ಶರಾವತಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಶರಾವತಿ ನದಿ

ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದಲ್ಲಿ ಹುಟ್ಟುವ ಶರಾವತಿ ಕರ್ನಾಟಕದ ಪ್ರಮುಖ ನದಿಗಳಲ್ಲೊಂದು. ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುವ ಶರಾವತಿ ಹರಿಯುವ ಉದ್ದ ಸುಮಾರು ೧೨೦ ಕಿ.ಮೀ. ಹೊನ್ನಾವರದಲ್ಲಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಕರ್ನಾಟಕದಲ್ಲೇ ಅತ್ಯಂತ ಉದ್ದದ ಸೇತುವೆ. ಶರಾವತಿ ಕಣಿವೆ ನೋಡಲು ಬಹು ಸುಂದರ. ಜೋಗದಲ್ಲಿ ಶರಾವತಿ ೯೦೦ ಅಡಿ ಧುಮುಕಿ ಜೋಗ ಜಲಪಾತವನ್ನು ಸೃಷ್ಟಿಸಿದೆ. ಸಾಗರದ ಬಳಿ ಲಿಂಗನಮಕ್ಕಿಯಲ್ಲಿ ಶರಾವತಿಗೆ ಆಣೆಕಟ್ಟನ್ನು ಕಟ್ಟಲಾಗಿದೆ. ಆಣೆಕ‌ಟ್ಟಯ ಕೆಳಭಾಗದಲ್ಲಿ ಶರಾವತಿ ಜಲವಿದ್ಯುದಾಗಾರ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ದೀರ್ಘಕಾಲದವರೆಗೆ ಕರ್ಣಾಟಕದ ವಿದ್ಯುತ್ ಬೇಡಿಕೆಯ ಬಹು ಪಾಲನ್ನು ಈ ಯೋಜನೆಯೇ ಪೂರೈಸುತ್ತಿತ್ತು.

ಶರಾವತಿ ಕಣಿವೆ
"http://kn.wikipedia.org/w/index.php?title=ಶರಾವತಿ&oldid=316808" ಇಂದ ಪಡೆಯಲ್ಪಟ್ಟಿದೆ