ಶಿರ್ಡಿ ಸಾಯಿ ಬಾಬಾ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Shirdi sai2.jpg

ಶಿರ್ಡಿ ಸಾಯಿ ಬಾಬಾ (ಅಜ್ಞಾತ – ೧೫ ಅಕ್ಟೋಬರ್ ೧೯೧೮) ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ, ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು ಮತ್ತು ತಮ್ಮ ಜೀವನದ ಅವಧಿಯಲ್ಲಿ ಹಾಗು ನಂತರ ಅವರು ಮುಸ್ಲಿಮ್ ಅಥವಾ ಹಿಂದೂಗಳೇ ಎಂಬುದು ಅನಿಶ್ಚಿತವಾಗಿಯೇ ಉಳಿಯಿತು. ಸಾಯಿ ಬಾಬಾ ಅವರ ಮೇಲೆ ಇದು ಯಾವುದೇ ಪರಿಣಾಮ ಬೀರಲಿಲ್ಲ.ಯಾವುದೇ ವ್ಯಕ್ತಿಯಾದರು ಸರಿ ಜನಿಸಿದ ಮೇಲೆ ತನ್ನನು ತಾನು ಗುರುವಿಗೆ ಸಮರ್ಪಿಸಿಕೊಳ್ಳದಿದ್ದರೆ/ಶರಣಾಗತನಾಗದಿದ್ದರೆ ಆತನಿಗೆ ಮುಕ್ತಿ ಹಾಗು ಜೀವನದ ಏಳಿಗೆಗಳೇ ಇರುವುದಿಲ್ಲ ಎಂಬ ಅಂಶವನ್ನು ಶಿರಡಿ ಸಾಯಿಬಾಬಾ ಬಲವಾಗಿ ನಂಬಿದ್ದರು ಮತ್ತು ಅದನ್ನೇ ಬೋದಿಸುತ್ತಿದ್ದರು ಕೂಡ. ಆಧ್ಯಾತ್ಮಿಕ ಸಾಧನೆಯ ದೃಷ್ಟಿಯಲ್ಲಿ ಸದ್ಗುರುವಿನ ಪಾತ್ರ ಅಪಾರವಾಗಿದ್ದು ಆತನಿಲ್ಲದೆ ಆಧ್ಯಾತ್ಮಿಕ ಹಾದಿಯ ಸಾಧನೆ ಸುಲಭ ಸಾಧ್ಯದ ಮಾತಲ್ಲವೆನ್ನುವುದನ್ನು ಸಾಯಿಬಾಬಾ ಮನಗಂಡಿದ್ದರು. ದುರ್ಗುಣಗಳಿಗೆ ವಿಮುಖರಾಗಿ ಆತ್ಮ ಸಾಕ್ಷಾತ್ಕಾರಕ್ಕೆ ಮೊದಲಾಗಿ ಎಂಬುದೇ ಸಾಯಿಬಾಬ ತಮ್ಮ ಜೀವಿತಾವಧಿಯಲ್ಲಿ ಭಕ್ತರಿಗೆ ಕೊಡುತ್ತಿದ್ದ ಒಂದು ಮುಖ್ಯ ಉಪದೇಶ.

ಸಾಯಿ ಬಾಬಾ ಭಾರತದ ಉದ್ದಗಲಕ್ಕೂ ಸರ್ವ ಕಾಲಿಕ ಅಧ್ಯಾತ್ಮಿಕ ಗುರುವಾಗಿ ಹೊರ ಹೊಮ್ಮಿದ್ದು, ತಮ್ಮ ಭಕ್ತ ಸಮೂಹಕ್ಕೆ ಜೀವನದ ಏರಿಳಿತಗಳ ಬಗ್ಗೆ, ಜೀವಮಾನದ ಆಧ್ಯಾತ್ಮಿಕ ಸಾಧನೆಗಳ ಬಗ್ಗೆ, ಸಮರ್ಪಣಾ ಮನೋಭಾವದ, ಸೇವಾ ಮನೋಭಾವ, ಪರೋಪಕಾರ, ದಯಾಪರತೆ, ಕರ್ತವ್ಯ ನಿಷ್ಠೆ ಇನ್ನು ಮುಂತಾದ ಮಾನವೀಯ ಗುಣಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಶ್ರೇಷ್ಠ ಗುರುವಾಗಿದ್ದಾರೆ.

ಬಾಬಾರವರು ತಮ್ಮ ಜೀವಿತಾವಧಿಯಲ್ಲಿ ಯಾವುದೇ ಒಂದು ಜಾತಿಗಾಗಲಿ ಅಥವಾ ಧರ್ಮಕ್ಕಾಗಲಿ ಬೆಲೆ ಕೊಟ್ಟವರಲ್ಲ. ಅವರು ಕೊಡುತ್ತಿದ್ದ ಬೆಲೆ ಒಂದೇ ಒಂದು ಧರ್ಮಕ್ಕೆ ಮಾತ್ರ. ಅದು "ಮನುಷ್ಯ" ಧರ್ಮ. ಹೀಗಾಗಿ ಅವರ ವ್ಯಕ್ತಿತ್ವ ಧರ್ಮಾತೀತ ಹಾಗು ಜಾತ್ಯಾತೀತ. ಅವರು ಭಕ್ತರಿಗೆ ಬೋಧಿಸುತ್ತಿದ್ದ ಅಂಶಗಳು ಹಿಂದೂ ಹಾಗು ಮುಸ್ಲಿಂ ಧರ್ಮಗಳ ತತ್ವಗಳಿಂದ ಪಕ್ವವಾಗಿ ಮನುಕುಲದ ಏಳಿಗೆಗೆ ಮಾರ್ಗದರ್ಶಿಗಳಾಗಿದ್ದವು ಎನ್ನಲಡ್ಡಿಯಿಲ್ಲ.

ಸಾಯಿ ಬಾಬಾ ಬದುಕಿದ್ದು ಮುಸ್ಲೀಮರ ಸಾಮಾನ್ಯ ಮಸೀದಿಯಲ್ಲಿ, ಆದರೆ ಅದೇ ಮಸೀದಿಗೆ 'ದ್ವಾರಕಾಮಾಯಿ' ಎಂಬ ಹಿಂದೂ ಹೆಸರು ನಾಮಕರಣ ಮಾಡಿ ಹಿಂದೂ ಮುಸ್ಲೀಮರ ಸಾಮರಸ್ಯದ ಜೀವನಕ್ಕೆ ನಾಂದಿ ಹಾಡಲು ಪ್ರಯತ್ನಿಸಿದ್ದರು. ಇವಿಷ್ಟೇ ಅಲ್ಲದೆ ದಿನ ನಿತ್ಯದ ಜೀವನದಲ್ಲೂ ಬಾಬಾ ಅನೇಕ ಹಿಂದೂ ಆಚರಣೆಗಳನ್ನು ಮತ್ತು ಮುಸ್ಲೀಂ ಆಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರುತ್ತಿದ್ದರು. ಬಾಬಾರವರ ಒಂದು ಸುಪ್ರಸಿದ್ಧ ಉಕ್ತಿ "ಸಬ ಕಾ ಮಾಲಿಕ್ ಏಕ"(ಸರ್ವರ ಮಾಲೀಕನು ಒಬ್ಬನೇ). ಇದು ಹಿಂದೂ, ಇಸ್ಲಾಂ ಹಾಗು ಸೂಫಿ ತತ್ವಗಳನ್ನು ಒಳಗೊಂಡಿದೆ. ಅವರು ಸದಾ ಕಾಲ ಭಕ್ತರಿಗೆ ಕೊಡುತ್ತಿದ್ದ ಅಭಯ ವಾಕ್ಯಗಳೆಂದರೆ "ನನ್ನನ್ನು ನಂಬಿ, ನಿಮ್ಮ ಪ್ರಾರ್ಥನೆಗಳಿಗೆ ನನ್ನಲ್ಲಿ ಉತ್ತರಗಳಿವೆ" ಹಾಗು "ಅಲ್ಲಾ ಮಾಲಿಕ್ "(ದೇವರೇ ಮಾಲೀಕ).

ಹಿನ್ನೆಲೆ[ಬದಲಾಯಿಸಿ]

ಸಾಯಿಬಾಬಾ ರವರ ನಿಜವಾದ ಹೆಸರಿನ ಹಾಗು ಜನ್ಮ ಸ್ಥಳದ ಬಗ್ಗೆ ಯಾವುದೇ ಯಾವುದೇ ಸ್ಪಷ್ಟ ಉಲ್ಲೇಖಗಳಿಲ್ಲ. ಇದರ ಬಗ್ಗೆ ಬಾಬಾರವರನ್ನೇ ಕೇಳಿದಾಗ ಯಾವುದೇ ಸೂಕ್ತವಾದ ಸ್ಪಂದನೆ ಸಿಕ್ಕಿಲ್ಲವೆಂದೆ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಸಾಯಿಬಾಬಾರು ಶಿರಡಿ ಗೆ ಆಗಮಿಸಿದಾಗ ಅವರಿಗೆ ಯಾವ ಹೆಸರಿತ್ತು ಎಂಬ ಬಗ್ಗೆ ಇತಿಹಾಸದಲ್ಲಿ ಸ್ಪಷ್ಟ ಉಲ್ಲೇಖವಿಲ್ಲ. ಆದರೆ ಸ್ಥಳೀಯ ಖಂಡೋಬ ದೇವಳದ ಆಗಮಿಕರು ಅವರನ್ನು ಕಂಡು 'ಯಾ ಸಾಯಿ'(ಸಾಯಿ ಸುಸ್ವಾಗತ) ಎಂದು ಉದ್ಘರಿಸಿದರಂತೆ. ಅಂದಿನಿಂದ ಅವರ ಹೆಸರು ಸಾಯಿ ಬಾಬಾ ಎಂದೇ ಪ್ರಸಿದ್ಧಿಯಾಗಿದೆ. 'ಸಾಯಿ' ಎನ್ನುವ ಪದವು ಪೆರ್ಶಿಯಾ ಭಾಷೆಯಲ್ಲಿ ಸೂಫಿ ಸಂತರು ಗಳಿಗೆ ಕೊಡುತ್ತಿದ್ದ ಒಂದು ಬಿರುದಾಗಿತ್ತುಹಾಗು ಅದು 'ಬಡ ವ್ಯಕ್ತಿ ' ಎಂಬ ಅರ್ಥ ಹೊಂದಿತ್ತು. ಹಾಗು ಬಂಜಾರ ಭಾಷೆಯಲ್ಲಿ ಸಾಯಿ ಎಂದರೆ 'ಒಳ್ಳೆಯ' ಎಂಬ ಅರ್ಥವಿದೆ. ಬಾಬಾ ಎಂದರೆ ಭಾರತೀಯ ಭಾಷೆಯಲ್ಲಿ ತಂದೆಯ ತಂದೆ ಸ್ಥಾನ ಅಥವಾ ಹಿರೀಕರು ಎಂಬರ್ಥವಿದೆ. ಹೀಗಾಗಿ ಸಾಯಿ ಬಾಬಾ ಎಂದರೆ 'ಒಳ್ಳೆಯ ಗುರು' 'ಪವಿತ್ರ ಗುರು' 'ಸಂತ ಪಿತಾಮಹ' ಎಂಬಂತಹ ಅರ್ಥಗಳು ಬರುತ್ತವೆ.

ಆರಂಭದ ದಿನಗಳು[ಬದಲಾಯಿಸಿ]

"ಸಾಯಿ ಸಚ್ಚರಿತ್ರೆ" ಗ್ರಂಥದಲ್ಲಿ ದಾಖಲಾಗಿರುವ ಪ್ರಕಾರ ಸಾಯಿ ಬಾಬಾ ತಮ್ಮ 16ನೆ ವಯಸ್ಸಿನಲ್ಲಿ ಶಿರಡಿ ಪ್ರವೇಶ ಮಾಡಿದರು. ಶಿರಡಿ ಗ್ರಾಮವು ಈಗಿನ ಮಹಾರಾಷ್ಟ್ರ ರಾಜ್ಯದ ಅಹಮದ್ ನಗರ ಜಿಲ್ಲೆಯಲ್ಲಿದೆ. ಸಾಯಿಬಾಬ ಒಂದು ಬೇವಿನ ಮರದ ಕೆಳಗೆ ಧ್ಯಾನಸ್ಥ ಭಂಗಿಯಲ್ಲಿ ಶಿರಡಿಯ ನಿವಾಸಿಗಳ ಕಣ್ಣಿಗೆ ಬಿದ್ದರು.

ಶಿರಡಿಗೆ ಪುನರಾಗಮನ[ಬದಲಾಯಿಸಿ]

ಭೋದನೆಗಳು ಮತ್ತು ಆಚರಣೆಗಳು[ಬದಲಾಯಿಸಿ]

ಆರಾಧನೆಗಳು ಮತ್ತು ಭಕ್ತರು[ಬದಲಾಯಿಸಿ]

ಪವಾಡಗಳು[ಬದಲಾಯಿಸಿ]

ಇತಿಹಾಸ ಮೂಲಗಳು[ಬದಲಾಯಿಸಿ]