ಸಬ್ಬಕ್ಕಿ
ವಿಕಿಪೀಡಿಯ ಇಂದ
ಸಬ್ಬಕ್ಕಿ ಮತ್ತು ಸಬ್ಬಕ್ಕಿ ತಯಾರಿಕೆಯ ಮಾಹಿತಿಗಳು ಇಂತಿವೆ.
ಸಬ್ಬಕ್ಕಿ ತಯಾರಿಸುವುದು ಮರಗೆಣಸಿನಿಂದ. ಭಾರತದಲ್ಲಿ ೯೫% ಸಬ್ಬಕ್ಕಿಯನ್ನು ತಮಿಳುನಾಡಿನಲ್ಲಿ (ಸೇಲಂನಲ್ಲಿ ಹೆಚ್ಚು) ತಯಾರಿಸಲಾಗುತ್ತದೆ.
ತಯಾರಿಕೆಯ ವಿಧಾನ [ಬದಲಾಯಿಸಿ]
- ಮೊದಲು ರಾಶಿರಾಶಿ ಗೆಣಸುಗಳನ್ನು ತೊಳೆದು ಸಿಪ್ಪೆ ಸುಲಿಯಲಾಗುತ್ತದೆ.
- ನಂತರ ಅವುಗಳನ್ನು crusherಗಳಲ್ಲಿ ಹಿಸುಕಲಾಗುತ್ತದೆ. ಈ crushing ಪ್ರಕ್ರಿಯೆಯಲ್ಲಿ ನಾರಿನ ಭಾಗವು ಬೇರೆಯಾಗುತ್ತದೆ.
- ಹಿಸುಕಿದಾಗ ಬಂದ ಹಾಲಿನಂತ ದ್ರವವನ್ನು ಟ್ಯಾಂಕ್ ಗಳಲ್ಲಿ ಶೇಖರಿಸಿ ೨-೮ ತಾಸಿನವರೆಗೆ settle ಆಗಲು ಬಿಡಲಾಗುತ್ತದೆ. Settle ಆಗಲು ಬಿಟ್ಟ ಹಾಲಿನಲ್ಲಿ ಕಲ್ಮಶಗಳು ಮೇಲೆ ತೇಲುತ್ತವೆ ಮತ್ತು ಕೆಳಗೆ ಪೇಸ್ಟಿನಂತಹ starch(ಪಿಷ್ಟ,ಹಿಟ್ಟು) ವಸ್ತುವು ಉಳಿಯುತ್ತದೆ.
- ತೇಲುವ ಕೊಳೆ ಇತ್ಯಾದಿಗಳನ್ನು ತೆಗೆದ ನಂತರ ಉಳಿದ ಪೇಸ್ಟನ್ನು ಭಾಗಶಃ ಒಣಗಿಸಿ cakes ಪಡೆಯಲಾಗುತ್ತದೆ.
- ನಂತರ ತೂತುಗಳುಳ್ಳ ಉಕ್ಕಿನ ಹಾಳೆಗಳನ್ನು ಅಥವಾ ಯಂತ್ರಗಳನ್ನು ಬಳಸಿ ಬೇಕಾದ ಗಾತ್ರದಲ್ಲಿ ಸಣ್ಣ ಸಣ್ಣ ಗುಂಡುಗಳ ಆಕಾರಕ್ಕೆ ತರಲಾಗುತ್ತದೆ.
- ಅವುಗಳನ್ನು ೧೦೦ ಡಿಗ್ರಿ ಸೆಲಿಷಿಯಸ್ ಬಿಸಿಯಲ್ಲಿ ೬-೮ ನಿಮಿಷಗಳು ಹುರಿಯಲಾಗುತ್ತದೆ (roasting).
- ಸೂರ್ಯನ ಬೆಳಕಿನಲ್ಲಿ ೮-೧೨ ಗಂಟೆಗಳ ಕಾಲ ಒಣಗಿಸಲಾಗುತ್ತದೆ.
- ಕೊನೆಯದಾಗಿ polishing ಮಾಡಿದ ಮೇಲೆ ಸಬ್ಬಕ್ಕಿ ತಯಾರಾಗುತ್ತದೆ.