ಶ್ರೀರಂಗಪಟ್ಟಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಶ್ರೀರಂಗಪಟ್ಟಣ
ಶ್ರೀರಂಗಪಟ್ಟಣ ನಗರದ ಪಕ್ಷಿನೋಟ
ಶ್ರೀ ರಂಗನಾಥ ಸ್ವಾಮಿ ದೇವಾಲಯ
India-locator-map-blank.svg
Red pog.svg
ಶ್ರೀರಂಗಪಟ್ಟಣ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಮಂಡ್ಯ
ನಿರ್ದೇಶಾಂಕಗಳು 12.414° N 76.704° E
ವಿಸ್ತಾರ 13 km²
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ

 - 1,803.69/ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 571 438
 - ++08236
 - KA-11

ಶ್ರೀರಂಗಪಟ್ಟಣ, ಕರ್ನಾಟಕದ ಮಂಡ್ಯ ಜಿಲ್ಲೆಯ ಒಂದು ಪ್ರಮುಖ ಐತಿಹಾಸಿಕ, ಸಾಂಸ್ಕೃತಿಕ ಹಾಗು ಧಾರ್ಮಿಕ ಮಹತ್ವ ಹೊಂದಿರುವ ಪಟ್ಟಣವಾಗಿದೆ.

ಪರಿವಿಡಿ

[ಬದಲಾಯಿಸಿ] ಸ್ಥಳ

ಮೈಸೂರು ನಗರದಿಂದ ೧೩ ಕಿ.ಮೀ. ದೂರದಲ್ಲಿರುವ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆಯ ಗಡಿಯಲ್ಲಿದೆ. ಪಟ್ಟಣವು ಸುತ್ತಲೂ ಕಾವೇರಿ ನದಿಯಿಂದ ಆವೃತವಾಗಿದೆ. ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಯು ಪೂರ್ವವಾಹಿನಿ ಹಾಗು ಪಶ್ಚಿಮವಾಹಿನಿಗಳಾಗಿ ಕವಲೊಡೆದು ಹರಿಯುತ್ತದೆ. ಇದರಿಂದಾಗಿ ಶ್ರೀರಂಗಪಟ್ಟನವು ಒಂದು ದ್ವೀಪದಂದಿತೆ.

[ಬದಲಾಯಿಸಿ] ಧಾರ್ಮಿಕ ಮಹತ್ವ

ಶ್ರೀರಂಗನಾಥ ಸ್ವಾಮಿ ದೇವಾಲಯವು ಪಟ್ಟಣದ ಪ್ರಮುಖ ಆಕರ್ಷಣೆಗಳಲ್ಲಿ ಒಂದು. ಈ ದೇವಾಲಯವು ಗಂಗ ಅರಸರು ಕಾಲದ್ದೆಂದು ಪ್ರತೀತಿಯಿದೆ. ಇದನ್ನು ೧೨ ನೇ ಶತಮಾನದಲ್ಲಿ ಜೀರ್ಣೋದ್ಧಾರ ಮಾಡಲಾಯಿತು.

ಕಾವೇರಿ ನದಿ ಕವಲೊಡೆಯುವ ಸ್ಥಳಗಳಲ್ಲೆಲ್ಲ ಶ್ರೀರಂಗನಾಥ ಸ್ವಾಮಿಯ ದೇವಾಲಯಗಳಿರುವುದು ಒಂದು ವಿಶೇಷ. ಇವುಗಳೆಂದರೆ:

ಪಶ್ಚಿಮ ವಾಹಿನಿಯು ಹಿಂದುಗಳಿಗೆ ಅಂತಿಮ ಕರ್ಮಗಳನ್ನು ಮಾಡಲು ಒಂದು ಪುಣ್ಯ ಕ್ಷೇತ್ರ. ಇಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಮೃತರ ಅಸ್ಥಿಗಳನ್ನು ವಿಸರ್ಜಿಸಿದರೆ ಮೋಕ್ಷ ಲಭಿಸುವುದೆಂದು ನಂಬಿಕೆಯಿದೆ.

[ಬದಲಾಯಿಸಿ] ಐತಿಹಾಸಿಕ ಮಹತ್ವ

ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಶ್ರೀರಂಗಪಟ್ಟಣ ಐತಿಹಾಸಿಕ ಮಹತ್ವವುಳ್ಳ ಊರಾಗಿದೆ. ಟಿಪ್ಪು ಸುಲ್ತಾನ ಹಾಗು ಹೈದರಾಲಿ ಯವರ ಕಾಲದಲ್ಲಿ ಶ್ರೀರಂಗಪಟ್ಟಣ ಮೈಸೂರು ಸಾಮ್ರಾಜ್ಯದ ರಾಜಧಾನಿಯಾಗಿತ್ತು.

[ಬದಲಾಯಿಸಿ] ಶ್ರೀರಂಗಪಟ್ಟಣದಲ್ಲಿ ನೋಡುವ ಸ್ಥಳಗಳು

[ಬದಲಾಯಿಸಿ] ಚಿತ್ರಶಾಲೆ

[ಬದಲಾಯಿಸಿ] ಉಲ್ಲೇಖನಗಳು

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು