ಶಂಕರ್ ನಾಗ್

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಶಂಕರ್ ನಾಗ್

ಶಂಕರ್ ನಾಗ್ (೧೯೫೪ - ೧೯೯೦) ಕನ್ನಡ ಚಿತ್ರರಂಗದ ಮತ್ತು ರಂಗಭೂಮಿಯ ಪ್ರಮುಖ ನಾಯಕ ನಟ ಮತ್ತು ನಿರ್ದೇಶಕರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡರ 'ಒಂದಾನೊಂದು ಕಾಲದಲ್ಲಿ' ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ನಂತರದ ೧೨ ವರ್ಷಗಳಲ್ಲಿ ಕನ್ನಡದ ಸುಮಾರು ೯೦ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು. ತಮ್ಮ ಸಹೋದರ ಅನಂತ ನಾಗ್ ಅವರೊಡನೆ "ಮಿಂಚಿನ ಓಟ", "ಜನ್ಮ ಜನ್ಮದ ಅನುಬಂಧ" ಮತ್ತು "ಗೀತಾ" ಚಿತ್ರಗಳನ್ನು ನಿರ್ಮಿಸಿದರು. ಇದರಲ್ಲಿ "ಜನ್ಮ ಜನ್ಮದ ಅನುಬಂಧ" ಮತ್ತು "ಗೀತಾ" ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ.

ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ ಕಾರ್ನಾಡ ರ "ಅಂಜು ಮಲ್ಲಿಗೆ", "ನೋಡಿ ಸ್ವಾಮಿ ನಾವಿರೋದು ಹೀಗೆ" ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಅರ್.ಕೆ. ನಾರಾಯಣ್ ಅವರ "ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು" ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್. ಮಗಳು ಕಾವ್ಯ.

ಡಾ.ರಾಜ್ ಕುಮಾರ್ ಅಭಿನಯಿಸಿರುವ ಒಂದು ಮುತ್ತಿನ ಕಥೆ ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು.
ಸೆಪ್ಟೆಂಬರ್ ೩೦, ೧೯೯೦ ರಂದು ಶಂಕರ್ ನಾಗ್ ರಸ್ತೆ ಅಪಘಾತದಲ್ಲಿ ಮರಣ ಹೊಂದಿದರು. ನಿಗೂಡ ರಹಸ್ಯ ಶಂಕರ್ ನಾಗ್ ಅಭಿನಯದ ಕೊನೆಯ ಚಿತ್ರ.

[ಬದಲಾಯಿಸಿ] ಶಂಕರ್‍ನಾಗ್ ಅಭಿನಯಿಸಿರುವ ಇತರ ಚಿತ್ರಗಳು


ವೈಯಕ್ತಿಕ ಉಪಕರಣಗಳು
ಇತರ ಭಾಷೆಗಳು