ವಿಷಯಕ್ಕೆ ಹೋಗು

ಸಿಯಾಮ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸಿಯಾಮ್ ಅಂದರೆ ಅರೇಬಿಕ್ ಪದ, ಇದರ ಅರ್ಥ ಉಪವಾಸ.

ರಂಜಾನ್ ಅಥವ ರಮದಾನ್ (ಅರೇಬಿಕ್‌ ಭಾಷೆಯಲ್ಲಿ: رمضان ) ಇಸ್ಲಾಮ್ ಕ್ಯಾಲೆಂಡರ್‌ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್‌ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಮದಾನ್‌ನ ಸಮಯದಲ್ಲಿ ಉಪವಾಸ ನಡೆಯುತ್ತದೆ. ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಂಜಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ. ಮಾನವಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರಾನ್ ಅವತೀರ್ಣಗೊಂಡಿತು. ಇದರ ಗೌರವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯ ಗೊಳಿಸಲಾಯಿತು. ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕಾಮಾಸಕ್ತಿಯ ಚಟುವಟಿಕೆಗಳನ್ನು ತ್ಯಜಿಸುವುದನ್ನೇ ಇಸ್ಲಾಮಿನಲ್ಲಿ ಉಪವಾಸ ಅಥವಾ ವ್ರತಾಚರಣೆ ಎನ್ನಲಾಗಿದೆ. ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ ಉದ್ದೇಶವಾಗಿದೆ.

"https://kn.wikipedia.org/w/index.php?title=ಸಿಯಾಮ್&oldid=1165934" ಇಂದ ಪಡೆಯಲ್ಪಟ್ಟಿದೆ