ಸದಸ್ಯ:Hamsini hp gowda/sandbox
ಹೊಯ್ಸಳ
ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ. ಹೊಯ್ಸಳ ಸಾಮ್ರಾಜ್ಯದ ರಾಜಧಾನಿ ದ್ವಾರಸಮುದ್ರ (ಇಂದಿನ ಹಳೇಬೀಡು), ಹಾಸನ ಜಿಲ್ಲೆಯಲ್ಲಿದೆ. ಜಾನಪದ ನಂಬಿಕೆಯಂತೆ, 'ಹೊಯ್ಸಳ' ಎಂಬ ಹೆಸರು ಈ ವಂಶದ ಸಂಸ್ಥಾಪಕ ಸಳನಿಂದ ವ್ಯುತ್ಪತ್ತಿಯಾದದ್ದು. ಚಾರಿತ್ರಿಕವಾಗಿ ಈ ಸಂಸ್ಥಾಪಕನ ಹೆಸರು ನೃಪಕಾಮ ಎಂದು ಊಹಿಸಲಾಗಿದೆ. ಹೊಯ್ಸಳ ಸಾಮ್ರಾಜ್ಯವನ್ನು ವಿಸ್ತರಿಸಿದ ಅರಸರಲ್ಲಿ ಮೊದಲಿಗ ವಿನಯಾದಿತ್ಯ (ಆಡಳಿತ: ೧೦೪೭-೧೦೯೮).
ಇತಿಹಾಸ
ದಂತಕತೆಯ ಪ್ರಕಾರ ಜೈನ ಗುರು ಸುದತ್ತಚಾರ್ಯನು ಸೊಸೆಯೂರಿನ ವಾಸಂತಿಕಾ ಮಂದಿರದಲ್ಲಿ ಹುಲಿಯು ಬರಲು, ಅದನ್ನು ಹೊಡೆಯಲು ತನ್ನ ಶಿಷ್ಯ ಸಳನಿಗೆ "ಹೊಯ್ ಸಳ" ಎಂದು ಆಜ್ನಾಪಿಸಿದನು. ಇದೆ ಹೊಯ್ಸಳ ಶಬ್ದದ ಮೂಲ ಎನ್ನುತ್ತಾರೆ. ೧೧೧೭ರ ವಿಷ್ಣುವರ್ಧನನ ಶಾಸನದಲ್ಲಿ ಈ ಕಥೆ ಮೊದಲು ಕಾಣಬರುತ್ತದೆ. ಆದರೆ ಇದರ ತಥ್ಯ ಅನುಮಾನಾಸ್ಪದವಾಗಿದ್ದು ಇನ್ನೂ ದಂತಕಥೆಯ ರೂಪದಲ್ಲಿಯೇ ಉಳಿದಿದೆ. ವಿಷ್ಣುವರ್ಧನನು ತಲಕಾಡಿನಲ್ಲಿ ಚೋಳರನ್ನು ಸೋಲಿಸಿದ ಮೇಲೆ ಬಹುಷಃ ಈ ಕಥೆ ಹುಟ್ಟಿರಬಹುದು ಅಥವಾ ಹೆಚ್ಚು ಪ್ರಚಲಿತವಾಗಿರಬಹುದು. ಹೊಯ್ಸಳರ ಲಾಂಛನವು ಸಳನು ಹುಲಿಯನ್ನು ಕೊಲ್ಲುತ್ತಿರುವ ಚಿತ್ರವಾಗಿದ್ದು, ಚೋಳರ ಲಾಂಛನವು ಹುಲಿಯಾಗಿತ್ತು ಎಂಬ ಅಂಶಗಳು ಈ ಊಹೆಗೆ ಕಾರಣ. ೧೦೭೮ ಮತ್ತು ೧೭೯೦ರ ಶಾಸನಗಳು ಹೊಯ್ಸಳರನ್ನು ಯಾದವ ವಂಶದವರು ಎಂದು ಸಂಬೋಧಿಸಿವೆ. ಆದರೆ ಹೊಯ್ಸಳರಿಗೂ ಉತ್ತರದ ಯಾದವರಿಗೂ ಸಂಬಂಧ ಕಲ್ಪಿಸುವ ಯಾವುದೇ ದಾಖಲೆಗಳಿಲ್ಲ. ಹೊಯ್ಸಳರು ಹಾಲುಮತಕ್ಕೆ(ಕುರುಬ ಗೌಡ ಸಮಾಜ) ಸೇರಿದವರು ಎಂದು ಕೆಲವರು ವಾದಿಸುತಾರೆ.