ದ.ರಾ.ಬೇಂದ್ರೆ

ವಿಕಿಪೀಡಿಯ ಇಂದ
(ಬೇಂದ್ರೆ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಶ್ರೀ ದತ್ತಾತ್ರೇಯ ರಾಮಚಂದ್ರ ಬೇಂದ್ರೆ

"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.ಬೇಂದ್ರೆಯವರ ಕುರಿತೊಂದು [೧] ತಯಾರಾಗಿತ್ತು.

ಪರಿವಿಡಿ

[ಬದಲಾಯಿಸಿ] ಜೀವನ

ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ.

ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯವರು. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಮ್.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.

ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್‌ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.

[ಬದಲಾಯಿಸಿ] ಸಾಹಿತ್ಯ

ಬೇಂದ್ರೆ ಸ್ಮಾರಕ, ಧಾರವಾಡ

ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "ಗರಿ", "ಕಾಮಕಸ್ತೂರಿ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸ್ವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ.ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.

ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.

ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ. ಇವರು ಬರೆದ "ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ" ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ. ಗಣಿತದ ಲೆಕ್ಕಾಚಾರ ಮಾಡುತ್ತ ಬಾಳೆಹಣ್ಣಿನ ಗೊನೆಯಲ್ಲಿ, ಹಲಸಿನ ಹಣ್ಣಿನ ಮುಳ್ಳುಗಳಲ್ಲಿ, ಜೇನುಗೂಡಿನಲ್ಲಿ, ನಿಮ್ಮ ಕಿರುಬೆರಳಿನ ಅಂಚಿಗಿಂತ ಚಿಕ್ಕದಾಗಿರುವ ಹೂವುಗಳಲ್ಲಿ, ಎಲ್ಲೆಲ್ಲೂ ಲೆಕ್ಕಾಚಾರವಿದೆ ಅನ್ನುತ್ತಾ ಕೊನೆಕೊನೆಗೆ ನಮ್ಮ ರಾಷ್ಟ್ರಕವಿ ದ.ರಾ.ಬೇಂದ್ರೆಯವರು ಗಣಿತದ ಲೆಕ್ಕಾಚಾರದಲ್ಲೇ ಮುಳುಗಿದ್ದರು.ಇವರನ್ನು ಕನ್ನಡದ "ಕನ್ನಡದ ಠಾಗೋರ್ " ಎಂದು ಕರೆಯುತ್ತಾರೆ."ನಮನ"

[ಬದಲಾಯಿಸಿ] ಬೇಂದ್ರೆಯವರ ಸಾಹಿತ್ಯ

[ಬದಲಾಯಿಸಿ] ಕಾವ್ಯಸಂಕಲನ

ಡಾ.ಪಿ.ಬಿ.ಶ್ರೀನಿವಾಸ್: ಉತ್ತರ ಧ್ರುವದಿಮ್ ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ ಪಿ.ಸುಶೀಲಾ: ಸೂರ್ಯನ ಬಿoಬಕೆ ಚಂದ್ರನ ಬಿಂಬಾವೂ ರಮ್ಮಿಸಿ ನಗೆಯಲಿ ಮೀಸುತಿದೆ

ಡಾ.ಪಿ.ಬಿ.ಶ್ರೀನಿವಾಸ್: ಭೂ ರಂಗಕೆ ಅಭಿಸಾರಕೆ ಕರೆಯುತ ತಿಂಗಳು ತಿಂಗಳು ಮರೆಯುತಿದೆ ಪಿ.ಸುಶೀಲಾ: ಭೂ ರಂಗಕೆ ಅಭಿಸಾರಕೆ ಕರೆಯುತ ತಿಂಗಳು ತಿಂಗಳು ಮರೆಯುತಿದೆ ಡಾ.ಪಿ.ಬಿ.ಶ್ರೀನಿವಾಸ್: ತುoಬುತ ತುಳುಕುತ ತೀ ಡುತ ತನ್ನೊಳು ತಾನೇ ಸವಿಯನು ಸವಿಯುತಿದೆ ಇಬ್ಬರೂ : ತಾನೇ ಸವಿಯನು ಸವಿಯುತಿದೆ ಪಿ.ಸುಶೀಲಾ: ಉತ್ತರ ಧ್ರುವದಿಮ್ ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ

ಪಿ.ಸುಶೀಲಾ: ಭೂ ವನ ಕುಸುಮಿಸಿ ಪುಳಕಿಸಿ ಮರಳಿಸಿ ಕೋಟಿ ಕೋಟಿ ಸಲ ಹೊಸೆಯಿಸಿತು ಡಾ.ಪಿ.ಬಿ.ಶ್ರೀನಿವಾಸ್: ಭೂ ವನ ಕುಸುಮಿಸಿ ಪುಳಕಿಸಿ ಮರಳಿಸಿ ಕೋಟಿ ಕೋಟಿ ಸಲ ಹೊಸೆಯಿಸಿತು ಪಿ.ಸುಶೀಲಾ: ಮಿತ್ರನ ಮೈತ್ರಿಯ ಹೊಸಗೆಮ ಕೆದರಿದೆ ಮರುಕದ ಧಾರೆಯ ಮಸೆಯಿಸಿತು ಇಬ್ಬರೂ : ಮರುಕದ ಧಾರೆಯ ಮಸೆಯಿಸಿತು ಡಾ.ಪಿ.ಬಿ.ಶ್ರೀನಿವಾಸ್: ಉತ್ತರ ಧ್ರುವದಿಮ್ ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ

ಡಾ.ಪಿ.ಬಿ.ಶ್ರೀನಿವಾಸ್: ಅಕ್ಷಿಣಿ ಮೀಲನ ಮಾಡದ ನಕ್ಷತ್ರಜಗಣ ಗಗನದಿ ಹಾರದಿದೆ ಪಿ.ಸುಶೀಲಾ: ಅಕ್ಷಿಣಿ ಮೀಲನ ಮಾಡದ ನಕ್ಷತ್ರಜಗಣ ಗಗನದಿ ಹಾರದಿದೆ ಡಾ.ಪಿ.ಬಿ.ಶ್ರೀನಿವಾಸ್: ಬಿದಿಗೆಯ ತುಂಬಾ ಧರದಲಿ ಇಂದಿಗೂ ಮಿಲನದ ಚಿಹ್ನವು ತೋರದಿದೆ ಇಬ್ಬರೂ : ಮಿಲನದ ಚಿಹ್ನವು ತೋರದಿದೆ ಉತ್ತರ ಧ್ರುವದಿಮ್ ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ ಸೂರ್ಯನ ಬಿoಬಕೆ ಚಂದ್ರನ ಬಿಂಬಾವೂ ರಮ್ಮಿಸಿ ನಗೆಯಲಿ ಮೀಸುತಿದೆ

(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು


  • ೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
  • ೧೯೭೩: ಮತ್ತೆ ಶ್ರಾವಣಾ ಬಂತು;
  • ೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
  • ೧೯೮೩: ತಾ ಲೆಕ್ಕಣಕಿ ತಾ ದೌತಿ;

[ಬದಲಾಯಿಸಿ] ವಿಮರ್ಶೆ

೧೯೩೭: ಸಾಹಿತ್ಯ ಮತ್ತು ವಿಮರ್ಶೆ;

೧೯೪೦: ಸಾಹಿತ್ಯಸಂಶೋಧನೆ;

೧೯೪೫: ವಿಚಾರ ಮಂಜರಿ;

೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;

೧೯೫೯: ಮಹಾರಾಷ್ಟ್ರ ಸಾಹಿತ್ಯ;

೧೯೬೨: ಕಾವ್ಯೋದ್ಯೋಗ;

೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;

೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;

೧೯೭೬: ಕುಮಾರವ್ಯಾಸ ಪುಸ್ತಿಕೆ;

ವರಕವಿ ದ.ರಾ. ಬೇಂದ್ರೆ ಕುರಿತ ಮತ್ತೊಂದು ಲೇಖನಕ್ಕೆ ಈ ಲಿಂಕ್ ಕ್ಲಿಕ್ ಮಾಡಿ http://kannadaratna.com/achievers/bendre.html

[ಬದಲಾಯಿಸಿ] ಸಣ್ಣ ಕಥೆ

[ಬದಲಾಯಿಸಿ] ಉಲ್ಲೇಖಗಳು

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು
ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು