ಸೂರ್ಯನಾಥ್ ಕಾಮತ್

ವಿಕಿಪೀಡಿಯ ಇಂದ
(ಸೂರ್ಯನಾಥ ಕಾಮತ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಡಾ. ಕಾಮತ್

ಡಾ. ಸೂರ್ಯನಾಥ ಕಾಮತರು ಕರ್ನಾಟಕದ ಪ್ರಮುಖ ಸಂಶೋಧಕರು ಮತ್ತು ಇತಿಹಾಸ ತಜ್ಞರು. ಕರ್ನಾಟಕದ ಇತಿಹಾಸದ ಸಂಶೋಧನೆಗೆ ಇವರ ಕೊಡುಗೆ ಅಪಾರವಾದುದು. ೧೯೩೭ರ ಏಪ್ರಿಲ್‌ ೨೬ರಂದು ದಕ್ಷಿಣ ಕನ್ನಡ ಜಿಲ್ಲೆಬೆಳ್ತಂಗಡಿಯಲ್ಲಿ ಜನಿಸಿದ ಕಾಮತ್‌, ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ.ಎ. ಪದವಿಯನ್ನು (೧೯೫೯) ಪಡೆದು, ಮುಂಬಯಿ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ. ಪದವಿಯನ್ನು (೧೯೬೫) ಪಡೆದುಕೊಂಡರು.

ಆರಂಭದ ದಿನಗಳಲ್ಲಿ ಮುಂಬಯಿಯ ‘ಫ್ರೀ ಪ್ರೆಸ್‌ ಜರ್ನಲ್‌’ನಲ್ಲಿ ಕೆಲಸ ಮಾಡಿ ಅನುಭವ ಗಳಿಸಿಕೊಂಡ ನಂತರ ಬೆಂಗಳೂರಿನ ಪ್ರಸಿದ್ಧ ದೈನಿಕ ‘ಪ್ರಜಾವಾಣಿ’ ಹಾಗೂ ಮಾಸಪತ್ರಿಕೆ ‘ಉತ್ಥಾನ’ಗಳಲ್ಲಿ ದುಡಿದು ಪತ್ರಿಕಾರಂಗದಲ್ಲೂ ಸೇವೆ ಸಲ್ಲಿಸಿದ್ದಾರೆ. ೧೯೬೮ರಿಂದ ೧೯೮೧ರವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದಲ್ಲಿ ಉಪನ್ಯಾಸಕರಾಗಿ ಹಾಗೂ ಪ್ರವಾಚಕರಾಗಿ ಸೇವೆ ಸಲ್ಲಿಸಿ, ನಂತರ ೧೯೯೫ರವರೆಗೆ ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ಗೆಜೆಟಿಯರ್‍ನ ಮುಖ್ಯ ಸಂಪಾದಕರಾಗಿ ಸೇವೆ ಸಲ್ಲಿಸಿ ಈಗ ಶಾಂತ ಆದರೆ ಬಿಡುವಿಲ್ಲದ ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರಿನಲ್ಲಿರುವ ಮಿಥಿಕ್ ಸೊಸೈಟಿಇತಿಹಾಸ ದರ್ಶನ ನಿಯತಕಾಲಿಕೆಯ ಸಂಪಾದಕರಾಗಿದ್ದಾರೆ. ‍

ಕೃತಿಗಳು:

  • ಕರ್ನಾಟಕದ ಸಂಕ್ಷಿಪ್ತ ಇತಿಹಾಸ
  • ಜಾನ್ ಫ್ಲೀಟ್
  • ಸ್ವಾತಂತ್ರ್ಯ ಸಂಗ್ರಾಮದ ಸ್ಮೃತಿಗಳು

ಇವರ “ಕರ್ನಾಟಕದ ಸಂಕ್ಷಿಪ್ತ ಇತಿಹಾಸ” ಕೃತಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಹಾಗು “ಜಾನ್ ಫ್ಲೀಟ್” ಕೃತಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನಾ ಬಹುಮಾನ ಲಭಿಸಿವೆ.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ