ಶಿವಗಂಗೆ ಬೆಟ್ಟ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಶಿವಗಂಗೆ ಬೆಟ್ಟವು ಬೆಂಗಳೂರು ಜಿಲ್ಲೆಯಲ್ಲಿ ಬರುತ್ತದೆ. ಇದು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಡಾಬಸ್ ಪೇಟೆ ಇಂದ ಸುಮಾರು ೬ ಕಿ.ಮೀ ದೂರದಲ್ಲಿದೆ. ಬೆಟ್ಟದ ಮೇಲೆ ಗಂಗಾಧರೇಶ್ವರ ದೇವಾಲಯವಿದೆ. ಬೆಟ್ಟದ ಪ್ರಾರಂಭದಲ್ಲಿ ಶಿವನ ದೇವಾಲಯವಿದೆ. ಇಲ್ಲಿ ಶಿವ ಲಿಂಗದ ಮೇಲೆ ತುಪ್ಪವನ್ನು ಹಾಕಿದರೆ ಬೆಣ್ಣೆಯಾಗಿ ಪರಿವರ್ತನೆ ಆಗುತ್ತದೆ ಎಂದು ಪ್ರತೀತಿ. ಹಾಗೆಯೆ ಇಲ್ಲಿ ಒಂದು ಸಣ್ಣ ಸುರಂಗವಿದೆ. ಈ ಸುರಂಗದಲ್ಲಿ ಮುಂದುವರೆದರೆ ಶ್ರೀರಂಗಪಟ್ಟಣ ತಲುಪಬಹುದು ಎಂಬ ನಂಬಿಕೆ. ಬೆಟ್ಟದಲ್ಲಿ ಸ್ವಲ್ಪ ಮೇಲೆ ಏರಿದರೆ ಒಳಕಲ್ಲು ತೀರ್ಥ ಎನ್ನುವ ಮತ್ತೊಂದು ಸ್ಥಳವಿದೆ. ಇಲ್ಲಿರುವ ಒಳಕಲ್ಲಿನಲ್ಲಿ ವರ್ಷದ ೩೬೫ ದಿನಗಳೂ ನೀರು ದೊರೆಯುತ್ತದೆ. ಹಾಗೆ ಕಡಿದಾದ ಬೆಟ್ಟವನ್ನು ಏರುತ್ತಾ ಹೋದರೆ ಒಂದು ಎತ್ತರವಾದ ಬಂಡೆಯ ಮೇಲೆ ನಂದಿ ವಿಗ್ರಹವಿದೆ. ಇದನ್ನು ಪ್ರದಕ್ಷಿಣೆ ಹಾಕುವುದೆ ಒಂದು ಸಾಹಸದ ಕೆಲಸ. ಕಾಲು ಇಡಲು ಕೂಡ ಜಾಗ ಚಿಕ್ಕದು ಹಾಗು ಮತ್ತೊಂದು ಕಡೆ ಆಳವಾದ ಪ್ರಪಾತ. ನಂತರ ಮುಂದುವರೆದರೆ ಬೆಟ್ಟದ ಮೇಲೆ ಗಂಗಾಧರೇಶ್ವರ ದೇವಾಲಯ ನೋಡಬಹುದು. ಇಲ್ಲಿರುವ ಮತ್ತೊಂದು ಆಕರ್ಷಣೆ ಎಂದರೆ ಬೆಟ್ಟದ ತುದಿಯಲ್ಲಿ ಕಟ್ಟಿರುವ ಬೆಳ್ಳೀ ಗಂಟೆಗಳು. ಈ ಗಂಟೆಗಳನ್ನು ಕಟ್ಟಿದವರು ಎಂಟೆದೆಯ ಭಂಟರೇ ಇರಬೇಕು. ಇಲ್ಲಿ ನೋಡಬೇಕಾದ ಮತ್ತೊಂದು ಜಾಗ ನಾತ್ಯ ರಾಣಿ ಶಾಂತಲೆಯು ಕೆಳಗೆ ಬಿದ್ದ ಜಾಗ.