ಸದಸ್ಯರ ಚರ್ಚೆಪುಟ:Thirumala.k

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕವಿ ಮತ್ತು ಸಾಹಿತಿ

ಮೊಗೇರಿ ಗೋಪಾಲಕೃಷ್ಣ ಅಡಿಗರು ಕನ್ನಡದ ಸಾರ್ವಜನಿಕ ಸಾರ್ವಜನಿಕ ಶ್ರೇಷ್ಠ ಕವಿಗಳಲ್ಲೊಬ್ಬರು. ಕನ್ನಡದ ಕಾವ್ಯ ಕ್ಷೇತ್ರದಲ್ಲಿ ನವ್ಯತೆ ಎಂಬ ಹೊಸ ಸಂಪ್ರದಾಯವನ್ನು ಬೆಳೆಸಿ, ಅದನ್ನು ಪರಾಕಾಷ್ಠೆಗೊಯ್ದು ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡಲು ಕಾರಣರಾದ ಯುಗ ಪ್ರವರ್ತಕ ಕವಿ. ಕಾವ್ಯದಲ್ಲಿ ಅವರು ಮಾಡಿದ ಕ್ರಾಂತಿಕಾರಿ ಪರಿವರ್ತನೆ ಕಥೆ, ಕಾದಂಬರಿ, ನಾಟಕ, ವಿಮರ್ಶೆ ಮುಂತಾದ ಇತರ ಸಾಹಿತ್ಯ ಪ್ರಕಾರಗಳ ಮೇಲೂ ಪ್ರಭಾವ ಬೀರಿ ಸಮಗ್ರ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡಿತು. ಅಡಿಗರು ಕನ್ನಡ ವಿಮರ್ಶೆಯಲ್ಲೂ ಪ್ರಬುದ್ಧತೆಯನ್ನು ತಂದರು. `ಸಾಕ್ಷಿ' ಎಂಬ ಉನ್ನತಮಟ್ಟದ ಸಾಹಿತ್ಯಪತ್ರಿಕೆಯನ್ನು ಸುಮಾರು ಇಪ್ಪತ್ತು ವರ್ಷ ಕಾಲ ನಡೆಸಿ, ಹೊಸ ಸಂವೇದನೆಯನ್ನು ಹೊಸ ಲೇಖಕರನ್ನು ಪ್ರೋತ್ಸಾಹಿಸಿದರು. ತಮ್ಮ ಕಾವ್ಯ, ಗದ್ಯ, ವೈಚಾರಿಕತೆ, ವ್ಯಕ್ತಿತ್ವ, ಪ್ರಭಾವ, ಮಾರ್ಗದರ್ಶನಗಳ ಮೂಲಕ ಅಡಿಗರು ಮಾಡಿದ ಸಾರಸ್ವತ ಸಾಡನೆ ಅನನ್ಯವಾದುದು. ಹುಟ್ಟು,ಎಳೆ ಹರೆಯ

ಯಕ್ಷಗಾನದ ಪ್ರಭಾವ

ಅಡಿಗರ ಮನೆಯಲ್ಲಿ ಸಾಹಿತ್ಯಕ್ಕೆ ಪ್ರೇರಕವಾದ ವಾತಾವರಣ ಇತ್ತು. ಅಡಿಗರ ತಂದೆ, ಅಜ್ಜ, ಅಜ್ಜಿ, ಸೋದರತ್ತೆಯರು, ಚಿಕ್ಕಪ್ಪ-ಎಲ್ಲರಿಗೂ ಪದ್ಯ ರಚನೆ ಮಾಡುವ ಅಭ್ಯಾಸವಿತ್ತು. ತಂದೆ ರಾಮಪ್ಪ ಅಡಿಗರು ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿ ಗೀತೆಗಳನ್ನೂ ರಚಿಸುತ್ತಿದ್ದರು. ಯಕ್ಶಗಾನದ ತಾಳಮದ್ದಲೆಗಳಲ್ಲಿ ಅರ್ಥ ಹೇಳುತ್ತಿದ್ದರು. ಸೋದರತ್ತೆ ಪ್ರತಿ ರಾತ್ರಿಯೂ ಗದುಗು ಭಾರತ, ಜೈಮಿನಿ ಭಾರತಗಳನ್ನು ರಾಗವಾಗಿ ಹಾಡುತ್ತಿದ್ದರು. ಇವರಲ್ಲೊಬ್ಬರಾದ ಮೂಕಾಂಬು(ಮೂಕಜ್ಜಿ) ಎಂಬವರು ಸ್ವತಃ ಪದ್ಯಗಳನ್ನು ರಚಿಸುತ್ತಿದ್ದರು. ಅಜ್ಜಿಯ ತಮ್ಮ ಬವಳಾಡಿ ಹಿರಿಯಣ್ಣ ಹೆಬ್ಬಾರ ಎಂಬವರು ಹೆಸರಾಂತ ಯಕ್ಷಗ್ನ ಅರ್ಥಧಾರಿಯಾಗಿದ್ದರು. ಇವರ ವಂಶಜರಾದ ಪ್ರೊ. ಬಿ. ಎಚ್. ಶ್ರೀಧರ್ ಅವರು ಮುಂದೆ ಕನ್ನಡದಲ್ಲಿ ಓರ್ವ ಗಣ್ಯ ಕವಿಯಾಗಿ ಪ್ರಸಿದ್ಧರಾದರು. ಕರಾವಳಿಯ ಮಹಾನ್ ಕಲೆ ಯಕ್ಷಗಾನವೇ ಅಡಿಗರ ಮೇಲೆ ಗಾಢ ಪ್ರಭಾವ ಬೀರಿತ್ತು. ಅವರ ಪ್ರಸಿದ್ಧ ಕವನ`ಗೊಂದಲಒಉರ'ದಲ್ಲಿ ಗೊಂದಲಾಸುರನ ಪ್ರವೇಶದ ಸಂದರ್ಭ - ಯಕ್ಷಗಾನದಲ್ಲಿ ರಂಗಸ್ಥಳ ಪ್ರವೇಶ ಮಾಡುವ ರಾಕ್ಷಸನ ಪ್ರವೇಶ ಶೈಲಿಯಲ್ಲಿದೆ. `ಅಜ್ನಾತ ವೇಷ' ಎಂಬ ಕವನದಲ್ಲಿ ವೇಷಭೂಷಣಗಳ ಪೆಟ್ಟಿಗೆಯನ್ನು ಹೊರುವ ಬಡ ಕೂಲಿಗಳ ಪ್ರತಿಮೆಯನ್ನು ಪ್ರಜಾಸತ್ತೆಯಲ್ಲಿ ಪುಢಾರಿಗಳ ಚಾಕರಿ ಮಾಡುವ ಜನಸಾಮಾನ್ಯರ ಪ್ರತೀಕವಾಗಿ ಬಳಸಿದ್ದಾರೆ. ಇಂತಹ ಅನೇಕ ಉದಾಹರಣೆಗಳನ್ನು ಕೊಡಬಹುದು ಶಿಕ್ಷಣ

ಸಮೀಪದ ಬಿಜೂರು, ಬೈಂದೂರುಗಳಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ ಅಡಿಗರು ಕುಂದಾಪುರದ ಹೈಸ್ಕೂಲಿನಲ್ಲಿ ಶಿಕ್ಷಣ ಮುಗಿಸಿದರು. ಹದಿಮೂರರ ಹರೆಯದಲ್ಲೇ ಪದ್ಯ ಬರೆಯಲಾರಂಭಿಸಿದ ಅವರಿಗೆ ಕುಂದಾಪುರದ ವಾತಾವರಣ ಇನ್ನಷ್ಟು ಬರೆಯಲು ಪ್ರೇರಣೆ ನೀಡಿತು.ಮೊದಲೇ ಇದ್ದ ಓದುವ ಹುಚ್ಚು ಇನ್ನಷ್ಟು ಬಲವಾಯಿತು. ಆ ಸಂದರ್ಬದಲ್ಲಿ ಶಿವರಾಮ ಕಾರಂತರ ಅಣ್ಣ ಕೋ ಲ ಕಾಆರಂತರು ಅಡಿಗರಿಗೆ ಒಳ್ಳೆಯ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸುತ್ತಿದ್ದರು. ಅದು ಇಡೀ ದೇಶವೇ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟ, ಪರಾಕಾಷ್ಠೆಯನ್ನು ಸಮೀಪಿಸುತ್ತಿದ್ದ ಕಾಲ. ಅಡಿಗರೂ ಹುಮ್ಮಸ್ಸಿನಿಂದ ಹೋರಾಟದಲ್ಲಿ ಭಾಗಿಯಾದರು. ಹೆಂಡದಂಗಡಿಯ ಮುಂದೆ `ಪಿಕೆಟಿಂಗ್' ಮಾಡಿದರು. ದೇಶ ಭಕ್ತಿಯ ಉತ್ಸಾಹ, ಉದ್ರೇಕಗಳು ಅವರ ಕಾವ್ಯ ರಚನೆಗೆ ಪೂರಕವಾದವು. ಅವರ ಕೆಲವು ಕವನಗಳು ಬೆಂಗಳೂರಿನ `ಸುಬೋಧ', ಮಂಗಳೂರಿನ `ಬಡವರ ಬಂಧು', ಮುಂತಾದ ಪತ್ರಿಕೆಗಳಲ್ಲಿ ಪ್ರಕಟವಾದವು. ಎಸ್. ಎಸ್. ಎಲ್. ಸಿ ಮುಗಿದ ನಂತರ ಅಡಿಗರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಇಂಟರ್ಮೀಡಿಯಟ್ತರಗತಿಗೆ ಸೇರಿಕೊಂಡರು. ಅಲ್ಲಿ ಕಳೆದ ಐದಾರು ವರ್ಷ ಅವರ ಬದುಕಿನ ಒಂದು ಮಹತ್ವದ ಅವಧಿಯಾಗಿತ್ತು. ಈ ಅವಧಯಲ್ಲಿ ಅವರಿಗೆ ಬಿ. ಎಚ್. ಶ್ರೀಧರ್, ಹೆಚ್ ವೈ. ಶಾರದಾಪ್ರಸಾದ್, ಚದುರಂಗ, ಟಿ. ಎಸ್.ಸಂಜೀವ ರಾವ್. ಎಂ. ಶಂಕರ್, ಕೆ. ನರಸಿಂಹಮೂರ್ತಿ ಮುಂತಾದವರ ಒಡನಾಟ, ಸ್ನೇಹ ಅವರಿಗೆ ಲಭ್ಯವಾಯಿತು. `ಭಾವತರಂಗ' ಸಂಕಲನದ ಹೆಚ್ಚಿನ ಕವನಗಳು ಈ ಅವಧಿಯಲ್ಲಿ ರಚಿತವಾದವು. ಅವುಗಳಲ್ಲೊಂದಾದ`ಒಳತೋಟಿ' ಎಂಬ ಕವನ ಬಿ. ಎಂ. ಶ್ರೀ ರಜತ ಮಹೋತ್ಸವದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನದ ಸುವರ್ಣ ಪದಕವನ್ನು ಪಡೆಯಿತು. ಉದ್ಯೋಗ ಪರ್ವ ಬಿ.ಏ ಆನರ್ಸ್ ಮುಗಿಸಿದ ಬಳಿಕ ಅಡಿಗರು ತುಮುಕೂರು, ಬೆಂಗಳೂರು, ದಾವಣಗೆರೆ, ಚಿತ್ರದುರ್ಗ ಮುಂತಾದ ಊರುಗಳಲ್ಲಿ ಅಧ್ಯಾಪಕರಾಗಿ ದುಡಿದರು. ಸ್ವಲ್ಪ ಕಾಲ ಅಠಾರಾ ಕಚೇರಿಯಲ್ಲಿಯೂ ಗುಮಾಸ್ತರಾಗಿ ದುಡಿದರು. ಅನಂತರ ಶಾರದಾ ವಿಲಾಸ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾದರು. (೧೯೪೮-೫೨) ಬಳಿಕ ಎರಡು ವರ್ಷ ಕುಮಟಾದ ಕೆನರಾ ಕಾಲೇಜಿನಲ್ಲೂ, ಅನಂತರ ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿಯೂ, ಇಂಗ್ಲಿಷ್ ಉಪನ್ಯಾಸಕರಾಗಿ (೧೯೫೪-೫೨) ಹತ್ತು ವರ್ಷ ದುಡಿದರು.೧೯೬೪ರಿಂದ ೬೮ರವರೆಗೆ ಸಾಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನ ಪ್ರಿನ್ಸಿಪಾಲರಾಗಿ, ಆಹೊಸ ಕಾಲೇಜನ್ನು ಕಟ್ಟಿದರು. ೧೯೬೮ರಲ್ಲಿ ಆ ಹುದ್ದೆಯನ್ನು ತ್ಯಜಿಸಿ, ಉಡುಪಿಯ ಪೂರ್ಣಪ್ರಜ್ನ ಕಾಲೇಜಿನ ಪ್ರಿನ್ಸಿಪಾಲರಾದರು. ೧೯೭೧ರಲ್ಲಿ ಅವರ ಬದುಕಿನಲ್ಲಿ ಒಂದು ಅನಿರೀಕ್ಷಿತ ತಿರುವು ಬಂತು. ಲೋಕಸಭಾ ಚುನಾವಣೆಯಲ್ಲಿ ೯ ಪಕ್ಷಗಳ ಒಕ್ಕೂಟದ ಪರವಾಗಿ ಜನಸಂಘದ ಅಭ್ಯರ್ಥಿಯಾಗಿ ಬೆಂಗಳೂರಿನಿಂದ ಸ್ಪರ್ಧಿಸಬೇಕೆಂಬ ಸ್ನೇಹಿತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದರು. ಆಗ ವಿಜೃಂಭಿಸುತ್ತಿದ್ದ `ಇಂದಿರಾ ಅಲೆ'ಯ ಅಬ್ಬರದಲ್ಲಿ ಅವರಿಗೆ ಸೋಲಾಯಿತು. ತತ್ಪರಿಣಾಮವಾಗಿ ಪೂರ್ಣಪ್ರಜ್ನ ಕಾಲೇಜಿನ ಪ್ರಿನ್ಸಿಪಾಲ್ ಹುದ್ದೆಗೆ ರಾಜಿನಾಮೆ ಕೊಡಬೇಕಾಯಿತು. ಅನಂತರ ದೆಹಲಿಯ ನ್ಯಾಶನಲ್ ಬುಕ್ ಟ್ರಸ್ಟ್ ನಲ್ಲಿ ಉಪನಿರ್ದೇಶಕರಾಗಿ ಸ್ವಲ್ಪ ಕಾಲ ದುಡಿದ ಬಳಿಕ ಶಿಮ್ಲಾದ `ಇಂಡಿಯನ್ ಇನ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡಿಸ್' ಸಂಸ್ಥೆಯಲ್ಲಿ ಮೂರು ವರ್ಷ ವಿಸಿತ್ಟಿಂಗ್ ಫೆಲೊ ಆಗಿ ಕೆಲಸ ಮಾಡಿದರು. ೧೯೭೪ರಲ್ಲಿ ರಾಜ್ಯ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಬಂತು. ೧೯೭೫ರಲ್ಲಿ ಅಡಿಗರಿಗೆ `ವರ್ಧಮಾನ'ಕವನ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಬಂತು. ೧೯೭೯ರಲ್ಲಿ ಕೇರಳದ ಪ್ರತಿಷ್ಠಿತ `ಕುಮಾರನ್ ಆಸನ್' ಪ್ರಶಸ್ತಿ ಲಭ್ಯವಾಯಿತು. ೧೯೮೦ರಲ್ಲಿ `ಸಮಗ್ರ ಕಾವ್ಯಕ್ಕೆ ಮೂಡಬಿದ್ರೆಯ `ವರ್ಧಮಾನ' ಪ್ರಶಸ್ತಿ ದೊರೆಯಿತು. ೧೯೮೨ರಲ್ಲಿ ಪ್ಯಾರಿಸ್, ಯುಗೋಸ್ಲಾವಿಯಗಳಲ್ಲಿ ನಡೆದ ವಿಶ್ವ ಕವಿ ಸಮ್ಮೇಳನದಲ್ಲಿ ಆಹ್ವಾನಿತರಾಗಿ ಭಾಗವಹಿಸಿದರು. ೧೯೮೬ರಲ್ಲಿ ಮಧ್ಯಪ್ರದೇಶ ಸರಕಾರ ಆರಂಭಿಸಿದ ಪ್ರಥಮ `ಕಬೀರ್ ಸನ್ಮಾನ್' ಅಡಿಗರಮಡಿಲಿಗೆ ಬಂತು. ೧೯೮೮ರಲ್ಲಿ ಥ್ಯಾಲಂಡಿನ ಬ್ಯಾಂಕಾಕ್ ನಗರದಲ್ಲಿ ನಡೆದ ಜಾಗತಿಕಕವಿ ಸಮ್ಮೇಳನದಲ್ಲಿ ವರ್ಲ್ಡ್ ಅಕಾಡೆಮಿ ಆಫ್ ಆರ್ಟ್ ಎಂಡ್ ಕಲ್ಚರ್' ಸಂಸ್ಥೆ ಅವರಿಗೆ ಡೊಕ್ಟರ್ ಆಫ್ ಲಿಟರೇಚರ್' ಪ್ರಶಸ್ತಿ ನೀಡಿತು. ಹೀಗೆ ಕನ್ನಡದ ಮಹತ್ವದಕವಿಯಾಗಿ ಮೂರು ದಶಕಗಳ ಕಾಲ ಬೆಳಗಿದ ಅಡಿಗರು ೧೯೯೨ ನವೆಂಬರ್ ೪ರಂದು ಅಸ್ತ್ಂಗತರಾದರು