ರಾಮಕೃಷ್ಣ ಹೆಗಡೆ
ರಾಮಕೃಷ್ಣ ಹೆಗಡೆ (೨೯-೮-೧೯೨೬ -೧೨-೧-೨೦೦೪), ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ರಾಜಕೀಯ ಮುತ್ಸದ್ಧಿಯಾಗಿದ್ದರು. ಇವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು.
[ಬದಲಾಯಿಸಿ] ಜನನ, ವಿದ್ಯಾಭ್ಯಾಸ,ವೃತ್ತಿ ಜೀವನ
ಹೆಗಡೆಯವರು ಉತ್ತರ ಕನ್ನಡ ಜಿಲ್ಲೆಯ 'ಸಿದ್ದಾಪುರ' ತಾಲೂಕಿನ ದೊಡ್ಮನೆ ಗ್ರಾಮದಲ್ಲಿ ೧೯೨೬, ಅಗಸ್ಟ್ ೨೯ ರಂದು , ಮಹಾಬಲೇಶ್ವರ ಹೆಗ್ಡೆ ಹಾಗು ಸರಸ್ವತಿ ಹೆಗ್ಡೆ ದಂಪತಿಗಳಿಗೆ ಹವ್ಯಕ ಬ್ರಾಹ್ಮಣರ ಕುಟುಂಬದಲ್ಲಿ ಜನಿಸಿದರು. ಕೃಷಿಕ ಕುಟುಂಬದಿಂದ ಬಂದ ಇವರು ಮುಂದೆ ಇವರು ಕಾಶಿ ವಿದ್ಯಾಪೀಠ, ಬನಾರಸ್ ಹಾಗು ಲಕ್ನೋ ಯುನಿವರ್ಸಿಟಿ ಗಳಲ್ಲಿ ಓದಿ ನ್ಯಾಯ ಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸ್ವಾತಂತ್ರ್ಯ ಚಳುವಳಿಯಲ್ಲೂ ಭಾಗವಹಿಸಿದ್ದ ಇವರು ೧೯೪೨ ರ ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಸೆರೆಮನೆ ವಾಸವನ್ನೊ ಅನುಭವಿಸಿದ್ದರು. ತನ್ನ ೨೦ನೇ ವಯಸಲ್ಲೇ ರೈತ ಚಳುವಳಿಯನ್ನು ರಾಜ್ಯದಲ್ಲಿ ರೂಪಿಸಿದರು. ರಾಮಕೃಷ್ಣ ಹೆಗಡೆಯವರ ಪತ್ನಿ ಶಕುಂತಲಾ ಹೆಗಡೆ.
[ಬದಲಾಯಿಸಿ] ರಾಜಕೀಯ ವಲಯದಲ್ಲಿ
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ೧೯೫೪ ರಲ್ಲಿ ರಾಜಕೀಯಕ್ಕೆ ಪ್ರವೇಶವಾದ ಇವರು ೧೯೫೭ರಲ್ಲಿ ಮೊದಲ ಬಾರಿಗೆ ಕರ್ನಾಟಕ ವಿಧಾನ ಸಭೆಗೆ ಆಯ್ಕೆಯಾದರು. ಇ೦ದಿರಾಗಾ೦ಧಿ ೧೯೭೫ ರಲ್ಲಿ ರಾಷ್ಟ್ರದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ, ಜೈಲುವಾಸವನ್ನು ಕ೦ಡು, ಹೊರಬಂದ ನಂತರ ಜನತಾ ಪಾರ್ಟಿಯನ್ನು ಸೇರಿದ್ದರು. ೧೯೮೩ರಲ್ಲಿ ರಾಜ್ಯಾದ ಭಾರತೀಯ ಜನತಾ ಪಾರ್ಟಿಯ ೧೮ ಶಾಸಕರ ಬೆಂಬಲದೊಂದಿಗೆ ರಾಜ್ಯದ ಮುಖ್ಯಮಂತ್ರಿಯಾದ ಇವರು ದೇಶದ ಮೊದಲ ಕಾಂಗ್ರೆಸ್ಸ್ಯೇತರ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾದರು.೧೯೮೫ರಲ್ಲಿ ನಡೆದ ರಾಜ್ಯದ ಸ್ಥಳೀಯಾ ಸಂಸ್ಥೆಗಳ ಚುನಾವಣೆಗಳಲ್ಲಿ ತನ್ನ ಪಕ್ಷದ ಸಾಮಾನ್ಯ ಗೆಲುವನ್ನು ಕಂಡ ರಾಮಕೃಷ್ಣ ಹೆಗಡೆ ಪಕ್ಷದ ಸೋಲಿನ ನೈತಿಕ ಜವಾಬ್ದಾರಿಯನ್ನು ಹೊತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು ಹಾಗು ಆ ವರ್ಷ ನಡೆದ ವಿದಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಆರಿಸಿ ಬಂದ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕಿಸಿದರು, ಹೇಳಿ ಕುರ್ಚಿಗಾಗಿ ಬಡಿದಾಡುವ ಇಂದಿನ ರಾಜಕಾರಣಿಗಳಲ್ಲಿ ರಾಮಕೃಷ್ಣ ಹೆಗ್ಡೆ ಅವರ ಈ ನಡೆಯನ್ನು ನಿರೀಕ್ಷಿಸಲು ಸಾದ್ಯವೇ?ಪಂಚಾಯತ್ ರಾಜ್ ಕಾನೂನಿನಲ್ಲಿ ಹೆಗಡೆಯವರ ಪಾತ್ರ,ಲೋಕಾಯುಕ್ತ ವ್ಯವಸ್ಥೆಯನ್ನು ರಾಜ್ಯಕ್ಕೆ ಒದಗಿಸಿದ ರಾಮಕೃಷ್ಣ ಹೆಗಡೆಯವರ ಪಾತ್ರ, ರೈತರಿಗೆ ಸಾಲ ಮನ್ನ, ಕಡಿಮೆ ಬಡ್ಡಿ ಸಾಲ ಮುಂತಾದವು ರಾಜಕಾರಣ ಅಂದ ಕೂಡಲೇ ನನ್ನ ನೆನಪಿಗೆ ಬರುವಂತದ್ದು. ಪತ್ರಕರ್ತ ಆಗಬಯಸಿದ್ದರು ಹೆಗಡೆ ಅವರಿಗೆ ಪತ್ರಕರ್ತ ಆಗಬೇಕೆಂಬ ಮಹದಾಸೆ ವಿದ್ಯಾರ್ಥಿ ದೆಸೆಯಿಂದಲೂ ಇತ್ತು. ಶಿರಸಿ ಮಾರಿಕಾಂಬ ಹೈಸ್ಕೂಲ್‌ನಲ್ಲಿ ಕಲಿಯುತ್ತಿದ್ದಾಗ ಕೈಬರಹದ ಪತ್ರಿಕೆ ‘ಹೂವಿನ ಸರ’ಕ್ಕೆ ಲೇಖನ ಬರೆಯುತ್ತಿದ್ದರು. ಬನಾರಸ್‌ವಿದ್ಯಾಪೀಠದಲ್ಲಿ ಪದವಿ ವ್ಯಾಸಂಗ ಮಾಡುವಾಗಲೂ ಸ್ಥಳೀಯ ಪತ್ರಿಕೆಗಳಲ್ಲಿ ಅವರ ಲೇಖನ ಪ್ರಕಟವಾಗುತ್ತಿದ್ದವು. ಕರ್ನಾಟಕಕ್ಕೆ ಮರಳಿದ ಹೆಗಡೆ ನಂತರ ಕಾಲದ ಹೊರಳಿಗೆ ಸಿಕ್ಕು, ರಾಜಕೀಯದತ್ತ ಮುಖ ಮಾಡಿದರು. ಪತ್ರಕರ್ತನಾಗಲಿಲ್ಲ ಎಂದು ಬಹಳ ಸಾರಿ ನೊಂದುಕೊಂಡಿದ್ದೂ ಉಂಟು. ಸ್ವತ: ಲೇಖಕರಾಗಿದ್ದ ಹೆಗಡೆ ರಾಜಕೀಯ ಹಾಗೂ ಅರ್ಥಶಾಸ್ತ್ರಗಳಿಗೆ ಸ೦ಬ೦ಧಪಟ್ಟ೦ತೆ ಹಲವಾರು ಲೇಖನಗಳನ್ನು ಹಾಗೂ ಪುಸ್ತಕಗಳನ್ನು ಬರೆದವರು. “ ಎ ಕ್ಲೀನ್ ಗವರ್ನಮೆ೦ಟ್ “, “ ಪಾರ್ಲಿಮೆ೦ಟ್ ಅ೦ಡ್ ಪಿಲಿಟಿಕಲ್ ಕಲ್ಚರ್ “, “ ಅಡ್ಮಿನಿಸ್ಟ್ರೇಟಿವ್, ಸೋಶಿಯೋ, ಎಕನಾಮಿಕ್ ಛೇ೦ಜಸ್ ಇನ್ ಇ೦ಡಿಯಾ “, “ ಜುಡಿಶಿಯಲ್ ಥಿಯರಿ “, “ ಎಲೆಕ್ಟೋರಲ್ ರಿಫಾರ್ಮ್ಸ್ “ ಇನ್ನೂ ಮು೦ತಾದ ಹೊತ್ತಗೆಗಳ ಲೇಖಕರು ಹೆಗಡೆ.
ತನ್ನ ರಾಜಕೀಯ ಅವಧಿಯಲ್ಲಿ ಸರಿ ಸುಮಾರು ಎಲ್ಲಾ ಖಾತೆಗಳನ್ನೂ ನಿರ್ವಹಿಸಿದ ಅವರು,ಮೇಲೆ ಹೇಳಿದಂತೆ ಎರಡು ಬಾರಿ ಮುಖ್ಯಮ೦ತ್ರಿಯಾಗಿ ಹಾಗೂ ಕೇ೦ದ್ರ ಸಚಿವರಾಗಿ, ಕೇ೦ದ್ರ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ವಾಜಪೇಯಿ ಸರ್ಕಾರದಲ್ಲಿ ಕೇ೦ದ್ರ ವಾಣಿಜ್ಯ ಸಚಿವರಾಗಿದ್ದವರು. ಹೆಗಡೆ ಕರ್ನಾಟಕ ರಾಜ್ಯದ ಅತ್ಯ೦ತ ಉತ್ತಮ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರಾಗಿದ್ದರು. ಕರ್ನಾಟಕದ ರಾಜಕೀಯದಲ್ಲಿ ೧೩ ಬಾರಿ ರಾಜ್ಯ ಆಯವ್ಯಯವನ್ನು ಮ೦ಡಿಸಿದ ಏಕೈಕ ಅರ್ಥ ಸಚಿವ!!! ರಾಜ್ಯದ ೧೯೮೩ ರ ಪ್ರಥಮ ಕಾ೦ಗ್ರೆಸ್ಸೇತರ ಸರ್ಕಾರದ ಮುಖ್ಯಮ೦ತ್ರಿಯಾಗಿದ್ದ ಹೆಗಡೆ ಅಧಿಕಾರ ವಿಕೇ೦ದ್ರೀಕರಣದ ಪ್ರಬಲ ಶಿಫಾರಸುಗಾರರಾಗಿದ್ದರು. ಕಾ೦ಗ್ರೆಸ್ ಶಾಸಕಾ೦ಗ ಪಕ್ಷದ ಸಭೆಯಲ್ಲಿ ಪ೦ಚಾಯತ್ ರಾಜ್ ಮಸೂದೆ ಕೇವಲ ಮೂರು ಮತಗಳ ಅ೦ತರದಿ೦ದ ಬಿದ್ದು ಹೋದಾಗ, ಮ೦ತ್ರಿ ಪದವಿಗೆ ರಾಜೀನಾಮೆ ನೀಡಿ, ತಾವು ಅಧಿಕಾರದಾಹಿಯಲ್ಲ ಎ೦ಬುದನ್ನು ನಿರೂಪಿಸಿದವರು. ದೇವೇಗೌಡರು ಮುಖ್ಯಮ೦ತ್ರಿಗಳಾದ ನ೦ತರ ಕರ್ನಾಟಕ ರಾಜಕೀಯದಲ್ಲಿ ಹೆಗಡೆ ಅಪ್ರಸ್ತುತರಾದದ್ದಷ್ಟೇ ಅಲ್ಲ.. ಕೇ೦ದ್ರ ದತ್ತ ತಮ್ಮ ಗಮನ ಕೇ೦ದ್ರೀಕರಿಸಿ, ವಾಜಪೇಯಿ ಯುಗದಲ್ಲಿ ವಾಣಿಜ್ಯ ಸಚಿವರಾದರು.ರಾಜಕಾರಣಿ ಆರೋಪಗಳಿಗೆ ಹೊರತಲ್ಲ ಎಂಬಂತೆ, ಟೆಲಿಫೋನ್ ಕದ್ದಾಲಿಕೆ ಮುಂತಾದ ಆರೋಪಗಳು ಕೂಡ ಹೆಗಡೆಯವರನ್ನು ಸುತ್ತುವರಿದಿತ್ತು.
ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ ಮಂತ್ರಿ ಮಂಡಲದಲ್ಲಿ ಮಂತ್ರಿಯಾಗಿಯೂ ಸೇವೆಸಲ್ಲಿಸಿದ್ದರು. ಕರ್ನಾಟಕದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿಯಾಗಿ ೧೯೮೩ ರಲ್ಲಿ ಅಧಿಕಾರ ವಹಿಸಿಕೊಂಡ ಹೆಗಡೆಯವರು, ರಾಜ್ಯದಲ್ಲಿ "ಪಂಚಾಯತ್ ರಾಜ್" ವ್ಯವಸ್ಥೆಯನ್ನು ಮೊದಲಿಗೆ ಜಾರಿಗೆ ತಂದರು. ಕೇಂದ್ರದಲ್ಲಿ 'ವಾಜಪೇಯಿ'ಯವರ ಸರ್ಕಾರದಲ್ಲಿ ವಾಣಿಜ್ಯ ಸಚಿವರಾಗಿಯೂ ಸೇವೆಸಲ್ಲಿಸಿದ್ದರು.
[ಬದಲಾಯಿಸಿ] ನಿಧನ
ಹೆಗಡೆಯವರು ೨೦೦೪ ಜನವರಿ ೧೨ರಂದು ನಿಧನರಾದರು.
|
|||||||
