ವಿಷ್ಣುವರ್ಧನ್ (ನಟ)
ವಿಷ್ಣುವರ್ಧನ್ | |
---|---|
ಜನನ | ಸಂಪತ್ ಕುಮಾರ್ ೧೮ ಸೆಪ್ಟೆಂಬರ್ ೧೯೫೦ |
ಮರಣ | 30 December 2009 | (aged 59)
ರಾಷ್ಟ್ರೀಯತೆ | ಭಾರತೀಯ |
ವೃತ್ತಿ(ಗಳು) | ನಟ, ಗಾಯಕ, ನಿರ್ಮಾಪಕ, ಕಥೆಗಾರ |
ಸಕ್ರಿಯ ವರ್ಷಗಳು | 1972–2009 |
ಸಂಗಾತಿ | ಭಾರತಿ ವಿಷ್ಣುವರ್ಧನ್ (1975) |
ಸಂಬಂಧಿಕರು | ಅನಿರುಧ್ (ಅಳಿಯ)[೧] |
ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೦ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು ೨೨೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು.[೨] ಇವರಿಗೆ ಇದ್ದ ಬಿರುದುಗಳು ಸಾಹಸ ಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನ
ಹುಟ್ಟು, ವಿದ್ಯಾಭ್ಯಾಸ, ಬಾಲ್ಯ
[ಬದಲಾಯಿಸಿ]ಡಾ. ವಿಷ್ಣುವರ್ಧನ್ ಅವರು ಹೆಚ್.ಎಲ್. ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ದಂಪತಿಯ ಮಗನಾಗಿ ಮೈಸೂರಿನಲ್ಲಿ ಜನಿಸಿದರು. ಇವರ ತಂದೆ ಕಲಾವಿದರು, ಸಂಗೀತ ನಿರ್ದೇಶಕರು ಮತ್ತು ಸಂಭಾಷಣೆಕಾರರು ಆಗಿದ್ದರು. ಇವರ ಕುಟುಂಬದವರು ಮೈಸೂರಿನ ಚಾಮುಂಡಿಪುರಂನಲ್ಲಿ ವಾಸಿಸುತ್ತಿದ್ದರು.ಇವರ ಪೂರ್ವಜರು ಮಂಡ್ಯ ಜಿಲ್ಲೆಯವರು. ೬ ಸಹೋದರ/ಸಹೋದರಿಯರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಬೆಂಗಳೂರಿನ ಕನ್ನಡ ಮಾದರಿ ಶಾಲೆಯಲ್ಲಿ ಮುಗಿಸಿದರು. ತಮ್ಮ ಪ್ರೌಢಶಾಲಾ ಶಿಕ್ಷಣ ಮತ್ತು ಪದವಿಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪಡೆದರು.
ನಟನೆ/ಕಲಾಜೀವನ
[ಬದಲಾಯಿಸಿ]- ಶಿವಶರಣ ನಂಬೆಯಕ್ಕ ಎಂಬ ಸಿನೆಮಾದಲ್ಲಿ 1955ರಲ್ಲಿ ಬಾಲ ನಟನಾಗಿ ನಟಿಸಿದ್ದರು. ವಿಷ್ಣು ನಟನೆಯ ಈ ಸಿನೆಮಾ 28 ದಿನದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಶಂಕರ್ ಸಿಂಗ್ ಸಿದ್ದಪಡಿಸಿದ ಈ ಸಿನೆಮಾ ಸಂಪತ್ ಕುಮಾರ್ (ವಿಷ್ಣು) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿತು, ಮುಂದೆ 1956ರಲ್ಲಿ ಕೋಕಿಲವಾಣಿ ಎಂಬ ಮತ್ತೊಂದು ಸಿನೆಮಾದಲ್ಲಿ ಕೂಡ ವಿಷ್ಣು ನಟಿಸಿದ್ದರು. ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರ ವಹಿಸಿದ್ದರು.
- ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು. ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್’ ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಹೆಸರಿನ ಬದಲಾವಣೆಯೊಂದಿಗೆ ನಾಯಕನಟನಾಗಿ ನಾಗರಹಾವು ಚಿತ್ರದೊಂದಿಗೆ ವಿಷ್ಣುವರ್ಧನ ಎಂಬ ನಟನ ಉದಯವಾಯಿತು. 29.12.1972 ರಂದು ತೆರೆಕಂಡ ಈ ಸಿನೆಮಾ, ಬೆಂಗಳೂರಿನ ಸಾಗರ್ ಚಿತ್ರಮಂದಿರ ಒಂದರಲ್ಲೇ ಸತತ 25 ವಾರಗಳು ಯಶಸ್ವಿಯಾದ ಚಿತ್ರ, ಆಗಿನ ಕಾಲಕ್ಕೇ 7 ಲಕ್ಶ ರೂಪಾಯಿಗಳನ್ನು ಗಳಿಸಿ ಹೊಸ ದಾಖಲೆ ಬರೆಯಿತು ಮತ್ತು ಬೆಂಗಳೂರಿನ ಮೂರು ಮುಖ್ಯ ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದ ಮೊದಲ ಸಿನೆಮಾವೆಂಬ ಹೆಗ್ಗಳಿಕೆ ಪಡೆಯಿತು. ರಾಷ್ಟ್ರಪ್ರಶಸ್ತಿ ಗೆದ್ದುಕೊಂಡಿತು. ವಿಷ್ಣು ನಟಿಸಿದ್ದ ‘ಸಾಹಸಸಿಂಹ’ ಸಿನೆಮಾ 25 ವಾರಗಳನ್ನು ಪೂರೈಸಿತು. ಇಲ್ಲಿಂದ ಮುಂದೆ ವಿಷ್ಣು ಸಾಹಸಸಿಂಹ ಎಂದು ಹೆಸರುವಾಸಿಯಾದರು.ಆದರೆ ಈ ಚಿತ್ರಕ್ಕೂ ಮೊದಲೆ ಅಂದರೆ 1979ರಲ್ಲೆ ಇವರಿಗೆ 'ಸಾಹಸಸಿಂಹ' ಎಂಬ ಬಿರುದು ಬಂದಿತ್ತು.
- ನಟನೆಯಲ್ಲದೇ, ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ
- ೧೯೮೦ರ ದಶಕದಲ್ಲಿ ಕಿರುತೆರೆಯಲ್ಲಿ ಪ್ರಸಾರಗೊಂಡ ಶಂಕರ್ ನಾಗ್ ನಿರ್ದೇಶನದ ಜನಪ್ರಿಯ ಧಾರಾವಾಹಿ ಮಾಲ್ಗುಡಿ ಡೇಸ್ ಕಥೆಯೊಂದರಲ್ಲಿ (ರುಪೀಸ್ ಫಾರ್ಟಿ-ಫೈವ್ ಎ ಮಂತ್) ವಿಷ್ಣುವರ್ಧನ್ ನಟಿಸಿದ್ದರು.[೩]
ಒಂದಿಷ್ಟು ಹೆಚ್ಚಿನ ಮಾಹಿತಿಗಳು
[ಬದಲಾಯಿಸಿ]ಸಿನಿಮಾರಂಗಕ್ಕೆ ನಡೆದು ಬಂದ ಹಾದಿ: ವಿಷ್ಣು 1955ರಲ್ಲಿ "ಶಿವಶರಣ ನಂಬೆಯಕ್ಕ" ಎಂಬ ಸಿನೆಮಾದಲ್ಲಿ ಬಾಲ ನಟನಾಗಿ ನಟಿಸಿದ್ದರು. ವಿಷ್ಣು ನಟನೆಯ ಈ ಸಿನೆಮಾ 28 ದಿನದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಶಂಕರ್ ಸಿಂಗ್ ಸಿದ್ದಪಡಿಸಿದ ಈ ಸಿನೆಮಾ ಸಂಪತ್ ಕುಮಾರ್ (ವಿಷ್ಣು) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿತು, ಮುಂದೆ 1956ರಲ್ಲಿ "ಕೋಕಿಲವಾಣಿ" ಎಂಬ ಮತ್ತೊಂದು ಸಿನೆಮಾದಲ್ಲಿ ಕೂಡ ವಿಷ್ಣು ನಟಿಸಿದ್ದರು. ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡರು.
1972 ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ "ನಾಗರಹಾವು" ಇವರ ಮೊದಲ ಚಿತ್ರದಲ್ಲಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್’ ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಹೆಸರಿನ ಬದಲಾವಣೆಯೊಂದಿಗೆ ನಾಯಕನಟನಾಗಿ ನಾಗರಹಾವು ಚಿತ್ರದೊಂದಿಗೆ ವಿಷ್ಣುವರ್ಧನ ಎಂದು ಜನಪ್ರಿಯರಾಗಿದ್ದರು.1980 ರಲ್ಲಿ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂದ “ಮಾಲ್ಗುಡಿ ಡೇಸ್” ಎಂಬ ಕಿರುತೆರೆಯಲ್ಲಿ ನಟಿಸಿದರು . ನಟನೆಯಲ್ಲದೇ ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ, ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ. ಹೀಗೆ ಕನ್ನಡ ಸಿನಿಮಾಗಳಲ್ಲಿ ನಟಿಸಿ ಇಡೀ ಚಿತ್ರರಂಗದಲ್ಲಿಯೇ ಸುಪ್ರಸಿದ್ಧ ನಟರಾಗಿ ಹೊರಹೊಮ್ಮಿದ್ದರು. ಹೀಗೆ ಕೇವಲ ಕನ್ನಡ ಚಿತ್ರಗಳಲ್ಲಿ ನಟಿಸದೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ವಿಷ್ಣು 30 ಡಿಸೆಂಬರ್ 2009 ರಲ್ಲಿ ವಿಧಿವಶರಾದರು. ಇವರಿಗೆ ಕೀರ್ತಿ ಮತ್ತು ಚಂದನಾ ಎಂಬ ಇಬ್ಬರು ಪುತ್ರಿಯರಿದ್ದಾರೆ.
- ಕನ್ನಡ ಚಿತ್ರರಂಗದಲ್ಲೆ ಅತಿ ಹೆಚ್ಚು ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. (ಸುಮಾರು ೧೪ ಚಿತ್ರಗಳು)
- ವಿಷ್ಣುವರ್ಧನ್-ಸುಹಾಸಿನಿ, ವಿಷ್ಣುವರ್ಧನ್-ಮಾಧವಿ ಜೋಡಿ ಕನ್ನಡ ಚಿತ್ರರಂಗದ ಅಪೂರ್ವ ಜೋಡಿಯೆಂದು ಹೆಸರಾಗಿದೆ. ಹಾಗೆಯೇ ವಿಷ್ಣು ಅವರ ಹೆಚ್ಚಿನ ಚಿತ್ರದಲ್ಲಿ ನಟಿಸಿದ ಕೀರ್ತಿ ನಟಿ ಆರತಿ ಅವರಿಗೆ ಸಲ್ಲುತ್ತದೆ.
- ಬನ್ನಂಜೆ ಗೋವಿಂದಾಚಾರ್ಯರು ಇವರ ಆದ್ಯಾತ್ಮಿಕ ಗುರುವಾಗಿದ್ದರು, ಸಂಖ್ಯಾಭವಿಷ್ಯಶಾಸ್ತ್ರವನ್ನು ನಂಬುತ್ತಿದ್ದ ಇವರು ತಮ್ಮ ಕಾರಿನ ನಂಬರಾಗಿ ಮತ್ತು ಮೊಬೈಲ್ ನ ಕೊನೆಯ ಸಂಖ್ಯೆಯಾಗಿ "೩೨೧" ಬಳಸುತ್ತಿದ್ದರು.
- ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿದೆ.
- ಇವರ ಸ್ಮರಣಾರ್ಥ ಭಾರತ ಸರ್ಕಾರ 2013ರಲ್ಲಿ ಅಂಚೆ ಚೀಟಿ ಹೊರತಂದಿದೆ.
ಡಾ. ವಿಷ್ಣುವರ್ಧನ್ ಅಭಿನಯದ ಚಿತ್ರಗಳು
[ಬದಲಾಯಿಸಿ]- ಕನ್ನಡ
ಹಿಂದಿ
[ಬದಲಾಯಿಸಿ]ಸಂಖ್ಯೆ | ಚಿತ್ರದ ಹೆಸರು |
---|---|
೧ | ಏಕ್ ನಯಾ ಇತಿಹಾಸ್ |
೨ | ಇನ್ಸ್ ಪೆಕ್ಟರ್ ಧನುಷ್ |
೩ | ಖಾಖಿ ವರ್ಧಿ |
೪ | ಜಾಲೀಮ್ |
ತಮಿಳು
[ಬದಲಾಯಿಸಿ]ಸಂಖ್ಯೆ | ಚಿತ್ರದ ಹೆಸರು |
---|---|
೧ | ಮಳಲೈ ಪಟ್ಟಾಳಂ |
೨ | ವಿಡುದಲೈ |
೩ | ಅಲೈಗಳ್ |
೪ | ಗುರು ರಾಘವೇಂದ್ರರ್ |
೫ | ಮರುದ ನಾಯಗನ್ |
೬ | ಈಟಿ |
ತೆಲುಗು
[ಬದಲಾಯಿಸಿ]ಸಂಖ್ಯೆ | ಚಿತ್ರದ ಹೆಸರು |
---|---|
೧ | ಸರ್ದಾರ್ ಧರ್ಮನ್ನ |
೨ | ಲಕ್ಷ್ಮಿ ನಿರ್ದೋಷಿ |
೩ |
ಒಕ್ಕಡು ಚಾಲು |
೪ | ಕಂಕಣಂ |
ಮಲಯಾಳಂ
[ಬದಲಾಯಿಸಿ]ಸಂಖ್ಯೆ | ಚಿತ್ರದ ಹೆಸರು |
---|---|
೧ | ಅಡಿಮೈ ಚಂಗಲ |
೨ | ಕೌರವರ್ |
೩ | ಈಟಿ |
ಹೊರಗಿನ ಕೊಂಡಿಗಳು
[ಬದಲಾಯಿಸಿ]- ವಿಷ್ಣುವರ್ಧನ್ ವೆಬ್ ಸೈಟ್[permanent dead link]
- ಚಿತ್ರಲೋಕದಲ್ಲಿ ವಿಷ್ಣುವರ್ಧನ್ ಬಗ್ಗೆ ಮಾಹಿತಿ Archived 6 January 2010[Date mismatch] ವೇಬ್ಯಾಕ್ ಮೆಷಿನ್ ನಲ್ಲಿ.
- ಕನ್ನಡದ ಮೇರು ನಟ ವಿಷ್ಣುವರ್ಧನ್ ಡಿಸೆಂಬರ್ ೩೦,೨೦೦೯ ರಂದು ದೈವಾಧೀನರಾದರು Archived 2 January 2010[Date mismatch] ವೇಬ್ಯಾಕ್ ಮೆಷಿನ್ ನಲ್ಲಿ.
- ಗಿರೀಶ್ ಕಾಸರವಳ್ಳಿ ಅಂತಿಮ ನಮನ
ಉಲ್ಲೇಖಗಳು
[ಬದಲಾಯಿಸಿ]- ↑ "Vishnuvardhan's son-in-law recreating 'Shasa Simha' in 'Raja Simha'". lehren.com. Archived from the original on 24 ಮೇ 2018. Retrieved 18 ಜುಲೈ 2018.
- ↑ Dr Vishnuvardhan to be cremated with state honours
- ↑ ವಿಷ್ಣುವರ್ಧನ್
- Pages using the JsonConfig extension
- Use British English from June 2013
- Articles with invalid date parameter in template
- Use dmy dates from June 2013
- Articles with hCards
- All articles with dead external links
- Articles with dead external links from ಜುಲೈ 2024
- Articles with permanently dead external links
- Webarchive template warnings
- ವೆಬ್ ಆರ್ಕೈವ್ ಟೆಂಪ್ಲೇಟಿನ ವೇಬ್ಯಾಕ್ ಕೊಂಡಿಗಳು
- ಕನ್ನಡ ಚಿತ್ರರಂಗದ ನಟರು
- ಸಿನಿಮಾ ತಾರೆಗಳು
- ಕನ್ನಡ ಸಿನೆಮಾ