ವಿಷಯಕ್ಕೆ ಹೋಗು

ಸದಸ್ಯ:Rashwin403/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
                                    ಶನಿ ಗ್ರಹಕ್ಕೆ ಕಾಟ ಕೊಡುತ್ತಿರುವ ಭೀಕರ ಸುಂಟರಗಾಳಿ!


ರಾಜಾ ವಿಕ್ರಮ ಮತ್ತು ಶನಿ ದೃಷ್ಟಿ: ಇಡೀ ದೇವರುಗಳಲ್ಲೆಲ್ಲ ಶನಿ ದೇವರನ್ನು ಕಂಡರೆ ಹಲವರಿಗೆ ಭಯ, ಅದರಿಂದಾಗಿ ಜಾಸ್ತಿ ಭಕಿಯ್ತೂ ಎನ್ನಬಹುದು. ಶನಿ ದೃಷ್ಟಿ ಬಿದ್ದವರ ಮೇಲಂತೂ ಶನಿಯು ಉಗ್ರ ಪ್ರತಾಪಿಯಂತೆ ಉಪಟಳ ಕೊಟ್ಟು ಭೀಕರ ಶಿಕ್ಷೆ ನೀಡುತ್ತಾನೆಂದು ಹಲವು ಭಕ್ತರು ಭಾರಿ ಎಚ್ಚರಿಕೆ ಮತ್ತು ಭಯ-ಭಕ್ತಿಯಿಂದ ಅವನಿಗೆ ಪೂಜೆ ಸಲ್ಲಿಸುತ್ತಾರೆ. ಇದಕ್ಕೆ ಉದಾಹರಣೆಯಾಗಿ ಪುರಾಣ ಕಾಲದಲ್ಲಿ ರಾಜಾ ವಿಕ್ರಮ ಎಂಬುವನು ಅತ್ಯುತ್ತಮವಾಗಿ ಆಳುತ್ತಿದ್ದರೂ, ಶನಿ ದೇವರಿಗೆ ಪೂಜೆ ಸಲ್ಲಿಸದೇ ನಿರ್ಲಕ್ಷ್ಯ ವಹಿಸಿದ್ದರ ಫಲವಾಗಿ ಶನಿ ಅವನ ಮೇಲೆ ಉಗ್ರ ದೃಷ್ಟಿ ಬೀರಿ ರಾಜಾ ವಿಕ್ರಮ ತನ್ನ ರಾಜ್ಯವನ್ನೇ ಕಳೆದುಕೊಂಡು ದಯನೀಯವಾಗಿ ಬದುಕುವಂತೆ ಮಾಡುವ ಕಥೆ ಎಲ್ಲಿರಿಗೂ ಚಿರಪರಿಚಿತ. ಆದರೆ ವಾಸ್ತವವೆಂದರೆ ನಮ್ಮ ಖಗೋಳ ಭೌತಶಾಸ್ತ್ರ ಮತ್ತು ಅದಕ್ಕೆ ಪೂರಕವಾಗಿ ನಮ್ಮ ಭೂಮಿಯಿಂದ ದೂರದಲ್ಲಿರುವ ಇತರೆ ಗ್ರಹಗಳ ನಮ್ಮ ಜ್ಞಾನ, ಆ ಗ್ರಹಗಳ ಬಳಿಗೆ ಕಣ್ಣು ಹಾಯಿಸುವ ಪರಿಣಾಮಕಾರಿ ದೂರದರ್ಶಕಗಳು, ಆಕಾಶಯಾನಗಳು ಹೆಚ್ಚಿದಂತೆಲ್ಲ ಸೂರ್ಯನ ಸುತ್ತಲಿರುವ ಗ್ರಹ ಪರಿವಾರಗಳ ಕುರಿತು ನಮಗೆ ಹೆಚ್ಚಿನ ತಿಳುವಳಿಕೆ ಲಭಿಸಿದೆ. ಇದರಿಂದ ಜ್ಯೋತಿಷಿಗಳು ಮತ್ತು ಕಂದಾಚಾರಿಗಳ ಪುರಾಣ, ಭವಿಷ್ಯತ್-ನುಡಿಗಳೆಲ್ಲವೂ ಕಾಗೆ-ಗೂಬಕ್ಕನ ಕಥೆಗಳೆಂಬುದನ್ನು ಜನಸಾಮಾನ್ಯರು ತಿಳಿದುಕೊಳ್ಳುವ ಸ್ಥಿತಿಯಿದೆ. ಶನಿ ಗ್ರಹದ ಮೇಲೆರಗಿರುವ ಸುಂಟರಗಾಳಿ: ಶನಿ ಗ್ರಹದ ಉತ್ತರ ಧ್ರುವದಲ್ಲಿ ಭೀಕರ ಸ್ವರೂಪಿ ಸುಂಟರಗಾಳಿ ಎದ್ದಿದ್ದು, ಅದು ಇಡೀ ಶನಿ ಗ್ರಹದ ತುಂಬೆಲ್ಲ ಹರಡಿಕೊಂಡಿದೆ ಎಂದು ಅಮೇರಿಕಾದ ಕ್ಯಾಸಿನಿ ಗಗನನೌಕೆ ಮತ್ತು ಯೂರೋಪ್ ಗಗನ ವೀಕ್ಷಣಕೇಂದ್ರವು ಭೂಮಿಯಲ್ಲಿ ಅಳವಡಿಸಿರುವ ದೂರದರ್ಶಕಗಳೆರಡೂ ವರದಿ ಮಾಡಿವೆ. ಅಮೇರಿಕಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ನಾಸಾವು ಈ ಕ್ಯಾಸಿನಿ ಗಗನನೌಕೆಯನ್ನು ಅಂತರಿಕ್ಷಕ್ಕೆ ಕಳುಹಿಸಿಕೊಟ್ಟಿತ್ತು. ಈ ಸುಂಟರಗಾಳಿ ಅದೆಷ್ಟು ಬಲಯುತವಾಗಿದೆಯೆಂದರೆ ಅದು ಇಡೀ ಶನಿ ಗ್ರಹದ ವಾತಾವರಣದ ತುಂಬೆಲ್ಲ ಅನಿಲಭರಿತ ಧೂಳನ್ನು ಹರಡುತ್ತಿದೆ. ಕ್ಯಾಸಿನಿ ಗಗನನೌಕೆಯಲ್ಲಿದ್ದ ರೇಡಿಯೋ ಮತ್ತು ಪ್ಲಾಸ್ಮಾ ತರಂಗಾಂತರ ಉಪಕರಣಗಳು ಮೊದಲಿಗೆ ಸುಂಟರಗಾಳಿಯನ್ನು ಗಮನಿಸಿದವು. ಕ್ಯಾಸಿನಿ ಗಗನನೌಕೆಯ ಅತಿ ನೇರಳೆ ಮ್ಯಾಪಿಂಗ್ ಸ್ಪೆಕ್ಟ್ರೋಮೀಟರ್ ಎಂಬ ಉಪಕರಣವು ಈ ಸುಂಟರಗಾಳಿಯು ಹಿಂಸಾತ್ಮಕ ರೂಪ ತಳೆದು ಅಮೋನಿಯಾ ಅನಿಲವನ್ನು ಎಲ್ಲೆಡೆ ಹರಡುತ್ತಿದೆ ಎಂದು ದಾಖಲಿಸಿದೆ. ಈ ದೊಡ್ಡ ಸುಂಟರಗಾಳಿಯ ಅಗಲ ಸುಮಾರು 5,000 ಕಿಲೋ ಮೀಟರ್ ಇದೆ. ಈ ಸುಂಟರಗಾಳಿಯಿಂದ ಶನಿ ಗ್ರಹದ ವಾತಾವರಣದ ಗಾಳಿಯ ಚಲನೆಯು ತೀವ್ರತರದಲ್ಲಿ ಮಾರ್ಪಾಟಾಗಿದ್ದು ಅಲ್ಲಿನ ಶಕ್ತಿ ಮತ್ತು ವಸ್ತುಗಳನ್ನು ದೂರ ಪ್ರದೇಶಗಳಿಗೆ ದಿಕ್ಕಾಪಾಲಾಗಿ ಚೆಲ್ಲಾ ಪಿಲ್ಲಿಯಾಗಿಸಿದೆ.