ರಾಯಚೂರು
Wikipedia ಇಂದ
ರಾಯಚೂರು ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿರುವ ಪ್ರಮುಖ ಜಿಲ್ಲೆ. ರಾಯಚೂರು ಜಿಲ್ಲೆಯ ಜನಸ೦ಖ್ಯೆ ೨೦೦೧ ರ ಜನಗಣತಿಯ೦ತೆ ೧೬,೪೮,೨೧೨. ರಾಯಚೂರು ಜಿಲ್ಲೆಯಲ್ಲಿ ಐದು ತಾಲೂಕುಗಳಿವೆ: ರಾಯಚೂರು, ದೇವದುರ್ಗ, ಸಿಂಧನೂರು, ಮಾನವಿ ಮತ್ತು ಲಿ೦ಗಸೂಗೂರು. ಈ ಜಿಲ್ಲೆಯ ಜಿಲ್ಲಾಕೇಂದ್ರ ರಾಯಚೂರು ನಗರ. ಇದು ಬೆ೦ಗಳೂರಿನಿ೦ದ ೪೦೯ ಕಿಮೀ ದೂರದಲ್ಲಿದೆ.
ಪರಿವಿಡಿ |
[ಬದಲಾಯಿಸಿ] ಇತಿಹಾಸ
ಭಾರತದ ಸ್ವಾತಂತ್ರ ಹೋರಾಟ ಮತ್ತು ನಂತರದ ಹ್ಯದರಾಬಾದು ಪ್ರಾಂತ್ಯ ವಿಮೋಚನಾ ಹೋರಾಟದಲ್ಲಿ ಈ ಜಿಲ್ಲೆಯ ಜನತೆ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಯಚೂರು ಕೋಟೆ ರಾಯಚೂರು ನಗರದ ಚಾರಿತ್ರಿಕ ಆಕರ್ಷಣೆಗಳಲ್ಲಿ ಒ೦ದು - ಇದನ್ನು ೧೨೯೪ ರಲ್ಲಿ ಕಟ್ಟಲಾಯಿತು.
[ಬದಲಾಯಿಸಿ] ಭೌಗೋಳಿಕ ಲಕ್ಷಣಗಳು
ಜಿಲ್ಲೆಯ ದಕ್ಷಿಣದಲ್ಲಿ ತುಂಗಭದ್ರಾ ನದಿ ಹಾಗೂ ಉತ್ತರದಲ್ಲಿ ಕೃಷ್ಣಾ ನದಿಯು ಹರಿಯುತ್ತಿದ್ದು, ಬಹುತೇಕ ಬಯಲು ಪ್ರದೇಶವನ್ನು ಹೊಂದಿದೆ. ಲಿಂಗಸ್ಗೂರು, ದೇವದುರ್ಗ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಚಿನ್ನದ ಅದಿರಿನ ನಿಕ್ಷೇಪಗಳಿವೆ.
[ಬದಲಾಯಿಸಿ] ಹವಾಗುಣ
ಜಿಲ್ಲೆಯ ಹವಾಗುಣವು ಬಹುತೇಕ ಶುಶ್ಕವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ 45 ಡಿಗ್ರಿವರೆಗೆ ಉಷ್ಣತೆ ಇರುತ್ತದೆ.
[ಬದಲಾಯಿಸಿ] ಪ್ರಾಮುಖ್ಯತೆ
- ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಇರುವ ಶಾಖೋತ್ಪನ್ನ ವಿದ್ಯುತ್ಸ್ಥಾವರ ಕರ್ನಾಟಕದಲ್ಲಿ ಬಳಸಲ್ಪಡುವ ವಿದ್ಯುಚ್ಛಕ್ತಿಯ ಪ್ರಮುಖ ಕೇಂದ್ರಗಳಲ್ಲಿ ಒ೦ದಾಗಿದೆ.
- ಲಿಂಗಸ್ಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯು ದೇಶದಲ್ಲಿಯೇ ಅತಿ ಹೆಚ್ಚು ಚಿನ್ನದ ಅದಿರು ಹೊಂದಿರುವ ಗಣಿಯಾಗಿದೆ.
- ಸಿಂಧನೂರು ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಭತ್ತ ಬೆಳೆಯುವ ಪ್ರದೇಶವಾಗಿದೆ.
- ಲಿಂಗಸೂಗೂರು ತಾಲ್ಲೂಕಿನ ಮುದುಗಲ್ ನಲ್ಲಿ ಐತಿಹಾಸಿಕ ಕೋಟೆ ಇದ್ದು, ಮೊಹರಂ ಆಚರಣೆ ವಿಜೃಂಭಣೆಯಿಂದ ಜರಗುತ್ತದೆ.
- ಜಲದುರ್ಗದಲ್ಲಿರುವ ಕೋಟೆ, ಅತ್ಯಂತ ವಿಶೇಷವಾಗಿ ನಿರ್ಮಿಸಲಾದ ಕೋಟೆಗಳಲ್ಲಿ ಒಂದಾಗಿದೆ.
- ಮಂತ್ರಾಲಯವು ರಾಯಚೂರಿನಿಂದ ಹತ್ತಿರದಲ್ಲಿದೆ.

