ದುರ್ಗದಹಳ್ಳಿಯ ದೇವರಾಯನ ದುರ್ಗ
ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ. |
ತುಮಕೂರಿನಿಂದ 16 ಕಿ.ಮೀ. ದೂರದಲ್ಲಿದೆ. ತುಮಕೂರಿನಿಂದ 10 ಕಿ.ಮೀ. ದಾಟಿದರೆ , ದೇವರಾಯನದುರ್ಗ ಕಾಡು ಗೋಚರಿಸುತ್ತದೆ.ಈ ಜಾಗ ಒಂದು ದಿನದ ಪ್ರವಾಸಕ್ಕೆ ಯೊಗ್ಯವಾದ ಸ್ಥಳ. ಹತ್ತಿರದಲ್ಲೆ ದುರ್ಗದಹಳ್ಳಿ ಎಂಬ ಹಳ್ಳಿಯಲ್ಲಿ 8 ನೇ ಶತಮಾನದಲ್ಲಿ ಶಂಕರಾಚಾರ್ಯರು ಕಟ್ಟಿರುವ ಸುಂದರವಾದ ದೇವಲಾಯವಿದೆ. ಹಾಗೆ ಸಮಿಪದಲ್ಲಿ "ನಾಯಕನ ಕೆರೆ" ಎಂಬ ಸುಂದರ ಮತ್ತು ಮನೊಹರವಾದ ಕೆರೆ ಇದೆ. ಇಲ್ಲಿನ ಬೆಟ್ಟದ ಮೇಲೆ ಯೋಗ ನರಸಿಂಹ ಮತ್ತು ಭೋಗ ನರಸಿಂಹ ದೇವಾಲಯಗಳಿವೆ,ಹಳೆಯ ಕೋಟೆ,ಸೂರ್ಯಾಸ್ತ ನೊಡಲು ಸುಂದರವಾದ ಜಾಗ ಕೂಡ ಇದೆ.ದೇವರಾಯನದುರ್ಗದ ಸಮೀಪವಿರುವ ನಾಮದ ಚಿಲುಮೆ ಒಂದು ಪ್ರೇಕ್ಷಣೀಯ ಸ್ಥಳವಾಗಿದೆ.ದೇವರಾಯನ ದುರ್ಗದ ಕಾಡಿನಲ್ಲಿ ಚಿರತೆ, ಕಾಡು ಹಂದಿ, ಮುಳ್ಳು ಹಂದಿ, ಜಿಂಕೆ ಮುಂತಾದ ಪ್ರಾಣಿಗಳು ಕಂಡು ಬರುತ್ತವೆ.ಆದರೆ ಇದು ಅಭಯಾರಣ್ಯವಲ್ಲದ್ದರಿಂದ ಕಾಣಲು ಸಿಗುವುದು ಅಪರೂಪ. ಇತ್ತೀಚಿನ ವರದಿ ಪ್ರಕಾರ ದೇವರಾಯನದುರ್ಗದಲ್ಲಿ ಹುಲಿ ಕೂಡ ಪತ್ತೆಯಾಗಿದೆ. ದುರ್ಗದ ಮೇಲೆ ಸರ್ಕಾರದ ಪ್ರವಾಸಿ ಬಂಗಲೆಗಳಿವೆ. ಬೆಟ್ಟದ ತುದಿಯಿಂದ ನಿಂತು ನೋಡಿದರೆ ಸುಮಾರು 15 ಕಿ.ಮೀ. ದೂರದಲ್ಲಿರುವ ಶಿವಗಂಗೆ ಬೆಟ್ಟ ಕಾಣುತ್ತದೆ. ಸುತ್ತಲೂ ಹತ್ತಾರು ಕೆರೆಗಳು ನೀರಿನಿಂದ ತುಂಬಿರುವುದೂ ಸಹ ಗೋಚರಿಸುತ್ತದೆ. ಇಲ್ಲಿನ ನರಸಿಂಹ ದೇವರ ಜಾತ್ರೆಯು ಬಹಳ ಪ್ರಸಿದ್ದ. ಪ್ರತಿ ವರ್ಷವೂ ಇಲ್ಲಿ ನೆಡೆಯುವ ಜಾತ್ರೆಗೆ ಸಾವಿರಾರು ಜನರು ಸೇರುತ್ತಾರೆ. ಹತ್ತಿರದಲ್ಲಿರುವ ದುರ್ಗದ ಹಳ್ಳಿಯಲ್ಲಿರುವ ಶ್ರೀ ವಿದ್ಯಾಶಂಕರ ಸ್ವಾಮಿಯ ದೇವಾಲಯವೂ ಬಹಳ ಸುಂದರವಾಗಿದೆ. ಈ ದೇವಾಲಯವು ನೂರಾರು ವರ್ಷಗಳ ಇತಿಹಾಸವನ್ನು ಹೊಂದಿದೆ