ಶ್ರೀಪಾದರಾಜರು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಶ್ರೀಪಾದರಾಜರು (೧೩೮೯ - ೧೪೮೭) ಹರಿದಾಸ ಪಂಥದ ಪ್ರಮುಖರಲ್ಲೊಬ್ಬರು ಹಾಗು ದ್ವೈತ ತತ್ವಶಾಸ್ತ್ರದ ಪ್ರತಿಪಾದಕರು.

[ಬದಲಾಯಿಸಿ] ಜೀವನ

ಶ್ರೀಪಾದರಾಜರ ಜನ್ಮ ಸ್ಥಳ ಚನ್ನಪಟ್ಟಣ ತಾಲೂಕಿನಲ್ಲಿ ಅಬ್ಬೂರು. ಮೂಲ ಹೆಸರು ಲಕ್ಷ್ಮೀನಾರಾಯಣ. ತಂದೆಯ ಹೆಸರು ಶೇಷಗಿರಿಯಪ್ಪ. ತಾಯಿ ಗಿರಿಯಮ್ಮ.

ಇವರು ಧ್ರುವರಾಜರ ಅವತಾರವಂತೆ ಮಾಧ್ವರ ವಿಶ್ವಾಸ. ಇವರ ಪ್ರಮುಖ ಶಿಷ್ಯರಾದ ವ್ಯಾಸತೀರ್ಥರು ಪ್ರಖ್ಯಾತ ಹರಿದಾರಸರಾದ ಪುರಂದರದಾಸರ ಮತ್ತು ಕನಕದಾಸರ ಗುರುಗಳು.

ರಂಗವಿಠಲ ಎಂಬ ಅಂಕಿತದಲ್ಲಿ ಅನೇಕ ದೇವರನಾಮಗಳನ್ನು ರಚಿಸಿದ್ದಾರೆ. ಇವರ ಜನಪ್ರಿಯವಾಗಿರುವ ದೇವರನಾಮಗಳು:

  • ಕಂಗಳಿದ್ಯಾತಕೋ ಕಾವೇರಿ ರಂಗನ ನೋಡದ
  • ಭೂಷಣಕೆ ಭೂಷಣ
  • ಇಟ್ಟಾಂಗೆ ಇರುವೆನೋ ಹರಿಯೇ ನನ್ನ ದೊರೆಯೇ

ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಶ್ರೀಪಾದರಾಜರ ಬೃಂದಾವನವಿದೆ.

[ಬದಲಾಯಿಸಿ] ಶ್ರೀಪಾದರಾಜರ ಹಾಡುಗಳು

ಮಹಿಮೆ ಸಾಲದೆ ಇಷ್ಱೆ ಮಹಿಮೆ ಸಾಲದೆ ||ಪ||

ಅಹಿ‌ಶಯನನ ಒಲುಮೆಯಿಂದ ಮಹಿಳೊಮ್ಮೆ ಶ್ರೀಪಾದರಾಯರ ||ಅ.ಪ||

ಮುತ್ತಿನ ಕವಚ ಮೇಲ ತುರಾಯಿ ರತ್ನ ಕೆತ್ತಿದ ಕರ್ಣ ಕುಂಡಲ
ಕಸ್ತೂರಿ ತಿಲಕ ಶ್ರೀಗಂಧ ಲೇಪನ ವಿಸ್ತಾರದಿಂದ ಮೇರದು ಬರಲು ||೧||

ಹರಿಗೆ ಸಮರ್ಪಿಸಿದ ನಾನಾ ಪರಿಯ ಶಾಖಂಗಳನ್ನ ಭುಂಜಿಸಿ
ನರರು ನಗಲು ಶ್ರೀ ಕೃಷ್ಣನ ಪರಮದಿಂದ ಹುಸಿಯಮಾಡಿದ ||೨||

ವಿಪ್ರಗೆ ಬ್ರಹ್ಮತ್ಯೆ ದೋಷ ಬರಲು ಕ್ಷಿಪ್ತ ಶಂಖೊದಕದಿ ಕಳೆದು
ಅಪ್ರ ಬುದ್ಧರು ದೊಷಿಸೆ ಗೇರೆಣ್ಣೆ ಕಪ್ಪು ಹಸನ ಶುಭ್ರ ಮಾಡಿದ ||೩||

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು
ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು