ಬಸವಕಲ್ಯಾಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಬಸವಕಲ್ಯಾಣ
India-locator-map-blank.svg
Red pog.svg
ಬಸವಕಲ್ಯಾಣ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಬೀದರ್
ನಿರ್ದೇಶಾಂಕಗಳು 17.27° N 76.95° E
ವಿಸ್ತಾರ
 - ಎತ್ತರ
 km²
 - 621 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2006)
 - ಸಾಂದ್ರತೆ
102546
 - /ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 585 327
 - +08481
 - KA39

ಹನ್ನೆರಡನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಪಟ್ಟಣವೇ ಇಂದಿನ ಬಸವ ಕಲ್ಯಾಣ. ಬೀದರ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿರುವ ಈ ಊರಿನ ಜನಸಂಖ್ಯೆ ೫೮,೭೪೨ (೨೦೦೧ರ ಭಾರತದ ಜನಗಣತಿಯ ಪ್ರಕಾರ).ಕಲ್ಯಾಣ ಚಾಲುಕ್ಯರ ರಾಜಧಾನಿಯಾಗಿ ಮೆರೆದಿದ್ದ ಕಲ್ಯಾಣದಿ೦ದ ಸುಮಾರು ೨೫೦ ವರುಷಗಳವರೆಗೆ ಆಳ್ವಿಕೆ ನಡೆಸಿದರು. ಉಮಾಪೂರ ಮಂದಿರ

ಇದು ಕೂಡ ಬಸವಕಲ್ಯಾಣದಿಂದ 15 ಕಿ.ಮೀ. ದೂರ ಪಶ್ಚಿಮ ದಿಕ್ಕಿಗಿದೆ. ಇಲ್ಲಿ ಉಮಾಮಹೇಶ್ವರ ದೇಗುಲದ ಸಂಕೀರ್ಣವು ಕಾಣಬಹುದಾಗಿದ್ದು ಪೂರ್ತಿ ಜರ್ಝರಿತವಾಗಿದೆ. ಇದು ಕೂಡ ಕಲಾಶಿಲ್ಪ ವೈಭವಕ್ಕೆ ಸಾಕ್ಷಿಯಾಗಿದೆ. (ಶಿಲ್ಪ ಕಲಾ ವೈಭವಕ್ಕೆ ಸಾಕ್ಷಿಯಾಗಿ ನಿಂತಿರು ಉಮಾಮಹೇಶ್ವರ ದೇಗುಲ ಸಂಕೀರ್ಣ )


ಪರಿವಿಡಿ

[ಬದಲಾಯಿಸಿ] ಬಸವೇಶ್ವರ ದೇವಾಲಯ

ಬಸವಣ್ಣನವರು ಮಾಂಡಲಿಕ ಬಿಜ್ಜಳನೊಂದಿಗೆ ಮಂಗಳವೇಡೆಯಿಂದ ಕಲ್ಯಾಣಪುರಕ್ಕೆ ಬಂದು ಅದನ್ನು ತಮ್ಮ ಕರ್ಮಭೂಮಿಯನ್ನಾಗಿಸಿ ಕೊಂಡರು. ಸಾಮಾಜಿಕ, ಧಾರ್ಮಿಕ ಕ್ರಾಂತಿಯನ್ನು ನಡೆಸಿದರು. ಕಲ್ಯಾಣ ಶರಣರ ನಾಡು, ಭಕ್ತಿಯ ಬೀಡು ಆಯಿತು. ಬಲದೇವ ಮಂತ್ರಿಯ ನಂತರ ಬಸವಣ್ಣನವರಿಗೆ ಪ್ರಧಾನಿ ಹುದ್ದೆಯನ್ನು ನೀಡಲಾಯಿತು. ಅವರು ಬಿಜ್ಜಳ ಅರಸರ ಭಾಂಡಾರಿಯಷ್ಟೇ ಆಗಿರದೆ ಭಕ್ತಿ ಭಾಂಡಾರಿಯೂ ಆದರು. ನೆಲ ಪಾವನವಾಯಿತು. ಜನಮನ ನೆಲೆ ಕಂಡಿತು. ಈ ಆಧುನಿಕ ದೇವಾಲಯ ಸಾಂಸ್ಕೃತಿಕ ಕೇಂದ್ರವೂ ಆಗಿದೆ. (ಚಿತ್ರದಲ್ಲಿ ಕಾಣುತ್ತಿರುವದು ಬೊಮ್ಮಗೊಂಡೇಶ್ವರ ಕೆರೆ)

[ಬದಲಾಯಿಸಿ] ಪರುಷಕಟ್ಟೆ

ಬಸವೇಶ್ವರ ದೇವಾಲಯದ ಸಮೀಪ ಇರುವ ಈ ಸ್ಮಾರಕ ಕಟ್ಟೆಯೊಂದರ ರೂಪದಲ್ಲಿದೆ. ಇದರ ಸಂಬಂಧ ಬಸವಣ್ಣನವರೊಂದಿಗೆ ಇದ್ದಿತೆಂದು ತಿಳಿದುಬರುತ್ತದೆ.

[ಬದಲಾಯಿಸಿ] ಬಸವಣ್ಣನವರ ಅರಿವಿನ ಮನೆ

ಬಸವ ಕಲ್ಯಾಣದ ಹೊರವಲಯದಲ್ಲಿರುವ ಇದು ಸ್ಮಾರಕ ಗುಹೆಯ ಮಾದರಿಯಲ್ಲಿದೆ. ಬಸವಣ್ಣನವರ ಮಹಾಮನೆ ಎಂದೇ ಜನರು ಇದನ್ನು ಕಾಣುತ್ತಾರೆ.

[ಬದಲಾಯಿಸಿ] ಹಡಪದ ಅಪ್ಪಣನವರ ಗುಹೆ

ಅರಿವಿನ ಮನೆಯ ಪಕ್ಕದಲ್ಲಿಯೇ ಈ ಗುಹೆ ಇದ್ದು , ತಂಪಾದ ನೆಲೆಯಾಗಿದೆ. ಹಡಪದ ಅಪ್ಪಣನವರು ಬಸವಣ್ಣನವರ ನಿಕಟವರ್ತಿಗಳಾಗಿದ್ದರು. ತಾಂಬೂಲವನ್ನು ಸಲ್ಲಿಸುವ ಕಾಯಕ ಅವರದ್ದಾಗಿತ್ತೆಂದು ತಿಳಿದುಬರುತ್ತದೆ.

[ಬದಲಾಯಿಸಿ] ಅಕ್ಕ ನಾಗಮ್ಮ - ನೀಲಮ್ಮನವರ ಗವಿಗಳು

ಈ ಎರಡೂ ಗವಿಗಳು ಅಕ್ಕಪಕ್ಕದಲ್ಲಿವೆ. ಚೆನ್ನಬಸವಣ್ಣನವರು ತಮ್ಮ ಬಾಲ್ಯದ ದಿನಗಳನ್ನು ಕಳೆದದ್ದು ಇಲ್ಲಿಯೇ ಎಂಬುದು ಅಭಿಪ್ರಾಯ. ಈ ಗವಿಗಳು ಹನ್ನೆರಡನೇ ಶತಮಾನದ ಮಹಿಳೆಯರ ಆಧ್ಯಾತ್ಮಿಕ ಸಾಧನೆಯ ಕುರುಹುಗಳು.ಐತಿಹಾಸಿಕ ಬಸವಕಲ್ಯಾಣ

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ