ಸಂಗೊಳ್ಳಿ ರಾಯಣ್ಣ
ಸಂಗೊಳ್ಳಿ ರಾಯಣ್ಣ - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿರುವ ಗಣೇಶವಾಡಿ ಗ್ರಾಮವು ಸಂಗೊಳ್ಳಿ ರಾಯಣ್ಣನ ತಾಯಿ ಕೆಂಚವ್ವನ ತವರುಮನೆ. ಅಲ್ಲಿಯೆ ಸಂಗೊಳ್ಳಿ ರಾಯಣ್ಣನು ಜನಿಸಿದನು.
ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು. ಬ್ರಿಟಿಷರು ಚನ್ನಮ್ಮನನ್ನು ಬೈಲಹೊಂಗಲದಲ್ಲಿ ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದರು. ಗಲ್ಲಿಗೇರಿಸಿದ ದಿನಾಂಕ ಜನವರಿ ೨೬.
ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ ಆಗಸ್ಟ್ ೧೫, ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ ಜನವರಿ ೨೬, ಭಾರತವು ಗಣರಾಜ್ಯವೆಂದು ಘೋಷಿಸಿದ ದಿನಾಂಕವಾಗಿದೆ.
ಸಂಗೊಳ್ಳಿರಾಯಣ್ಣ ಕುರುಬ
[ಬದಲಾಯಿಸಿ] ಕೊನೆಯ ಉಕ್ತಿ
ಇವರು ಹುಟ್ಟಿದ್ದು ಆಗಸ್ಟ್ ೧೫ ೧೭೯೮ ನಲ್ಲಿ (ಮುಂದೆ ಭಾರತ ಸ್ವಾತಂತ್ರ ಪಡೆಯುವ ದಿನ ). ಇವರನ್ನು ಗಲ್ಲಿಗೇರಿಸಿದ ದಿನ ೨೬ನೇ ಜನ್ವರೀ ೧೮೩೧(ಭಾರತದ ಗಣರಾಜ್ಯೋತ್ಸವ ದಿನ). ಸಂಗೊಳ್ಳಿ ರಾಯಣ್ಣನು ಗಲ್ಲಿಗೇರುವ ಮುನ್ನ ಹೇಳಿದ ಕೊನೆಯ ಮಾತು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ.
“ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ ಜನ್ಮ ತಾಳಿ, ಈ ಪುಣ್ಯ ಭೂಮಿಯಿಂದ ಬ್ರಿಟಿಷರ ವಿರುದ್ಧ ಹೋರಾಟವನ್ನು ಮುಂದುವರಿಸುವುದು”[೧].
ಸಂಗೊಳ್ಳಿ ರಾಯಣ್ಣ ಇತಿಹಾಸ ಕ್ರಾಂತಿಕಾರಿ ಸಂಗೊಳಿರಾಯಣ ಎಂದು ಖ್ಯಾತಿ ಹೊಂದಿದ ಇವನು ಬ್ರೀಟಿಷರ ವಿರುದ್ದ ಹೊರಾಡಿದವ