ಬಿ. ಎಂ. ಶ್ರೀಕಂಠಯ್ಯ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ
BM shree.jpg
© Kamat's Potpourri
ಜನನ: ಜನವರಿ ೩, ೧೮೮೪
ಜನನ ಸ್ಥಳ: ಬೆಳ್ಳೂರು, ನಾಗಮಂಗಲ , ಮಂಡ್ಯ ಜಿಲ್ಲೆ, ಕರ್ನಾಟಕ
ನಿಧನ: ಜನವರಿ ೫, ೧೯೪೬
ಬೆಂಗಳೂರು, ಕರ್ನಾಟಕ
ವೃತ್ತಿ: ಕವಿ, ಲೇಖಕ
ರಾಷ್ಟ್ರೀಯತೆ: ಭಾರತೀಯ
ಸಾಹಿತ್ಯದ ವಿಧ(ಗಳು): ಕಾಲ್ಪನಿಕ
ಸಾಹಿತ್ಯ ಶೈಲಿ: ನವೋದಯ ಸಾಹಿತ್ಯ

ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ಕವಿ ಮತ್ತು ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ-ಮಾನಗಳಿರಲಿಲ್ಲ. ಅಂತಹ ಸಮಯದಲ್ಲಿ ಕನ್ನಡವನ್ನು ಅದಕ್ಕಿರುವ ಒಂದು ನ್ಯಾಯವಾದ ಸ್ಥಾನವನ್ನು ದೊರಕಿಸಿ ಕೊಡಲೇಬೇಕು ಎಂದು ಆಶಿಸಿ, ತಮ್ಮ ಜೀವನವನ್ನು ಕನ್ನಡಕ್ಕಾಗಿ ಮುಡಿಪಾಗಿಟ್ಟವರು ಬಿ. ಎಂ. ಶ್ರೀಕಂಠಯ್ಯನವರು.

ಜನನ, ಬಾಲ್ಯ ಹಾಗೂ ವಿದ್ಯಾಭ್ಯಾಸ[ಬದಲಾಯಿಸಿ]

ಬಿ. ಎಂ. ಶ್ರೀಯವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಎಂಬ ಹಳ್ಳಿಯಲ್ಲಿ ೧೮೮೪ರ ಮಾರ್ಚ್ 01ರಲ್ಲಿ ಜನಿಸಿದರು. ಅವರ ತಂದೆ, ಮೈಲಾರಯ್ಯನವರು, ತಾಯಿ,ಭಾಗೀರಥಮ್ಮ ಇವರ ಮುದ್ದಿನ ಮಗನಾಗಿ ಬಿ. ಎಂ. ಶ್ರೀಯವರು ಬೆಳೆದರು. ಶ್ರೀಕಂಠಯ್ಯನವರು ತಮ್ಮ ಬಾಲ್ಯದ ಶಿಕ್ಷಣವನ್ನು ಬೆಳ್ಳೂರಿನಲ್ಲಿ ಕಲಿತರು. 1906ರಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿ, 1907ರಲ್ಲಿ ಮದರಾಸು ವಿವಿಯಲ್ಲಿ ಬಿ.ಎಲ್. ಪದವಿ, 1909ರಲ್ಲಿ ಎಂ.ಎ. ಪದವಿ ಪಡೆದರು. ಅದೇ ವರ್ಷ ಮೈಸೂರು ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, 1930ರಲ್ಲಿ ಪ್ರಾಧ್ಯಾಪಕರಾಗಿದ್ದ ಅವರು, 1926-1930ರವರೆಗೆ ನಾಲ್ಕು ವರ್ಷಗಳ ಕಾಲ ಕುಲಸಚಿವರಾಗಿದ್ದರು. 1938-1942ರವರೆಗೆ ಕನ್ನಡ ಸಾಹಿತ್ಯ ಪರಿಷತ್ ನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


~ ತುರುವೇಕೆರೆ ಗಿರೀಶ್ ಕೆ ಭಟ್

ವೃತ್ತಿ ಜೀವನ[ಬದಲಾಯಿಸಿ]

ಆಗಲೇ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇರಿಕೊಂಡರು.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ೨೫ ವರ್ಷ ಸೇವೆ ಸಲ್ಲಿಸಿ ೧೯೩೦ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜ್ ಗೆ ವರ್ಗವಾದರು.

central college, Banglore

ಅನಂತರ ಅವರು ೧೯೪೨ರ ವರೆಗೆ ಈ ಕಾಲೇಜಿನ ಏಳಿಗೆಗಾಗಿ ದುಡಿದು ೧೯೪೪ರಲ್ಲಿ 'ಧಾರವಾಡದ ಕೆ.ಇ.ಬೋರ್ಡ್‌'ನ ಮುಖ್ಯಸ್ಥರಾಗಿ ನೇಮಕಗೊಂಡು ಅವರ 'ಆರ್ಟ್ಸ್ ಕಾಲೆಜ್' ಗೆ 'ಪ್ರಾಂಶುಪಾಲಕ'ರಾಗಿ ಕೊನೆಯವರೆಗೆ ಅಲ್ಲಿಯೇ ಕೆಲಸ ಮಾಡಿದರು. 'ಬಿ.ಎಂ.ಶ್ರೀಕಂಠಯ್ಯನವರು' ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಅವಿಶ್ರಾಂತವಾಗಿ ದುಡಿದರು. ಹಾಗೂ ಅವರ ಪ್ರೀತಿಯ ವಿದ್ಯಾರ್ಥಿಗಳಾದ 'ಮಾಸ್ತಿ', 'ಕುವೆಂಪು', 'ಎಸ್. ವಿ. ರಂಗಣ್ಣ', 'ತೀ. ನಂ. ಶ್ರೀಕಂಠಯ್ಯ', 'ಜಿ. ಪಿ. ರಾಜರತ್ನಂ', 'ಡಿ. ಎಲ್. 'ನರಸಿಂಹಚಾರ್' ಮುಂತಾದವರಿಗೆ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಲು ಪ್ರೋತ್ಸಾಹಿದರು. ಅವರು ಕನ್ನಡದಲ್ಲಿ ನಾಟಕಗಳನ್ನು ಬರೆದರು.

  • ಗದಾಯುದ್ಧ,
  • ಅಶ್ವತ್ಥಾಮನ್
  • ಪಾರಸಿಕರು

ಇಂಗ್ಲೀಷ್ ಗೀತೆಗಳ ಅನುವಾದದ ರಚನೆಗಳು[ಬದಲಾಯಿಸಿ]

'ಪ್ರೊ. ಬಿ.ಎಂ.ಶ್ರೀ.ರವರು', 'ಹೊಂಗನಸು', 'ಇಂಗ್ಲಿಷ್ ಗೀತೆಗಳು' ಎಂಬ ಕವನ ಸಂಕಲನಗಳನ್ನು ರಚಿಸಿದ್ದಾರೆ. ಅವರು ನ್ಯೂಮನ್ ಬರೆದ 'Lead Kindly Light' ಎಂಬ ಕವಿತೆಯನ್ನು ಕನ್ನಡದಲ್ಲಿ ಅನುವಾದ ಮಾಡಿದ `ಕರುಣಾಳು ಬಾ ಬೆಳಕೆ' ಎಂಬ ಕವನ ತುಂಬಾ ಜನಪ್ರಿಯವಾಯಿತು.

ಕರುಣಾಳು, ಬಾ, ಬೆಳಕೆ,-
ಮುಸುಕಿದೀ ಮಬ್ಬಿನಲಿ,
ಕೈ ಹಿಡಿದು ನಡೆಸೆನ್ನನು.
ಇರುಳು ಕತ್ತಲೆಯ ಗವಿ; ಮನೆ ದೂರ;
ಕನಿಕರಿಸಿ;
ಕೈ ಹಿಡಿದು ನಡೆಸೆನ್ನನು.
  • ಇತ್ಯಾದಿ

ಪ್ರಶಸ್ತಿಗಳು[ಬದಲಾಯಿಸಿ]

'ಬಿ.ಎಂ.ಶ್ರೀ'ಯವರಿಗೆ ೧೯೩೮ರಲ್ಲಿ ಅವರ ಅವಿಸ್ಮರಣೀಯ ಕೆಲಸಕ್ಕಾಗಿ ಮೈಸೂರಿನ ಮಹಾರಾಜರು `ರಾಜ ಸೇವಾಸಕ್ತ' ಎಂಬ ಬಿರುದನ್ನು ನೀಡಿ ಗೌರವಿಸಿದರು. ೧೯೨೮ರಲ್ಲಿ 'ಗುಲಬರ್ಗಾ'ದಲ್ಲಿ ನಡೆದ '೧೪ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ'ರಾಗಿದ್ದರು. ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಅದರ ಏಳಿಗೆಗಾಗಿ ಶ್ರಮಿಸಿದರು. ಹೀಗೆ ತಮ್ಮ ಜೀವಿತ ಕಾಲವನ್ನು ಕನ್ನಡ ಸಾಹಿತ್ಯಕ್ಕಾಗಿ ಮೀಸಲಿಟ್ಟ ಬಿ. ಎಂ. ಶ್ರೀ ಅವರನ್ನು `ಕನ್ನಡದ ಕಣ್ವ' ಎಂದು ಕರೆಯಲಾಗುತ್ತದೆ.

ನಿಧನ[ಬದಲಾಯಿಸಿ]

೧೯೪೬ರಲ್ಲಿ 'ಪ್ರೊ.ಬಿ.ಎಂ.ಶ್ರೀ'ರವರು, 'ಧಾರವಾಡ'ದಲ್ಲಿ ಕೆಲಸಮಾಡುತ್ತಿರುವ ಸಮಯದಲ್ಲಿಯೇ ನಿಧನರಾದರು.

  • ಹೆಚ್ಚಿನ ಓದು :

ಕನ್ನಡ ಸಾಹಿತ್ಯಕ್ಕೆ ಬಿ.ಎಂ.ಶ್ರೀಯವರ ಕೊಡುಗೆ ಎಷ್ಟು ದೊಡ್ಡದು ಎಂಬ ಬಗ್ಯೆ ತಿಳಿಯಲು 'ಡಾ. ಏ.ಎನ್.ಮೂರ್ತಿರಾಯರ' 'ಸಮಗ್ರ ಲಲಿತ ಪ್ರಬಂಧಗಳು' ಪುಸ್ತಕದಲ್ಲಿ 'ಬಿ.ಎಂ.ಶ್ರೀ ' ಅಧ್ಯಾಯವನ್ನು ಓದಿ.