ಮೋಕ್ಷಗುಂಡಂ ವಿಶ್ವೇಶ್ವರಯ್ಯ
| ಮೋಕ್ಷಗುಂಡಂ ವಿಶ್ವೇಶ್ವರಯ್ಯ | |
|---|---|
ಶ್ರೀ ಮೋಕ್ಷಗುಂಡಂ ವಿಶ್ವೇಶ್ವರಯ್ಯ |
|
| ಜನನ | ಸೆಪ್ಟೆಂಬರ್ ೧೫, ೧೮೬೦ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ, ಕರ್ನಾಟಕ, ಭಾರತ |
| ನಿಧನ | ಏಪ್ರಿಲ್ ೧೪, ೧೯೬೨ (ತೀರಿದಾಗ ವಯಸ್ಸು ೧೦೧) ಬೆಂಗಳೂರು |
| ರಾಷ್ಟ್ರೀಯತೆ | ಭಾರತೀಯ |
| 'ಶಿಕ್ಷಣ | ಪುಣೆ ಸಿವಿಲ್ ಇಂಜಿನಿಯರಿಂಗ್ ಕಾಲೇಜ್ |
| ವೃತ್ತಿ | ಇಂಜಿನಿಯರ್ |
| ಧಾರ್ಮಿಕತೆ | ಹಿಂದೂ ಧರ್ಮ |
| ಪೋಷಕರು | ವೆಂಕಾಚಮ್ಮ(ತಾಯಿ) ಶ್ರೀನಿವಾಸ ಶಾಸ್ತ್ರಿ (ತಂದೆ) |
(ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨), ಸರ್ ಎಮ್‍ವಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಎಂದು ಜನಪ್ರಿಯರಾಗಿದ್ದ ಇವರು, ಭಾರತದ ಗಣ್ಯ ಎಂಜಿನಿಯರರಲ್ಲಿ ಒಬ್ಬರು ಮತ್ತು ಮೈಸೂರು ಸಂಸ್ಥಾನದ ದಿವಾನರಾಗಿದ್ದವರು.
ಪರಿವಿಡಿ |
ಬಾಲ್ಯ, ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ[ಬದಲಾಯಿಸಿ]
ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ'. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರು ಜನಿಸಿದ್ದು ಬೆಂಗಳೂರಿನಿಂದ ೪೦ ಮೈಲಿ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದರಾಸು ವಿಶ್ವವಿದ್ಯಾಲಯದಿಂದ ಬಿಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.
ನೀರಾವರಿ[ಬದಲಾಯಿಸಿ]
ವಿಶ್ವೇಶ್ವರಯ್ಯನವರು ನಂತರ ಮುಂಬೈ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು ೧೮೮೪ರಲ್ಲಿ. ಇದರ ನಂತರ ಭಾರತೀಯ ನೀರಾವರಿ ಕಮಿಷನ್ ಇಂದ ಅವರಿಗೆ ಆಮಂತ್ರಣ ಬಂದಿತು. ಈ ಕಮಿಷನ್ ಅನ್ನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಮ್. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚಿರಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವಿಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು ಮತ್ತು ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು.
ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೊಂದನ್ನು ಕಂಡುಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾ೦ತ್.
ದಿವಾನರಾಗಿ[ಬದಲಾಯಿಸಿ]
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಒಟ್ಟಾರೆ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಅಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.
ಗೌರವಗಳು[ಬದಲಾಯಿಸಿ]
ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟಿಷ್ ಸರ್ಕಾರ ಅವರಿಗೆ "ಸರ್" ಪದವಿಯನ್ನು ನೀಡಿತು. -
೧೯೫೫ ರಲ್ಲಿ ಭಾರತ ಸರ್ಕಾರದ ಅತ್ಯುಚ್ಚ ಗೌರವವಾದ ಭಾರತ ರತ್ನ ಲಭಿಸಿತು. ಸರ್. ಎಂ. ವಿಶ್ವೇಶ್ವರಯ್ಯನವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು.
ಈಗ ಕರ್ನಾಟಕದಲ್ಲಿ ಹೆಚ್ಚಿನ ಶಾಲಾ ಕಾಲೇಜುಗಳು,ಐ.ಟಿ.ಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಇವರ ಹೆಸರಿಟ್ಟು ಗೌರವಿಸಲಾಗಿದೆ. ಭಾರತ ದೇಶದಲ್ಲಿ ಮೊದಲ EDUSAT ತರಗತಿಗಳನ್ನು ಆರಂಭಿಸಿದ ಕೀರ್ತಿ ಬೆಳಗಾವಿಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ್ದು. ಇದರ ಮುಖ್ಯ ಉದ್ದೇಶ ವಿಶ್ವವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ನೀಡುವುದು, ಕರ್ನಾಟಕದಲ್ಲಿನ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳು ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗವಾಗಿವೆ.
ಇಂಜಿನಿಯರ್ ಕ್ಸೆತ್ರದಲ್ಲಿ ಇವರು ಸಲ್ಲಿಸಿರುವ ಅಪಾರ ಸೇವೆಯ ನೆನಪಿಗಾಗಿ ಇವರ ಜನ್ಮ ದಿನವನ್ನು(ಸೆಪ್ಟೆಂಬರ್ ೧೫) ಭಾರತದಲ್ಲಿ ಇಂಜಿನಿಯರ್ ದಿನ ವಾಗಿ ಆಚರಿಸಲಾಗುವುದು."ನಮನ"
ವಿಶ್ವೇಶ್ವರಯ್ಯನವರ ಹೆಸರಿಡಲಾದ ಪ್ರಮುಖ ಸಂಸ್ಥೆಗಳು[ಬದಲಾಯಿಸಿ]
- ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ.
- ಯೂನಿವರ್ಸಿಟಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ, ಕೆ.ಆರ್.ಸರ್ಕಲ್, ಬೆಂಗಳೂರು-೫೬೦೦೦೧
- ಸರ್.ಎಂ.ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ, ಕೃಷ್ಣ ದೇವರಾಯ ನಗರ, ಹುಣಸ ಮಾರನ ಹಳ್ಳಿ, ಬೆಂಗಳೂರು-೫೬೨೧೫೭
- ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ.
- ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ ಇವರ ಜನ್ಮಶತಮಾನೋತ್ಸವದ ಅಂಗವಾಗಿ ಸ್ಥಾಪಿತವಾದದ್ದು.
ಕರ್ನಾಟಕದ ಹೊರಗೆ
- 'ಮಹಾರಾಷ್ಟ್ರ'ದ ನಾಗಪುರದಲ್ಲಿರುವ 'ವಿಶ್ವೇಶ್ವರಯ್ಯ ರೀಜನಲ್ ಇಂಜಿನಿಯರಿಂಗ್ ಕಾಲೇಜು'(ಈಗ 'ವಿಶ್ವೇಶ್ವರಯ್ಯ ನ್ಯಾಷನಲ್ ಇನಸ್ಟಿಟಿಟ್ಯೂಟ್ ಆಫ್ ಟೆಕ್ನಾಲೊಜಿ' ಎಂದು ಹೆಸರಿಸಲಾಗಿದೆ).
- 'ಸರ್.ಎಂ.ವಿಶ್ವೇಶ್ವರಯ್ಯ ಇನಸ್ಟಿಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ',ಅಂಗಲ್ಲು,ಮದನಪಲ್ಲಿ,ಚಿತ್ತೂರ್ ಜಿಲ್ಲೆ,ಆಂಧ್ರ ಪ್ರದೇಶ್.
- 'ವಿಶ್ವೇಶ್ವರಯ್ಯ ಇನಸ್ಟಿಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್', ಚೌಡರಪಲ್ಲಿ, ದೇವರಕದ್ರ ಮಂಡಲ್, ಮೆಹಬೂಬ್ ನಗರ,ಆಂಧ್ರ ಪ್ರದೇಶ್.
ಪುಸ್ತಕಗಳು[ಬದಲಾಯಿಸಿ]
- Memoirs of my working life (ನನ್ನ ವೃತ್ತಿ ಜೀವನದ ನೆನಪುಗಳು - ಕನ್ನಡಕ್ಕೆ ಡಾ. ಗಜಾನನ ಶರ್ಮ)
- Reconstructing India
.
ಹೊರಗಿನ ಸಂಪರ್ಕಗಳು[ಬದಲಾಯಿಸಿ]
- ಇನ್ಸ್ಟಿಟ್ಯುಟ್ ಆಫ್ ಇಂಜಿನಿಯರರ್ಸ್(ಭಾರತ) ಸಂಪಾದಿಸಿರುವ ವಿಶ್ವೇಶ್ವರಯ್ಯ ಕುರಿತ ಕೆಲವು ಪುಸ್ತಕಗಳ ಪಟ್ಟಿ
- Sir Mokshagundam Visvesvaraya – A Visionary Engineer par Excellence
- ವಿಶ್ವೇಶ್ವರಯ್ಯನವರ ವ್ಯಕ್ತಿ ಚಿತ್ರಣ
- ವಿಶ್ವೇಶ್ವರಯ್ಯನವರ ಕುರಿತ ಇನ್ನೊಂದು ವ್ಯಕ್ತಿ ಚಿತ್ರಣ
- ವಿಶ್ವೇಶ್ವರಯ್ಯನವರ ಕುರಿತ ಇನ್ನೊಂದು ವ್ಯಕ್ತಿ ಚಿತ್ರಣ ಹಲವು ಆಶ್ಚರ್ಯಕರ ಮಾಹಿತಿಗಳೊಂದಿಗೆ
- ವಿಜ್ಞಾನ ಪ್ರಸಾರದಲ್ಲಿ ಮಾಹಿತಿ
- ಮೈಸೂರ್ ಬ್ಯಾಂಕ್ ತಾಣದಲ್ಲಿ ಸ್ಥಾಪಕರ ನೆನೆಕೆ