ಗೋವಿಂದ ಪೈ

ವಿಕಿಪೀಡಿಯ ಇಂದ
(ಮಂಜೇಶ್ವರ ಗೋವಿಂದ ಪೈ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಗೋವಿಂದ ಪೈ

ಗೋವಿಂದ ಪೈ - ರಾಷ್ಟ್ರಕವಿ ಎಂದು ಹೆಸರಾದ ಕನ್ನಡದ ಸಾಹಿತಿಗಳಲ್ಲೊಬ್ಬರು.

ಪರಿವಿಡಿ

[ಬದಲಾಯಿಸಿ] ಬಾಲ್ಯ ಮತ್ತು ವ್ಯಾಸಂಗ :

ರಾಷ್ಟ್ರಕವಿ ಗೋವಿಂದ ಪೈಯವರು ಮಂಗಳೂರಿನಲ್ಲಿ ೧೮೮೩ ಮಾರ್ಚ್ ೨೩ರಂದು ಜನಿಸಿದರು. ಇವರ ಆರಂಭದ ವ್ಯಾಸಂಗ ಮಂಗಳೂರಿನಲ್ಲಿ ನಡೆಯಿತು. ಹೆಚ್ಚಿನ ವ್ಯಾಸಂಗಕ್ಕಾಗಿ ಮದರಾಸಿಗೆ ( ಈಗಿನ ಚೆನ್ನೈಗೆ) ತೆರಳಿದರು. ಅದರೆ ತಂದೆಯ ಮರಣದಿಂದಾಗಿ ಪದವಿ ಪಡೆಯದೆ ಮರಳಬೇಕಾಯಿತು.

[ಬದಲಾಯಿಸಿ] ಗೋವಿಂದ ಪೈಯವರ ಸಾಹಿತ್ಯ ಕೃಷಿ :

ಗೋವಿಂದ ಪೈಯವರು ನಂತರ ಕೇರಳ ರಾಜ್ಯದಲ್ಲಿ ಸೇರ್ಪಡೆಯಾದ ಮಂಜೇಶ್ವರದಲ್ಲಿ ನೆಲಸಿದ್ದರಿಂದ ಮಂಜೇಶ್ವರ ಗೋವಿಂದ ಪೈ ಎಂದೇ ಹೆಸರಾದರು. ಗೋವಿಂದ ಪೈಗಳು ಗಿಳಿವಿಂಡು, ನಂದಾದೀಪ ಎಂಬ ಕಾವ್ಯ ಸಂಕಲನಗಳನ್ನು ಹೊರ ತಂದಿದ್ದಾರೆ.‘ ವೈಶಾಖಿ’ ಹಾಗು ‘ ಗೊಲ್ಗೊಥಾ’ ಎನ್ನುವ ಎರಡು ಖಂಡಕಾವ್ಯಗಳನ್ನು ಬರೆದಿದ್ದಾರೆ ‘ ಹೆಬ್ಬೆರೆಳು’ ಎನ್ನುವ ಪದ್ಯಗಳನ್ನು ಒಳಗೊಂಡ ಏಕಾಂಕ ನಾಟಕವನ್ನೂ, ‘ ಚಿತ್ರಭಾನು’ ಎನ್ನುವ ಗದ್ಯನಾಟಕವನ್ನೂ ಬರೆದಿದ್ದಾರೆ.'ತಾಯಿ ‘ ಎನ್ನುವ ಸಾಮಾಜಿಕ ನಾಟಕವನ್ನು ಬರೆದದ್ದಲ್ಲದೆ, ಜಪಾನಿನ ನೋ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಆದರೆ ಸಂಶೋಧನೆ ಗೋವಿಂದ ಪೈಗಳ ಬರೆವಣಿಗೆಯ ಅತಿ ಮುಖ್ಯ ಭಾಗ. ತುಳುನಾಡಿನ ಇತಿಹಾಸ, ಗೌಡ ಸಾರಸ್ವತರ ಮೂಲ, ಬಸವೇಶ್ವರ ವಂಶಾವಳಿ, ಹಾಗು ಕರ್ನಾಟಕದ ಪ್ರಾಚೀನ ರಾಜಮನೆತನಗಳು, ಭಾರತೀಯ ಇತಿಹಾಸ, ಜೈನ, ಬೌದ್ಧ ಹಾಗು ವೀರಶೈವ ಧರ್ಮಗಳ ಬಗೆಗೆ ಮೌಲಿಕ ಸಂಶೋಧನೆ ಮಾಡಿ, ಅನೇಕ ಲೇಖನಗಳನ್ನು ಬರೆದಿದ್ದಾರೆ. ಗೋವಿಂದ ಪೈಗಳ ಪತ್ರಗಳನ್ನು ಜಿ.ಪಿ.ರಾಜರತ್ನಂರವರು ‘ ಮಂಜೇಶ್ವರ ಗೋವಿಂದ ಪೈಗಳ ಪತ್ರಗಳು’ ಎನ್ನುವ ಪುಸ್ತಕರೂಪದಲ್ಲಿ ಹೊರತಂದಿದ್ದಾರೆ.

[ಬದಲಾಯಿಸಿ] ಹಲವುಭಾಷೆಗಳಲ್ಲಿ ಸಾಹಿತ್ಯವನ್ನು ರಚಿಸುವ ಪ್ರತಿಭೆ ಅವರಿಗಿತ್ತು :

ಗೋವಿಂದ ಪೈಗಳು ಕೊಂಕಣಿ, ತುಳು, ಕನ್ನಡ, ಸಂಸ್ಕೃತ, ಮಲಯಾಳಂ, ತೆಲುಗು, ತಮಿಳು, ಮರಾಠಿ, ಒರಿಯಾ, ಬಂಗಾಳಿ, ಪಾಲಿ, ಅರ್ಧಮಾಗಧಿ, ಉರ್ದು, ಪರ್ಷಿಯನ್, ಗ್ರೀಕ್, ಲ್ಯಾಟಿನ್ ಹಾಗು ಜಪಾನಿ ಭಾಷೆಗಳಲ್ಲಿ ಪಾಂಡಿತ್ಯವನ್ನು ಪಡೆದಿದ್ದರು. ೧೯೪೯ರಲ್ಲಿ ಮದರಾಸು ಸರಕಾರವು (೧೯೫೬ರಲ್ಲಿ ಕರ್ನಾಟಕ ಏಕೀಕರಣಕ್ಕಿಂತ ಮೊದಲು ದಕ್ಷಿಣ ಕನ್ನಡ ಜಿಲ್ಲೆಯು ಆಗಿನ ಮದರಾಸು ರಾಜ್ಯದಲ್ಲಿ ಅಂದರೆ ಈಗಿನ ತಮಿಳುನಾಡಿನಲ್ಲಿ ಇತ್ತು) ಗೋವಿಂದ ಪೈಗಳಿಗೆ ರಾಷ್ಟ್ರಕವಿ ಎಂದು ಸನ್ಮಾನ ನೀಡಿ ಗೌರವಿಸಿತು.

[ಬದಲಾಯಿಸಿ] ಮುಂಬೈನಲ್ಲಿ ಜರುಗಿದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

೧೯೫೦ರಲ್ಲಿ ಮುಂಬಯಿಯಲ್ಲಿ ಜರುಗಿದ ೩೪ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗೋವಿಂದ ಪೈಗಳು ಅಧ್ಯಕ್ಷರಾಗಿದ್ದರು.

[ಬದಲಾಯಿಸಿ] ಉಡುಪಿಯ ಗೋವಿಂದ ಪೈ ಸಂಶೋಧನ ಕೇಂದ್ರ, ಕಿರಿಯರಿಗೆ, ಸಂಶೋಧನಕರ್ತರಿಗೆ, ಕಾಶಿಯಾಗಿದೆ :

ಉಡುಪಿಯಲ್ಲಿ ಗೋವಿಂದ ಪೈ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗಿದೆ.

೧೯೬೩ಸೆಪ್ಟೆಂಬರ್ ೦೬ ರಂದು ಗೋವಿಂದ ಪೈಯವರು ನಿಧನ ಹೊಂದಿದರು.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು