ಬಂಡಿಪುರ ರಾಷ್ಟ್ರೀಯ ಉದ್ಯಾನವನ
Wikipedia ಇಂದ
(ಬಂಡಿಪುರ ಅಭಯಾರಣ್ಯ ಇಂದ ಪುನರ್ನಿರ್ದೇಶಿತ)
ಬಂಡಿಪುರ ರಾಷ್ಟ್ರೀಯ ಉದ್ಯಾನವನ ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಇರುವ ಒಂದು ರಾಷ್ಟ್ರೀಯ ಉದ್ಯಾನವನ. ತಮಿಳುನಾಡಿನ ಮದುಮಲೈ ರಾಷ್ಟ್ರೀಯ ಉದ್ಯಾನವನ ಮತ್ತು ಕೇರಳದ ವಾಯ್ನಾಡ್ ವನ್ಯಜೀವಿ ಅಭಯಾರಣ್ಯ ಇದಕ್ಕೆ ಹೊಂದಿಕೊಂಡಿದೆ. ಪ್ರಾಜೆಕ್ಟ್ ಟೈಗರ್ ಕ್ರಿಯೆಗೆ ಈ ಅಭಯಾರಣ್ಯ ಸಂಬಂಧವನ್ನು ಹೊಂದಿದೆ. ಹುಲಿ, ಆನೆ, ಚಿರತೆ ಇತ್ಯಾದಿ ಪ್ರಾಣಿಗಳು ಇಲ್ಲಿ ವಾಸಿಸುತ್ತವೆ.