ಸದಸ್ಯ:Bhanu nagaraju/ನನ್ನ ಪ್ರಯೋಗಪುಟ
ಕನ್ನಡ ರಾಜ್ಯೋತ್ಸವ ನಾವು ಪ್ರತಿ ನವಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ.ಅಲ್ಲಲ್ಲಿ ಹರಿದು ಹಂಚಿ ಹೋಗಿದ್ದ ಕರ್ನಾಟಕದ ಭಾಗಗಳನ್ನು ಒಂದುಗೂಡಿಸಿ ಕರ್ನಾಟಕ ರಾಜ್ಯವನ್ನು ಏಕೀಕರಣ ಮಾಡಿದ ದಿನವದು. ಇದು ಕನ್ನಡಿಗರ ಹೆಮ್ಮೆಯ ಹಬ್ಬ...ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಡಗಿದೆ.
ಇತಿಹಾಸ ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು,ಕರ್ನಾಟಕ ಏಕೀಕರಣ ಚಳುವಳಿಯನ್ನು ೧೯೦೫ರಲ್ಲಿ ಪ್ರಾರಂಭಿಸಿದರು.೧೯೫೦ರಲ್ಲಿ,ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು,ಭಾಶೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪಗೊಂಡವು.ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
೧೯೫೬ರ ನವೆಂಬರ್ ೧ರಂದು,ಮದ್ರಾಸ್,ಮುಂಬಯಿ,ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ,ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
ಆಚರಣೆ ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತದೆ.