ಲಾಲ್ ಬಹಾದುರ್ ಶಾಸ್ತ್ರಿ
![]() |
|
|---|---|
| ಜನನ: | ಅಕ್ಟೋಬರ್ ೦೨, ೧೯೦೪ |
| ಮರಣ: | ಜನವರಿ ೧೧, ೧೯೬೬ |
| ಜನಿಸಿದ ಸ್ಥಳ: | ಮೊಘಲ್‌ಸಾರಾಯ್, ಉತ್ತರ ಪ್ರದೇಶ |
| ಭಾರತದ ಪ್ರಧಾನ ಮಂತ್ರಿ | |
| Tenure Order: | 2nd Prime Minister |
| ರಾಜಕೀಯ ಪಕ್ಷ: | ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ |
| ಸೇವೆ ಪ್ರಾರಂಭಿಸಿದ್ದು: | ಜೂನ್ ೯, ೧೯೬೪ |
| ಇವರ ಸೇವೆ ಕೊನೆಗೊಂಡಿದ್ದು: | ಜನವರಿ ೧೧, ೧೯೬೬ |
ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದವರು.
ಪರಿವಿಡಿ |
[ಬದಲಾಯಿಸಿ] ಜೀವನ
ಲಾಲ್ ಬಹಾದುರ್ ಮೊಘಲ್‌ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು. ೪೪೪೪
[ಬದಲಾಯಿಸಿ] ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ
ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು. ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು, ಮೊದಲು ಸಾರಿಗೆ ಮಂತ್ರಿಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿ.
ಮೇ ೨೭, ೧೯೬೪ರಂದು ಜವಾಹರ್‌ಲಾಲ್ ನೆಹರು ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು. ಸ್ವಲ್ಪಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಹಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.
[ಬದಲಾಯಿಸಿ] ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿಗಳು
ಆಗಿನ ಪ್ರಮುಖ ಸಮಸ್ಯೆ ಪಾಕಿಸ್ತಾನವಾಗಿತ್ತು. ಕಚ್ ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ ಭಾರತ-ಪಾಕ್ ಯುದ್ಧ ಪ್ರಾರಂಭವಾಗಿ ಭಾರತದ ಪಡೆ ಲಾಹೋರ್ ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿಕೊಳ್ಳಲಾಯಿತು.
ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು ಮಹಮ್ಮದ್ ಆಯೂಬ್ ಖಾನ್ ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್ ಅವರಿಂದ ಆಯೋಜಿಸಲಾದ ಟಾಷ್ಕೆಂಟ್‌ನಲ್ಲಿ ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು, ಅದೇ ಟಾಶ್ಕೆಂಟ್ ಡಿಕ್ಲೆರೇಶನ್. ಆದರೆ, ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು. ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರದಾನ ಮಂತ್ರಿ ಹಾಗು ಈ ತರಹದ ಅಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು.
[ಬದಲಾಯಿಸಿ] ಪ್ರಾಮಾಣಿಕ, ಸ್ವಾಭಿಮಾನಿ
ಇವರು ಬಹುಶಃ ಭಾರತ ಕಂಡ ಪ್ರಧಾನಿಯಾದ ಅತ್ಯಂತ ಪ್ರಾಮಾಣಿಕ ಜೀವಿ. ಇವರ ಪ್ರಾಮಾಣಿಕತೆಗೆ ಹಲವರು ತಲೆದೂಗಿದ್ದುಂಟು. ಹಾಗೆಯೇ ಇವರ ಸ್ವಾಭಿಮಾನ್, ದೇಶಾಭಿಮಾನ ಕೂಡ ತಲೆದೂಗುವಂತದ್ದು.
[ಬದಲಾಯಿಸಿ] ಶಾಸ್ತ್ರಿ ಸೋಮವಾರ
ಇವರು ಭಾರತವನ್ನು ಸ್ವಾಭಿಮಾನಿ ದೇಶವಾಗಿ ಮಾಡುವಲ್ಲಿ ಶ್ರಮವಹಿಸಿದ್ದಾರೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಬರಗಾಲ ಬಂದೊದಗಿತು. ಆಗ ಹೊರದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳಬೇಕಾಯಿತು. ಸಾಲಭಾರ ಅಧಿಕವಾಯಿತು. ಅದನ್ನರಿತ ಶಾಸ್ತ್ರಿ ವಾರದಲ್ಲಿ ಒಂದು ದಿನ ಊಟವನ್ನು ಬಿಟ್ಟರೆ ಎಷ್ಟು ಆಹಾರ ಸಂಗ್ರಹವಾಗುವುದೆಂದು ಲೆಕ್ಕಾಚಾರ ಹಾಕಿ ಸೋಮವಾರ ರಾತ್ರಿ ಊಟವನ್ನು ಬಿಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾವೂ ಸಹ ಸೋಮವಾರದ ಊಟವನ್ನು ತ್ಯಜಿಸಿದರು. ಇನ್ನೂ ಸಹ ಶಾಸ್ತ್ರಿಯವರ ಸೋಮವಾರವು ಪ್ರಚಲಿತದಲ್ಲಿದೆ. ಈ ನಿರ್ಣಯವು ಅವರ ಸ್ವಾಭಿಮಾನ ಯಾತ್ರೆಗೆ ಮುಕುಟಪ್ರಾಯದಂತಿದೆ.
[ಬದಲಾಯಿಸಿ] ಪ್ರಶಸ್ತಿಗಳು
ಇವರಿಗೆ ಮರಣಾನಂತರ ಭಾರತ ರತ್ನವನ್ನು ಪ್ರಧಾನ ಮಾಡಲಾಯಿತು. ಇವರ ಸ್ಮರಣೆಗೆ ದೆಹಲಿಯಲ್ಲಿ ಸ್ಮಾರಕವೊಂದನ್ನು ನಿರ್ಮಿಸಲಾಗಿದೆ. ಇವರ ಜನಪ್ರಿಯ ವಾಕ್ಯ ಜೈ ಜವಾನ್, ಜೈ ಕಿಸಾನ್ ಇಂದಿಗೂ ಚಿರವಾಗಿ ಉಳಿದಿದೆ.
[ಬದಲಾಯಿಸಿ] ಹೊರಗಿನ ಸಂಪರ್ಕಗಳು
| ಹಿಂದಿನ ಪ್ರಧಾನಿಗಳು: ಗುಲ್ಜಾರಿ ಲಾಲ್ ನಂದಾ |
ಭಾರತದ ಪ್ರಧಾನ ಮಂತ್ರಿ | ಮುಂದಿನ ಪ್ರಧಾನಿಗಳು: ಗುಲ್ಜಾರಿ ಲಾಲ್ ನಂದಾ |
|
|||||||
