ತು ವಿದ್ಯುತ್ ಸಚಿವರಿಂದ ವಿಧ್ಯುಕ್ತವಾಗಿ ಉದ್ಘಾಟಿಸಿ ೦೬ ಅಕ್ಟೋಬರ್ ೧೯೭೬ ರಂದು ಪ್ರಾರಂಭಗೊಂಡ ಅಂದಿನ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಸದಸ್ಯ ಹಾಗೂ ಸಂಘದ ಪ್ರಥಮ ಕಾರ್ಯದರ್ಶಿಯಾಗಿದ್ದವರು ಶ್ರೀ.ಪ.ಗೋಪಾಲಕೃಷ್ಣ.

http://www.gulfkannadiga.com/news-26676.html

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ